ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ
Team Udayavani, Dec 15, 2021, 10:17 AM IST
ಕುಷ್ಟಗಿ: ತಾಲೂಕಿನ ಬೊಮ್ಮನಾಳ ಗ್ರಾಮದ ಹೊರ ವಲಯದಲ್ಲಿ ಮಹಿಳೆಗೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಹಿಡಿದು ಹಿಗ್ಗಾ ಮುಗ್ಗ ಥಳಿಸಿದ್ದಲ್ಲದೇ, ಆತನಿಗೆ ಚಪ್ಪಲಿ ಹಾರ ಹಾಕಿ ಊರು ತುಂಬ ಮೆರವಣಿಗೆ ಮಾಡಿದ ಘಟನೆ ನಡೆದಿದೆ.
ಪ್ರಕಾಶ ಎನ್ನುವ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ ಎಂದು ತಿಳಿದು ಬಂದಿದೆ. ಈ ವ್ಯಕ್ತಿ ಹೊಲದಲ್ಲಿ ಕುರಿ ಹಟ್ಟಿಯಲ್ಲಿ ಕೆಲಸದಲ್ಲಿ ತೊಡಗಿದ್ದ ಮಹಿಳೆಯನ್ನು ಗೊಬ್ಬರದ ಚೀಲ ಎತ್ತುವಂತೆ ಕರೆದಿದ್ದಾನೆ. ಆ ಮಹಿಳೆ ಎತ್ತಲು ಬಂದ ವೇಳೆ ಆ ಮಹಿಳೆಯ ಕೈ ಹಿಡಿದು ಅತ್ಯಾಚಾರಕ್ಕೆ ಯತ್ನ ಮಾಡಿದ್ದಾನೆ. ಇದರಿಂದ ಭಯಗೊಂಡ ಮಹಿಳೆ ಆತನ ಕೈಯಿಂದ ಬಿಡಿಸಿಕೊಂಡು ಗ್ರಾಮಕ್ಕೆ ಬಂದು ತಮ್ಮ ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ಘಟನೆ ತಿಳಿದ ತಕ್ಷಣ ಕುರುಬ ಮತ್ತು ವಾಲ್ಮಿಕಿ ಸಮುದಾಯದ ನಡುವೆ ಗಲಾಟೆ ನಡೆದಿದೆ. ಮಹಿಳೆಯ ಕಡೆ ಕೆಲವರು ಆರೋಪಿ ಪ್ರಕಾಶನಿಗೆ ಚಪ್ಪಲಿ ಹಾರ ಹಾಕಿ, ಬೇವಿನ ಹಾರ ಹಾಕಿ ಊರು ತುಂಬ ಮೆರವಣಿಗೆ ಮಾಡಿದ್ದಲ್ಲದೆ ಮಹಿಳೆಯಿಂದ ಚಪ್ಪಲಿ ಏಟಿ ನಲ್ಲಿ ಬಡಿಸಿದ ವೀಡಿಯೋ ವೈರಲ್ ಆಗಿದೆ.
ಘಟನೆ ಸಂಬಂಧ ಎರಡೂ ಸಮುದಾಯದ ಮಧ್ಯೆ ಗಲಾಟೆ ನಡೆದಿದೆ. ಹನುಮಸಾಗರ ಪೊಲೀಸ್ ಠಾಣೆಯಲ್ಲಿ ತಡ ರಾತ್ರಿ ವರೆಗೂ ರಾಜಿ ಸಂಧಾನ ನಡೆಸುವ ಪ್ರಯತ್ನಗಳು ನಡೆದು ಕೊನೆಗೆ ಠಾಣೆಯಲ್ಲಿ ದೂರು ದಾಖಲಾಗಿದೆ. ಮಹಿಳೆ ಕಡೆಯಿಂದ ಅತ್ಯಾಚಾರಕ್ಕೆ ಯತ್ನ ಆರೋಪದಡಿ 27 ಜನರ ಮೇಲೆ ಕೇಸ್ ದಾಖಲಾಗಿದ್ದರೆ, ಆರೋಪಿ ಕಡೆಯಿಂದಲೂವ ಜಾತಿ ನಿಂದನೆ ಆರೋಪದಡಿ 27 ಜನರ ಮೇಲೆ ಪ್ರತಿದೂರು ದಾಖಲಾಗಿದೆ.
ಆರೋಪಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನು ಚಪ್ಪಲಿ ಹಾರ ಹಾಕಿ ಮೆರವಣಿಗೆಯಲ್ಲಿ ತೊಡಗಿದ 6 ಜನರನ್ನು ಪೊಲೀಸರು ಗುರುತು ಮಾಡಿದ್ದು, ಅವರಿಗೆ ಶೋಧ ಕಾರ್ಯ ನಡೆದಿದೆ ಎಂದು ಕೊಪ್ಪಳ ಎಸ್ಪಿ ಟಿ ಶ್ರೀಧರ್ ಅವರು ಉದಯವಾಣಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.