ಕೋಲ್ಕತಾ: ಕೆಎಂಸಿ ಚುನಾವಣೆ ವೇಳೆ ಬಾಂಬ್ ಸ್ಫೋಟ; ಮೂವರಿಗೆ ಗಾಯ
Team Udayavani, Dec 19, 2021, 12:54 PM IST
ಕೋಲ್ಕತಾ: ಭಾನುವಾರ ನಡೆಯುತ್ತಿರುವ ಕೆಎಂಸಿ ಚುನಾವಣೆಯ ವೇಳೆ ಕೋಲ್ಕತಾದ ಸೀಲ್ದಾಹ್ ಪ್ರದೇಶದಲ್ಲಿ ಬಾಂಬ್ ಸ್ಫೋಟಗೊಂಡು ಮೂವರು ಮತದಾರರು ಗಾಯಗೊಂಡಿದ್ದು, ಆ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡವರಲ್ಲಿ ಒಬ್ಬರು ಕಾಲನ್ನು ಕಳೆದುಕೊಂಡಿದ್ದು, ಉಳಿದ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮತದಾನದ ವೇಳೆ ವಾರ್ಡ್ ಸಂಖ್ಯೆ 36 ರ ಟಾಕಿ ಶಾಲೆಯ ಮುಂಭಾಗದಲ್ಲಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದು, ಮೂವರು ವ್ಯಕ್ತಿಗಳು ಕ್ಷೇತ್ರದ ಮತದಾರರಾಗಿದ್ದಾರೆ.
ಮುನ್ಸಿಪಲ್ ಚುನಾವಣೆ ಎಲ್ಲಾ 144 ವಾರ್ಡ್ಗಳಲ್ಲಿ ಮತದಾನ ನಡೆಯುತ್ತಿದ್ದು, ಕೋಲ್ಕತಾ ಪೊಲೀಸರು ಸುಮಾರು 23,000 ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.