Bhopal: ಪೊಲೀಸರಿಗೆ ಹೊಡೆದು ಕಳ್ಳನ ಬಿಡಿಸಿದರು!
Team Udayavani, Apr 9, 2023, 8:06 AM IST
ಭೋಪಾಲ್: ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯ ಪೊಲೀಸ್ ಠಾಣೆಯೊಂದರ ಮೇಲೆ 50 ಮಂದಿಯ ಗುಂಪೊಂದು ದಾಳಿ ನಡೆಸಿ, ಠಾಣೆಯಲ್ಲಿ ಬಂಧಿತನಾಗಿದ್ದ ಓರ್ವ ಡಕಾಯಿತ ಸೇರಿಂತೆ ಮೂವರನ್ನು ಬಿಡುಗಡೆಗೊಳಿಸಿರುವ ಘಟನೆ ನಡೆದಿದೆ. ನಾಲ್ವರು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿರುವ ಠಾಣೆಗೆ ಶನಿವಾರ ಬೆಳಗ್ಗೆ 3 ಗಂಟೆ ಸಮಯಕ್ಕೆ 50 ಜನರ ಗುಂಪೊಂದು ನುಗ್ಗಿ, ಪೊಲೀಸರ ಮೇಲೆ ದಾಳಿ ನಡೆಸಿದೆ. ಡಕಾಯಿತ ಹೇಮಾ ಮೆಗ್ವಾಲ್ ಸೇರಿ, ಆತನ ಜತೆಗಿದ್ದ ಇನ್ನಿಬ್ಬರು ಆರೋಪಿಗಳನ್ನು ಜೈಲಿನಿಂದ ಬಿಡುಗಡೆಗೊಳಿಸಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸರೆಯಾಗಿದೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.