ಶಿಕ್ಷಕರ ವರ್ಗಾವಣೆ: ಇಂದಿನಿಂದ ದಾಖಲೆಗಳ ಪರಿಶೀಲನೆ
Team Udayavani, Jan 12, 2023, 6:30 AM IST
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮಾ.10ಕ್ಕೆ ಪೂರ್ಣಗೊಳ್ಳಲಿದೆ ಎಂದು ಶಿಕ್ಷಣ ಇಲಾಖೆ ವರ್ಗಾವಣಾ ವೇಳಾಪಟ್ಟಿ ಪ್ರಕಟಿಸಿದೆ.
ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಪರಿಷ್ಕೃತ ವೇಳಾಪಟ್ಟಿಯನ್ನು ಇಲಾಖೆ ಬುಧವಾರ ಪ್ರಕಟಿಸಿದೆ. ಡಿ.28ರಂದು ಪ್ರಕಟಿಸಿದ್ದ ಹೆಚ್ಚುವರಿ ಶಿಕ್ಷಕರ ಕರಡು ಪಟ್ಟಿಯನ್ನು ಮರು ಪ್ರಕಟಿಸಿದ್ದು ಜ.12ರಿಂದ 16ರ ವರೆಗೆ ಹೆಚ್ಚುವರಿ ಶಿಕ್ಷಕರು ಸಲ್ಲಿಸಿರುವ ಆದ್ಯತೆಯಲ್ಲಿನ ದಾಖಲೆಗಳ ಪರಿಶೀಲನೆ ನಡೆಯಲಿದೆ.
ಕರಡು ಪಟ್ಟಿಯಿಂದ ಸಮಸ್ಯೆಗೆ ಒಳಗಾದ ಶಿಕ್ಷಕರು ಜ.16 ಮತ್ತು 17ರಂದು ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿಕೊಳ್ಳಬಹದು. ಮರುಹಂಚಿಕೆ ಕೌನ್ಸೆಲಿಂಗ್‌ಗೆ ಅರ್ಹರಾಗಿರುವ ಶಿಕ್ಷಕರ ಜ್ಯೇಷ್ಠತಾ ಪಟ್ಟಿಯನ್ನು ಜ.23ರಂದು ಪ್ರಕಟಿಸಲಾಗುತ್ತದೆ. ಜ.24ರಂದು ಬ್ಲಾಕ್ ಹಂತದಲ್ಲಿ ಸಮರ್ಪಕ ಮರುಹೊಂದಾಣಿಕೆ ಕೌನ್ಸೆಲಿಂಗ್ ನಡೆಯಲಿದೆ. ಜ.30ರಂದು ಜಿಲ್ಲಾ ಹಂತದಲ್ಲಿ ಮರು ಹೊಂದಾಣಿಕೆ ಪ್ರಕ್ರಿಯೆ ನಡೆಯಲಿದೆ.
ಫೆ.9ರಿಂದ 14ರ ವರೆಗೆ ಜಿಲ್ಲಾ ಹಂತದ ವರ್ಗಾವಣೆ ಕೌನ್ಸೆಲಿಂಗ್, ಫೆ.16ರಂದು ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್, ಫೆ.17ರಂದು ತಾಂತ್ರಿಕ ಸಹಾಯಕರ ಗಣಕೀಕೃತ ಕೌನ್ಸೆಲಿಂಗ್ ನಡೆಯಲಿದೆ.
ಫೆ.17ರಿಂದ ವಿಭಾಗೀಯ ಹಂತದ ಪ್ರಕ್ರಿಯೆಗಳು, ಮಾ.1ರಿಂದ ಅಂತರ್ ವಿಭಾಗೀಯ ಹಂತ ನಡೆಯಲಿದೆ. ಮಾ.10ರಂದು ಅಂತಿಮ ಜ್ಯೇಷ್ಠತಾ ಪಟ್ಟಿಯಂತೆ ಪರಸ್ಪರ ವರ್ಗಾವಣೆಗಳ ಗಣಕೀಕೃತ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ನಿರ್ದೇಶಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.