ಎಂಇಎಸ್ ಹಿಂದೆ ಅನೇಕ ಕಾಣದ ಕೈಗಳಿವೆ : ಶಾಸಕ ಅಮರೇಗೌಡ
Team Udayavani, Dec 19, 2021, 2:44 PM IST
ಕುಷ್ಟಗಿ: ನಮ್ಮ ರಾಜ್ಯದ 224 ಶಾಸಕರು ಭಾಗವಹಿಸುವ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿಯೇ ಗಮನ ಸೆಳೆಯಲು ಈ ಆಟ ಆಡುತ್ತಿದ್ದು, ಅವರ ಆಟ ಎಂದಿಗೂ ನಡೆಯದು ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಎಂಇಎಸ್ ಸಂಘಟನೆ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದರು.
ಇಲ್ಲಿನ ತಾಲೂಕು ಕ್ರೀಡಾಂಗಣದ ಆವರಣದಲ್ಲಿ ನೂತನ ಒಳಾಂಗಣ ಕ್ರೀಡಾಂಗಣದ ಲೋಕಾರ್ಪಣೆಗೊಳಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬೇರೆ ಸಮಯದಲ್ಲಿ ತೆಪ್ಪಗೆ ಇರುವ ಎಂಇಎಸ್ ಸಂಘಟನೆ, ಅಧಿವೇಶನದ ಸಂಧರ್ಭದಲ್ಲಿ ಕಿಡಕೇಡಿತನ ಪ್ರದರ್ಶಿಸುತ್ತಿದೆ. ಬಿಜೆಪಿ ಸರ್ಕಾರದಲ್ಲಿ ನಡೆದಿರುವ ಈ ಪ್ರಕರಣದ ಬಗ್ಗೆ ಆ ಪಕ್ಷವನ್ನು ಧೂಷಿಸುವುದು ಸರಿಯಲ್ಲ. ಈ ಹಿಂದೆ ಎಲ್ಲಾ ಸರ್ಕಾರದ ಅವಧಿಯಲ್ಲೂ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡಾಟಿಕೆ ಮೆರೆದ ಇತಿಹಾಸವಿದೆ. ಬೆಳಗಾವಿ ತಮ್ಮದಾಗಿಸಲು ಪದೇ ಪದೇ ಮಹಾಮೇಳವ ಮೂಲಕ ಕಿಡಿಗೇಡಿತನ ಕೃತ್ಯಕ್ಕೆ ಇಳಿದಿದೆ. ಈ ಸಂಘಟನೆಯ ಹಿಂದೆ ಅನೇಕ ಕಾಣದ ಕೈಗಳಿವೆ ಎಂದರು.
ಎಂಇಎಸ್ ಏನೇ ಆಟವಾಡಲಿ ಅದೇನು ನಡೆಯದು. ನಮ್ಮ ಪೊಲೀಸ್ ಇಲಾಖೆ ಪ್ರಖರವಾಗಿದ್ದು ನಿಷ್ಠೆಯಿಂದ ಕೆಲಸ ನಿರ್ವಹಿಸುತ್ತಿದೆ. ಅಂತವರಿಗೆ ಉಗ್ರ ಶಿಕ್ಷೆ ವಿಧಿಸಲು ಸರಕಾರಕ್ಕೆ ಒತ್ತಾಯಿಸುತ್ತೇನೆ. ಬೆಳಗಾವಿಯಲ್ಲಿ ದೇಶಭಕ್ತ ಸಂಗೊಳ್ಳಿ ರಾಯಣ್ಣ ಮೂರ್ತಿ ವಿರೂಪಗೊಳಿಸಿವ ನೀಚತನದ ಪರಮಾವಧಿಯಾಗಿದೆ. ಸದರಿ ಕಿಡಗೇಡಿಗಳನ್ನು ಪೊಲೀಸರು ಬಂಧಿಸಿರುವ ಬಗ್ಗೆ ಮಾಧ್ಯಮದ ಮೂಲಕ ತಿಳಿದುಕೊಂಡಿರುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.