ಗಡಿಯಾಚೆ ಕಲಿಕೆ ಮೂಲದಲ್ಲೇ ಕನ್ನಡ ಕಣ್ಮರೆ; ಗಡಿ ಭಾಗದ ಕನ್ನಡ ಶಾಲೆಗಳಲ್ಲಿನ ದುಃಸ್ಥಿತಿ
ಅಂಗನವಾಡಿ, ಪ್ರೌಢ ಶಾಲೆಗಳಲ್ಲಿ ಕನ್ನಡವೇ ಇಲ್ಲ
Team Udayavani, Dec 8, 2022, 7:05 AM IST
ಬೆಂಗಳೂರು: ಒಂದೆಡೆ ಗಡಿ ವಿಚಾರದಲ್ಲಿ ಕನ್ನಡಿಗರ ಮೇಲೆ ದಬ್ಟಾಳಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮತ್ತೂಂದೆಡೆ ಅದೇ ಗಡಿಯಲ್ಲಿ ಸದ್ದಿಲ್ಲದೆ ಕನ್ನಡ ಭಾಷೆ ಮೇಲೆ ನಿರಂತರ ದಾಳಿ ಆಗುತ್ತಿದೆ. ಈ ಮೂಲಕ ಕಲಿಕೆಯ ಮೂಲದಲ್ಲೇ ಕನ್ನಡವನ್ನು ಚಿವುಟಿ ಹಾಕುವ ಹುನ್ನಾರ ನಡೆಯುತ್ತಿದೆ.
ಮಹಾರಾಷ್ಟ್ರ ಸಹಿತ ಶೇ.90ರಷ್ಟು ಕನ್ನಡಿಗರು ವಾಸವಿರುವ ಆರು ರಾಜ್ಯಗಳ ಗಡಿಗಳಲ್ಲಿ ಮಾತೃ ಭಾಷೆ ಕನ್ನಡವಾಗಿದೆ. ಆದರೆ ಅಲ್ಲಿ ಒಂದೇ ಒಂದು ಕನ್ನಡ ಅಂಗನವಾಡಿ ಕೇಂದ್ರಗಳಿಲ್ಲ. ಪರಿಣಾಮ ಮಾತೃಭಾಷೆ ಕಲಿಕೆಗೆ ಅಲ್ಲಿ ಅವಕಾಶವೇ ಇಲ್ಲವಾಗಿದೆ.
ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಗೋವಾ, ಕೇರಳ ಮತ್ತು ತಮಿಳುನಾಡಿನಲ್ಲಿ ಅಂದಾಜು 12 ಗಡಿ ತಾಲೂಕುಗಳು ಬರುತ್ತವೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಜತ್ತ, ಅಕ್ಕಲಕೋಟೆ, ದಕ್ಷಿಣ ಸೊಲ್ಲಾಪುರ ಸಹಿತ ಮೂರು ಗಡಿ ತಾಲೂಕುಗಳು ಇವೆ. ಅಲ್ಲಿ 250ಕ್ಕೂ ಅಧಿಕ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಿದ್ದು, ಸುಮಾರು 40 ಸಾವಿರ ಮಕ್ಕಳು ಕಲಿಯುತ್ತಿದ್ದಾರೆ. ಆದರೆ ಒಂದೇ ಒಂದು ಕನ್ನಡ ಪ್ರೌಢಶಾಲೆಗಳಿಲ್ಲ. ಇದಕ್ಕಿಂತ ಮುಖ್ಯವಾಗಿ ಒಂದೇ ಒಂದು ಕನ್ನಡ ಅಂಗನವಾಡಿ ಕೇಂದ್ರಗಳಿಲ್ಲ. ಇದರಿಂದ ಮಕ್ಕಳು ಅನಿವಾರ್ಯವಾಗಿ ಮರಾಠಿ ಯನ್ನೇ ಕಲಿಯುವಂತಾಗಿದೆ. ಇದು ಹಲವು ದಶಕಗಳಿಂದ ಮುಂದುವರಿದಿದ್ದರೂ ರಾಜ್ಯ ಸರಕಾರ ಈ ಬಗ್ಗೆ ಚಕಾರ ಎತ್ತಿಲ್ಲ.
“ಮನವಿ ಮಾಡಿದ್ರೂ ಪ್ರಯೋಜನ ಆಗಿಲ್ಲ’
“ಮಹಾರಾಷ್ಟ್ರ ಮಾತ್ರವಲ್ಲ, ಆಂಧ್ರಪ್ರದೇಶದ ಮೆಹಬೂಬನಗರ, ರಾಯದುರ್ಗ, ಗೋವಾ ಪಟ್ಟಣ, ತಮಿಳುನಾಡಿನ ಹೊಸೂರು, ಕೃಷ್ಣಗಿರಿ, ತಳವಾಡಿ, ನೀಲಗಿರಿ ಸಹಿತ ಹಲವು ತಾಲೂಕುಗಳಲ್ಲೂ ಒಂದೇ ಒಂದು ಕನ್ನಡ ಅಂಗನವಾಡಿ ಕೇಂದ್ರಗಳಿಲ್ಲ. ಮನೆಯಲ್ಲಿ ಕನ್ನಡ ಕಲಿತು 3ನೇ ವರ್ಷಕ್ಕೆ ಅಂಗನವಾಡಿಗೆ ಬರುವ ಮಗುವಿಗೆ ತನಗೆ ತಿಳಿಯದ ಭಾಷೆ ಕಲಿಯಬೇಕಿದೆ. ಹೇಗೋ ಕನ್ನಡದಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿ ಬಂದರೆ, ಪ್ರೌಢಶಾಲೆಯಲ್ಲಿ ಮತ್ತದೇ ಸಮಸ್ಯೆ ಎದುರಿಸಬೇಕಿದೆ. ಈ ಬಗ್ಗೆ ಆಯಾ ರಾಜ್ಯಗಳ ಸರಕಾರಕ್ಕೆ ಮನವಿ ಮಾಡಲಾಗಿದೆ. ಆದರೂ ಪ್ರಯೋಜನವಾಗಿಲ್ಲ. ಕರ್ನಾಟಕ ಸರ್ಕಾರದ ಗಮನವನ್ನೂ ಸೆಳೆಯಲಾಗಿದೆ’ ಎಂದು ಗಡಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ತಿಳಿಸುತ್ತಾರೆ.
“ಈಗಾಗಲೇ ಸಾವಿರಾರು ಮಕ್ಕಳು ಅನಿವಾರ್ಯವಾಗಿ ಆಯಾ ರಾಜ್ಯಗಳ ಮಾಧ್ಯಮಗಳಿಗೆ ಅನಿವಾರ್ಯವಾಗಿ ವರ್ಗಾವಣೆ ಆಗಿದ್ದಾರೆ. ಆದರೆ ಪ್ರತಿವರ್ಷ ಎಷ್ಟು ಮಕ್ಕಳು ಪೂರ್ವಪ್ರಾಥಮಿಕ ಹಂತದಲ್ಲಿ ಕನ್ನಡ ಕಲಿಕೆಯಿಂದ ವಂಚಿತರಾಗುತ್ತಿದ್ದಾರೆ? ಭಾಷೆಯ ಮೇಲೆ ಇದು ಎಷ್ಟರ ಮಟ್ಟಿಗೆ ಪರಿಣಾಮ ಬೀರುತ್ತಿದೆ ಎಂಬ ಅಂಶಗಳ ಕುರಿತು ಯಾವುದೇ ಸಮೀಕ್ಷೆ ನಡೆದಿಲ್ಲ. ಈ ನಿಟ್ಟಿನಲ್ಲಿ ಅಧ್ಯಯನ ಆಗಬೇಕಿದೆ’ ಎಂದೂ ಹೇಳುತ್ತಾರೆ.
ಸಂವಿಧಾನದಲ್ಲೇ ನಿರ್ದೇಶನ
ಭಾಷಾ ಅಲ್ಪಸಂಖ್ಯಾಕರಿಗೆ ಅವರ ಮಾತೃ ಭಾಷೆಯಲ್ಲಿ ಕಲಿಕೆಗೆ ಅವಕಾಶ ಸಹಿತ ಎಲ್ಲ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಸಂವಿ ಧಾನದ ಕಲಂ 29ರಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಈ ಬಗ್ಗೆ ಕೇಂದ್ರದ ಗೃಹ ಸಚಿವಾಲಯದ ಭಾಷಾ ಅಲ್ಪಸಂಖ್ಯಾಕರ ವಿಭಾಗವೂ ನಿರ್ದೇಶನ ಕೂಡ ನೀಡಿದೆ. ಅದ್ಯಾವುದೂ ಪ್ರಯೋಜನವಾಗಿಲ್ಲ. ಮಹಾರಾಷ್ಟ್ರ – ಕರ್ನಾಟಕ ಗಡಿ ಭಾಗದಲ್ಲಿ ಕನ್ನಡ ಕಲಿಯಲು ಅವಕಾಶ ಇಲ್ಲದಿರುವುದರಿಂದ ಕನ್ನಡ ಕಳೆದುಹೋಗುತ್ತಿದೆ ಎಂದು ಸೊಲ್ಲಾಪುರದ ಆದರ್ಶ ಕನ್ನಡ ಬಳಗದ ಅಧ್ಯಕ್ಷ ಮಲಿಕ್‌ಜಾನ್ ಶೇಖ್ ಕಳವಳ ವ್ಯಕ್ತಪಡಿಸುತ್ತಾರೆ.
- ವಿಜಯಕುಮಾರ ಚಂದರಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.