ರಾಜಕಾರಣದಲ್ಲಿ ಡೆಡ್ಲೈನ್ ಇಲ್ಲ: ಸುಮಲತಾ
Team Udayavani, May 29, 2020, 7:02 PM IST
ಮದ್ದೂರು: ರಾಜಕಾರಣದಲ್ಲಿ ಯಾವುದೇ ಡೆಡ್ಲೈನ್ ಹಾಕಿಕೊಂಡು ಕೆಲಸ ಮಾಡಲು ಸಾಧ್ಯವಿಲ್ಲ. ಇದು ನಿರಂತರ ಕಲಿಕಾ ಕ್ಷೇತ್ರವಾಗಿರುವುದರಿಂದ ನಾನೂ ಕೂಡ ಅದೇ ಹಾದಿಯಲ್ಲಿ ಸಾಗುತ್ತಿದ್ದೇನೆ ಎಂದು ಸಂಸದೆ ಸುಮಲತಾ ಸ್ಪಷ್ಟಪಡಿಸಿದರು.
ಪಟ್ಟಣದಲ್ಲಿ ಶುಕ್ರವಾರ ಅಂಬರೀಶ್ ಹುಟ್ಟುಹಬ್ಬದ ಅಂಗವಾಗಿ ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಂಸದೆಯಾದ ಒಂದೇ ವರ್ಷದಲ್ಲಿ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲಾಗುವುದಿಲ್ಲ. ಎಲ್ಲವನ್ನೂ ಸಂಪೂರ್ಣವಾಗಿ ತಿಳಿದು ಕ್ಷೇತ್ರದಲ್ಲಿ ಪ್ರವಾಸ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.
ಸಂಸದರ ನಿಧಿ ಬಳಕೆಯಲ್ಲಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಇದು ನಮ್ಮ ಕಾರ್ಯವೈಖರಿಯನ್ನು ಸಾಬೀತು ಪಡಿಸುತ್ತದೆ ಎಂದು ತಮ್ಮ ಅಧಿಕಾರದ ಸದ್ಬಳಕೆಯನ್ನು ಸಮರ್ಥಿಸಿಕೊಂಡರು.
ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಹೆಚ್ಚಾಗಿ ಹರಡಿಲ್ಲ. ಮುಂಬೈನಿಂದ ಬಂದವರಲ್ಲಿ ಮಾತ್ರ ಸೋಂಕು ಕಾಣಿಸಿಕೊಂಡಿದೆ. ಅದು ಜಿಲ್ಲಾದ್ಯಂತ ಹರಡದಂತೆ ಮುನ್ನೆಚ್ಚರಿಕೆ ವಹಿಸಿದ್ದ ಕಾರಣ ಹೆಚ್ಚಿನ ಅನಾಹುತಗಳು ಸಂಭವಿಸಿಲ್ಲ. ಕೋವಿಡ್ 19 ನಿಯಂತ್ರಣ ಕುರಿತಂತೆ ಜಿಲ್ಲಾಧಿಕಾರಿ ಹಾಗೂ ಅಧಿಕಾರಿ ವರ್ಗ ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡಿದೆ ಎಂದು ಅಧಿಕಕಾರಿಗಳ ಕಾರ್ಯವೈಖರಿಯನ್ನು ಸಮರ್ಥಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.