![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jun 11, 2020, 6:20 AM IST
ಹೈದರಾಬಾದ್/ತಿರುವನಂತಪುರ: ತಿರುಪತಿ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಗುರುವಾರದಿಂದ ದೇವರ ದರ್ಶನ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಮುಂಜಾನೆಯಿಂದಲೇ ದೇಗುಲದ ಆವರಣದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ.
ದರ್ಶನ ಟಿಕೆಟ್ ಕೌಂಟರ್ ಬಳಿಯಲ್ಲಿ ಬುಧವಾರ ಮುಂಜಾನೆ 5 ಗಂಟೆಯಿಂದಲೇ ಬಹು ದೂರದವರೆಗೆ ಕ್ಯೂ ಇತ್ತು. ಕ್ಯೂನಲ್ಲಿ ಇದ್ದವರಿಗೆ ಸುಮಾರು 7 ಗಂಟೆಯ ಕಾಯುವಿಕೆ ಅನಂತರ ದರ್ಶನದ ಟಿಕೆಟ್ ಸಿಕ್ಕಿದೆ. ಹಲವಾರು ಜನರಿಗೆ ಜೂ. 11ರ ದರ್ಶನದ ಕೋಟಾ ಮುಗಿದ ಹಿನ್ನೆಲೆಯಲ್ಲಿ ಜೂ. 12ರ ಕೋಟಾದಡಿ ದರ್ಶನಕ್ಕೆ ಅವಕಾಶ ಸಿಕ್ಕಿದೆ. ಪ್ರತಿಯೊಬ್ಬ ಭಕ್ತರ ನಡುವೆ 6 ಅಡಿ ಅಂತರ, ಮಾಸ್ಕ್ ಕಡ್ಡಾಯ ಮುಂತಾದ ಕೊರೊನಾ ಮುನ್ನೆಚ್ಚರಿಕೆಗಳನ್ನು ಪಾಲಿಸಲಾಗುತ್ತಿದೆ ಎಂದು ಮಂಡಳಿ ತಿಳಿಸಿದೆ.
ಜೂ. 14ರಂದು ಶಬರಿಮಲೆ
ಜೂ.14ರ ಸಂಜೆ ಶಬರಿಮಲೆ ದೇವಸ್ಥಾನವನ್ನು ಮಾಸಿಕ ಪೂಜೆಗಾಗಿ ತೆರೆಯಲಾಗುವುದು ಎಂದು ತಿರುವಾಂಕೂರು ದೇವಸ್ವಂ ಮಡಳಿ ಅಧ್ಯಕ್ಷ ಎನ್. ವಾಸು ತಿಳಿಸಿದ್ದಾರೆ.
ನಾವು ದೇವಸ್ಥಾನದ ಅರ್ಚಕರ ಜತೆ ಚರ್ಚಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಜೂ. 19ರಂದು ದೇವಸ್ಥಾನದ ಉತ್ಸವವನ್ನೂ ಆಚರಿಸಲಾಗುತ್ತದೆ. ಸರದಿಯಲ್ಲಿ ನಿಂತು ದರ್ಶನ ಪಡೆಯಲು ಹೆಸರುಗಳನ್ನು ನೋಂದಾಯಿಸಿದವರಿಗೆ ಸನ್ನಿಧಿಗೆ ಹೋಗಲು ಅವಕಾಶ ನೀಡಲಾಗುವುದು. ಹೊರ ರಾಜ್ಯಗಳಿಂದ ಬರುವ ಭಕ್ತರು ತಮಗೆ ಕೋವಿಡ್-19 ಸೋಂಕು ಇಲ್ಲ ಎಂಬ ಅಧಿಕೃತ ವರದಿಯನ್ನು ಐಸಿಎಂಆರ್ ಮಾನ್ಯತೆ ಪಡೆದಿರುವ ಪ್ರಯೋಗಾಲಯಗಳಿಂದ ಪಡೆದಿರಬೇಕು ಎಂದಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.