ಉಕ್ರೇನ್ ನಲ್ಲಿ ರಸ್ತೆ ಮಾರ್ಗದಲ್ಲಿ ವಿದ್ಯಾರ್ಥಿಗಳ ಸ್ಥಳಾಂತರ ಪ್ರಯತ್ನ: ಸಿಎಂ
ವಾಯು ಮಾರ್ಗದ ಮೂಲಕ ಸ್ಥಳಾಂತರ ಸಾಧ್ಯ ಆಗುತ್ತಿಲ್ಲ
Team Udayavani, Feb 25, 2022, 10:47 AM IST
ಬೆಂಗಳೂರು : ಉಕ್ರೇನ್ ನಲ್ಲಿ ಸಿಕ್ಕಿಕೊಂಡಿರುವ ರಾಜ್ಯದ ವಿದ್ಯಾರ್ಥಿಗಳೆಲ್ಲರೂ ಸುರಕ್ಷಿತವಾಗಿ ಇದ್ದಾರೆ, ಎಲ್ಲರ ಜತೆ ನಮ್ಮ ರಾಯಭಾರಿ ಕಚೇರಿ ಅಧಿಕಾರಿಗಳು ಸಂಪರ್ಕದಲ್ಲಿ ಇದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಶುಕ್ರವಾರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಾನು ಇವತ್ತು ನಮ್ಮ ವಿದೇಶಾಂಗ ಸಚಿವ ಜೈಶಂಕರ್ ಅವರ ಜತೆ ಮಾತಾಡಿದ್ದೇನೆ. ಸಂಪೂರ್ಣ ವಿವರಗಳನ್ನು ಅವರು ಪಡೆದುಕೊಂಡಿದ್ದಾರೆ. ಕರ್ನಾಟಕದ ಬಹಳಷ್ಟು ಮಕ್ಕಳು ಮೆಡಿಕಲ್ ಕಲಿಯಲು ಹೋಗಿದ್ದಾರೆ. ಆ ವಿದ್ಯಾರ್ಥಿಗಳು ನಮ್ಮ ಸಂಪರ್ಕದಲ್ಲಿ ಇದ್ದಾರೆ. ಅವರು ಸದ್ಯಕ್ಕೆ ಸುರಕ್ಷಿತ ಸ್ಥಳದಲ್ಲಿರಬೇಕು. ಭಾರತ ಸರ್ಕಾರ ಹಲವು ಪ್ರಯತ್ನಗಳನ್ನು ಮಾಡುತ್ತಿದೆ ಎಂದರು.
ರಷ್ಯಾ ಭಾಷೆ ಮಾತಾಡುವ ರಾಯಭಾರಿಗಳನ್ನು ಉಕ್ರೇನ್ ಗೆ ಕಳುಹಿಸಿದ್ದಾರೆ. ಅಲ್ಲಿಂದ ವಿದ್ಯಾರ್ಥಿಗಳನ್ನು ರಸ್ತೆಯ ಮಾರ್ಗದಲ್ಲಿ ಸ್ಥಳಾಂತರ ಮಾಡುವ ಪ್ರಯತ್ನಗಳು ಆಗುತ್ತಿವೆ. ವಾಯು ಮಾರ್ಗದ ಮೂಲಕ ಸ್ಥಳಾಂತರ ಆಗುತ್ತಿಲ್ಲ. ಈ ಸಂಬಂಧ ವಿದೇಶಾಂಗ ಮಟ್ಟದಲ್ಲಿ ಮಾತುಕತೆಗಳು ನಡೆಯುತ್ತಿವೆ. ಉಕ್ರೇನಿನ ಪಶ್ಚಿಮ ಭಾಗದಲ್ಲಿರುವವ ರಸ್ತೆ ಮಾರ್ಗದ ಮೂಲಕ ಸ್ಥಳಾಂತರ ಮಾಡಬಹುದೆಂಬ ಚಿಂತನೆ ನಡೆಯುತ್ತಿದೆ ಎಂದರು.
ಭಾರತೀಯ ರಾಯಭಾರಿ ಕಚೇರಿ ಹೇಳದ ಹೊರತು ಯಾರೂ ಹೋಗಬಾರದು. ಇಂಥ ಸಂದರ್ಭದಲ್ಲಿ ಸುಮ್ಮಸುಮ್ಮನೆ ಯಾರೂ ಬರಬಾರದು. ಸರಿಯಾದ ಸಂದರ್ಭ ನೋಡಿಕೊಂಡು ನಮ್ಮ ರಾಯಭಾರಿ ಕಚೇರಿ ಸಂದೇಶ ಕೊಡಲಿದೆ ಎಂದರು.
ನಮ್ಮವರಿಗೆ ಊಟ, ತಿಂಡಿಯ ವ್ಯವಸ್ಥೆ ಮಾಡುವಂತೆ ಹೇಳಿದ್ದೇವೆ. ನಮ್ಮ ಸರ್ಕಾರವೂ ಹೆಲ್ಪ್ ಲೈನ್ ಆರಂಭಿಸಿದೆ. ಭಾರತ ಸರ್ಕಾರವೂ ಹೆಲ್ಪ್ ಲೈನ್ ಆರಂಭಿಸಿದೆ. ಯುದ್ಧದ ಪರಿಸ್ಥಿತಿ ತಿಳಿಗೊಳ್ಳುವರೆಗೂ ಎಲ್ಲರೂ ಎಚ್ಚರಿಕೆಯಿಂದಿರಬೇಕೆಂದು ವಿದೇಶಾಂಗ ಇಲಾಖೆಯಿಂದ ಸೂಚನೆ ನೀಡಲಾಗಿದೆ.
ರಾಜ್ಯದ 91ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ MBBS ಕಲಿಯಲು ತೆರಳಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
MUST WATCH
ಹೊಸ ಸೇರ್ಪಡೆ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.