ಚಿತ್ರದುರ್ಗ ಜಿಲ್ಲೆಯಲ್ಲಿ ಮತ್ತೆ ಮೂರು ಕೋವಿಡ್-19 ಪ್ರಕರಣ
Team Udayavani, Jun 12, 2020, 9:38 PM IST
ಚಿತ್ರದುರ್ಗ: ಕೋವಿಡ್-19 ಸೋಂಕಿನಿಂದ ಮುಕ್ತವಾಗಿದ್ದ ಜಿಲ್ಲೆಯ ಲೆಕ್ಕಕ್ಕೆ ಮತ್ತೆ ಮೂರು ಪ್ರಕರಣಗಳು ಶುಕ್ರವಾರ ಅ ಧಿಕೃತವಾಗಿ ಸೇರ್ಪಡೆಯಾಗಿವೆ. ಇದುವರೆಗೆ ಜಿಲ್ಲೆಯ ಕೋವಿಡ್ 19 ಗ್ರಾಫ್ ಸಂಖ್ಯೆ 40ರಲ್ಲಿತ್ತು. ಈಗ ಈ ಸಂಖ್ಯೆ 43ಕ್ಕೆ ಏರಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4. ಇದರಲ್ಲಿ 3 ಪ್ರಕರಣ ಚಿತ್ರದುರ್ಗ ಜಿಲ್ಲೆಯಲ್ಲೇ ಇದ್ದರೆ, ಮತ್ತೊಂದು ಮಣಿಪಾಲ ಆಸ್ಪತ್ರೆಯಲ್ಲಿದೆ.
ಈ ನಡುವೆ ಅತ್ಯಾಚಾರ ಹಾಗೂ ವಂಚನೆ ಪ್ರಕರಣದಲ್ಲಿ ಜೂ. 4 ರಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಯುವತಿಯೊಬ್ಬರಿಗೆ ಕೋವಿಡ್ 19 ಸೋಂಕು ತಗುಲಿದ್ದು, ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಚಿಕಿತ್ಸೆ ನೀಡಿದ ವೈದ್ಯರಿಗೆ ಕ್ವಾರಂಟೈನ್ ಮಾಡಲಾಗಿದೆ. ಭರಮಸಾಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಈ ಪ್ರಕರಣಕ್ಕೆ ಸಂಬಂಧಿ ಸಿದಂತೆ ಭರಮಸಾಗರ ಪಿಎಸ್ಐ ಸೇರಿದಂತೆ 9 ಪೊಲೀಸರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 7 ನೌಕರರು, ಜಿಲ್ಲಾಸ್ಪತ್ರೆಯ ಇಬ್ಬರು ವೈದ್ಯರು ಹೋಂ ಕ್ವಾರಂಟೈನ್ ಆಗಿದ್ದಾರೆ. ದೂರುದಾರ ಯುವತಿ ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜೂ. 10 ರಂದು ಬೆಂಗಳೂರಿನಲ್ಲಿ ಮಹಿಳೆಗೆ ಪಾಸಿಟಿವ್ ದೃಢಪಟ್ಟಿತ್ತು. ಮಹಿಳೆಯ ಟ್ರಾವೆಲ್ ಹಿಸ್ಟರಿಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಕಲೆ ಹಾಕುತ್ತಿದ್ದು, ಜಿಲ್ಲಾಸ್ಪತ್ರೆಯ ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್ಡಿಡಿ, ಎಚ್ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.