ಪಾರಂಪರಿಕ ತಾಣಗಳ ರಕ್ಷಣೆ ನಮ್ಮೆಲ್ಲರ ಹೊಣೆ : ಇಂದು ವಿಶ್ವ ಪರಂಪರೆ ದಿನ


Team Udayavani, Apr 18, 2021, 7:00 AM IST

ಪಾರಂಪರಿಕ ತಾಣಗಳ ರಕ್ಷಣೆ ನಮ್ಮೆಲ್ಲರ ಹೊಣೆ : ಇಂದು ವಿಶ್ವ ಪರಂಪರೆ ದಿನ

ಪಾರಂಪರಿಕ ಸ್ವತ್ತುಗಳು ಮತ್ತು ತಾಣಗಳ ಪ್ರಾಮುಖ್ಯವನ್ನು ಗುರುತಿಸಿ ಸಂರಕ್ಷಿಸುವ ಮತ್ತು ಇವುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ 1983ರಿಂದ ಯುನೆಸ್ಕೋದ ನೇತೃತ್ವದಲ್ಲಿ ವಿಶ್ವಾದ್ಯಂತ ಪ್ರತೀ ವರ್ಷ ಎಪ್ರಿಲ್‌ 18 ರಂದು ವಿಶ್ವ ಪರಂಪರೆ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಅಂಗವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಂಘಿಕ ಪ್ರಯತ್ನಗಳನ್ನು ನಡೆಸುವ ಮೂಲಕ ವಿಶ್ವದ ಪ್ರತಿಯೊಂದೂ ಭಾಗದಲ್ಲಿರುವ ಐತಿಹಾಸಿಕ ಸ್ಮಾರಕಗಳು ಮತ್ತು ತಾಣಗಳನ್ನು ರಕ್ಷಿಸುವ ಕಾರ್ಯವನ್ನು ಮಾಡಲಾಗುತ್ತಿದೆ.

1,121 ವಿಶ್ವದ ತಾಣಗಳು
ಈವರೆಗೆ ವಿಶ್ವದ 167 ರಾಷ್ಟ್ರಗಳ ಒಟ್ಟು 1,121 ತಾಣಗಳಿಗೆ ವಿಶ್ವ ಪರಂಪರೆಯ ತಾಣದ ಮಾನ್ಯತೆ ನೀಡಲಾಗಿದೆ. ಇವುಗಳ ಪೈಕಿ 869 ಸಾಂಸ್ಕೃತಿಕ ನೆಲೆಗಳಾಗಿದ್ದರೆ 213 ಪ್ರಾಕೃತಿಕ ತಾಣಗಳು ಮತ್ತು 39 ತಾಣಗಳು ಈ ಎರಡರ ಮಹತ್ವವನ್ನೂ ಹೊಂದಿವೆ.

ಈ ವರ್ಷದ ಧ್ಯೇಯವಾಕ್ಯ
“ಸಂಕೀರ್ಣ ಇತಿಹಾಸ, ವೈವಿಧ್ಯಮಯ ಭವಿಷ್ಯ’-ಎಲ್ಲ ಧರ್ಮದ ಜನರು ಭಿನ್ನಾಭಿಪ್ರಾಯಗಳೆಲ್ಲವನ್ನೂ ಬದಿಗಿರಿಸಿ ಒಗ್ಗೂಡಿ ಏಕತೆಯ ಸಂದೇಶವನ್ನು ಸಾರೋಣ ಎಂಬ ಧ್ಯೇಯದೊಂದಿಗೆ ಈ ಬಾರಿಯ ವಿಶ್ವ ಪರಂಪರೆ ದಿನವನ್ನು ಆಚರಿಸಲಾಗುತ್ತಿದೆ.

ಸೇರ್ಪಡೆ ಪ್ರಕ್ರಿಯೆ
ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಸೇರ್ಪಡೆಯಾದ ಸ್ಥಳಗಳು ಆಯಾಯ ದೇಶದ ಭಾಗವಾಗಿ ಉಳಿಯುತ್ತದೆ ಮತ್ತು ಅಂತಾರಾಷ್ಟ್ರೀಯ ಸಮುದಾಯದ ಹಿತದೃಷ್ಟಿಯಿಂದ ಅದರ ರಕ್ಷಣೆಗೆ ಯುನೆಸ್ಕೋ ನೆರವಾಗುತ್ತದೆ. ವಿಶ್ವ ಪಾರಂಪರಿಕ ತಾಣಗಳೆಂದು ಘೋಷಿಸಲ್ಪಡುವ ತಾಣಗಳು ಅರಣ್ಯ, ಪರ್ವತ, ಸರೋವರ, ಮರುಭೂಮಿ, ಸ್ಮಾರಕ, ಕಟ್ಟಡ, ಸಂಕೀರ್ಣ ಅಥವಾ ನಗರವೂ ಆಗಿರಬಹುದು. ಮೊದಲಿಗೆ ವಿಶ್ವ ಪಾರಂಪರಿಕ ಸಮಿತಿಗೆ ಪಟ್ಟಿಗೆ ಸೇರಿಸಬೇಕೆಂದಿರುವ ಸ್ಥಳದ ನಾಮ ನಿರ್ದೇಶನವನ್ನು ಮಾಡಬೇಕಾಗುತ್ತದೆ. ಇದನ್ನು ಆಯಾಯ ದೇಶಗಳು ಮಾಡುತ್ತವೆ. 21 ಸದಸ್ಯ ರಾಷ್ಟ್ರಗಳನ್ನೊಳಗೊಂಡ ಯುನೆಸ್ಕೋದ ವಿಶ್ವ ಪರಂಪರೆಯ ತಾಣ ಸಮಿತಿಯು ಈ ತಾಣಗಳ ಅರ್ಹತೆಯನ್ನು ಪರಿಶೀಲಿಸಿ ಸೂಕ್ತವಾದವುಗಳನ್ನು ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಸೇರ್ಪಡೆಗೊಳಿಸುತ್ತದೆ. ಈ ಸಮಿತಿಯ ಸದಸ್ಯತ್ವವು ನಿಗದಿತ ಅವಧಿಯದಾಗಿದ್ದು ಸದಸ್ಯರಾಷ್ಟ್ರಗಳು ಬದಲಾಗುತ್ತಿರುತ್ತವೆ.

ವಿಶ್ವ ಪಾರಂಪರಿಕ ತಾಣ ಎಂದರೇನು?
ವಿಶ್ವ ಪರಂಪರೆಯ ತಾಣಗಳನ್ನು ನೈಸರ್ಗಿಕ ಅಥವಾ ಮಾನವ ನಿರ್ಮಿತ ಪ್ರದೇಶಗಳು ಅಥವಾ ಅಂತಾರಾಷ್ಟ್ರೀಯ ಪ್ರಾಮುಖ್ಯದ ಮತ್ತು ವಿಶೇಷ ರಕ್ಷಣೆಯ ಅಗತ್ಯವಿರುವ ಸಾಂಸ್ಕೃತಿಕ, ನೈಸರ್ಗಿಕ ಮತ್ತು ಐತಿಹಾಸಿಕ ಸ್ಥಳ ಅಥವಾ ಕಟ್ಟಡಗಳೆಂದು ವರ್ಗೀಕರಿಸಲಾಗಿದೆ.

ಈ ತಾಣಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಮಂಡಳಿ (ಯುನೆಸ್ಕೋ) ಅಧಿಕೃತವಾಗಿ ಗುರುತಿಸಿ ವಿಶ್ವ ಪಾರಂಪರಿಕ ತಾಣಗಳೆಂದು ಘೋಷಿಸುತ್ತದೆ. ಈ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಿ ಅದನ್ನು ಮುಂದಿನ ತಲೆಮಾರಿಗೆ ಪರಿಚಯಿಸುವ ಉದ್ದೇಶದೊಂದಿಗೆ ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳನ್ನು ಗುರುತಿಸುವ ಪ್ರಕ್ರಿಯೆಯನ್ನು ಆರಂಭಿಸಿತು.

ಯುನೆಸ್ಕೋ ನೆರವು
ಪ್ರತಿ ವರ್ಷ ಪಟ್ಟಿಯಲ್ಲಿರುವ ತಾಣಗಳಿಗೆ ಅಂದಾಜು 20 ಕೋ. ರೂ. ನಿಧಿಯನ್ನು ಯುನೆಸ್ಕೋ ವ್ಯಯಿಸುತ್ತದೆ. ಈ ನಿಧಿ ಬಿಡುಗಡೆಯಾಗಬೇಕಾದರೆ ಸ್ಥಳೀಯ ಸರಕಾರ, ಖಾಸಗಿ ದಾನಿಗಳು ಆರ್ಥಿಕ ನೆರವು ನೀಡುವುದು ಕಡ್ಡಾಯವಾಗಿದೆ. ಯುನೆಸ್ಕೋ ಮಾರ್ಗಸೂಚಿಯಂತೆಯೇ ಈ ತಾಣಗಳಲ್ಲಿ ಎಲ್ಲ ಅಭಿವೃದ್ಧಿ ಅಥವಾ ಸಂರಕ್ಷಣ ಕಾಮಗಾರಿಗಳು ನಡೆಯಬೇಕು.

6ನೇ ಸ್ಥಾನದಲ್ಲಿ ಭಾರತ
ಪ್ರಸ್ತುತ ಭಾರತವು 38 ವಿಶ್ವ ಪಾರಂಪರಿಕ ತಾಣಗಳನ್ನು ಹೊಂದಿದೆ. ಈ ಮೂಲಕ ಭಾರತ ವಿಶ್ವದಲ್ಲಿಯೇ ಆರನೇ ಸ್ಥಾನದಲ್ಲಿದೆ. 38 ತಾಣಗಳ ಪೈಕಿ 30 ಸಾಂಸ್ಕೃತಿಕ, 7 ಪ್ರಾಕೃತಿಕ ಮತ್ತು ಒಂದು ಇವೆರಡರ ಮಹತ್ವವನ್ನೂ ಹೊಂದಿರುವ ತಾಣಗಳಾಗಿವೆ. “ವಿಶ್ವ ಪಾರಂಪರಿಕ ತಾಣ’ಗಳ ಪಟ್ಟಿಗೆ ಸೇರ್ಪಡೆಗೊಳಿಸಲು ಭಾರತದಿಂದ ಶಾಂತಿನಿಕೇತನ ಮತ್ತು ಹೊಯ್ಸಳ ದೇವಾಲಯ ಸಮೂಹಗಳನ್ನು ಸೇರಿಸಲು ನಾಮನಿರ್ದೇಶನಕ್ಕೆ ಸಂಬಂಧಿಸಿದಂತೆ ಪೂರಕ ದಾಖಲೆಗಳನ್ನು ಯುನೆಸ್ಕೋಗೆ ಕಳುಹಿಸಲಾಗಿದೆ. ಇದಲ್ಲದೆ ದೇಶದ 42 ತಾಣಗಳನ್ನು ತಾತ್ಕಾಲಿಕ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.