ಕೋವಿಡ್ ರಣಕೇಕೆ : ರಾಜ್ಯದಲ್ಲಿಂದು 19067 ಮಂದಿಗೆ ಸೋಂಕು, 81 ಸಾವು!
Team Udayavani, Apr 18, 2021, 6:43 PM IST
ಬೆಂಗಳೂರು : ದೇಶದಲ್ಲಿ ಕೋವಿಡ್ ಎರಡನೇ ಅಲೆ ಆರಂಭವಾಗಿದ್ದು, ದಿನೇ ದಿನೇ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇವೆ. ಕಳೆದ 24 ಗಂಟೆಗಳ ಅವಧಿಯಲ್ಲಿ (ದಿನಾಂಕ : 17.04. 2021, 00:00 ರಿಂದ 23 : 59ರವರೆಗೆ) ಬರೋಬ್ಬರಿ 19067 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರೀಯ ಪ್ರಕರಣಗಳ ಸಂಖ್ಯೆ 133543ಕ್ಕೆ ಏರಿಕೆಯಾಗಿದೆ.
ಇನ್ನು ಕೋವಿಡ್ ಮಹಾಮಾರಿಯಿಂದ ರಾಜ್ಯದಲ್ಲಿ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದ್ದು, ಇಂದು 81 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೋನಾದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 13351ಕ್ಕೆ ಏರಿಕೆಯಾಗಿದೆ.
ಇಂದು ಕೋವಿಡ್ ಸೋಂಕಿನಿಂದ ಗುಣಮುಖರಾಗಿ 4603 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ರಾಜ್ಯದಲ್ಲಿ ಕೋವಿಡ್ ನಿಂದ ಗುಣಮುಖರಾಗಿ ಬರೋಬ್ಬರಿ 1014152 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರಿನಲ್ಲಿ ಹೆಚ್ಚು ಪ್ರಕರಣಗಳು : ಇಂದು ಬೆಂಗಳೂರಿನಲ್ಲಿ 12793 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 60 ಜನ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು