Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Team Udayavani, Dec 27, 2024, 3:35 PM IST
ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆ ಬೆಂಗಳೂರಿನಲ್ಲಿ ಕಿರುತೆರೆ ನಟನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಚರಿತ್ ಬಾಳಪ್ಪ(TV actor Charith Balappa) ಬಂಧಿತ ಕಿರುತೆರೆ ನಟ.
ಕನ್ನಡದ ʼಮುದ್ದುಲಕ್ಷ್ಮೀʼ ಸೇರಿದಂತೆ ತೆಲುಗಿನ ಹಲವು ಧಾರಾವಾಹಿಗಳಲ್ಲಿ ನಟಿಸಿ ಕಿರುತೆರೆ ಲೋಕದಲ್ಲಿ ಗಮನ ಸೆಳೆದಿರುವ ಚರಿತ್ ಬಾಳಪ್ಪ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆ ಅವರನ್ನು ಆರ್ಆರ್ ನಗರ ಠಾಣೆಯ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಪ್ರೀತಿಸುವ ನಾಟಕವಾಡಿ ಪರಿಚಯವಿರುವ ಗೆಳತಿಗೆ ಚರಿತ್ ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಯುವತಿ ವಾಸಿಸುತ್ತಿದ್ದ ಮನೆಗೆ ನುಗ್ಗಿ ಚರಿತ್ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಯುವತಿ ಹೇಳಿದ್ದಾಳೆ.
ಇದಲ್ಲದೆ ಯುವತಿಯ ಬಳಿ ಚರಿತ್ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಹಣ ಕೊಡದಿದ್ದರೆ ಖಾಸಗಿ ವಿಡಿಯೋ, ಫೋಟೋಗಳನ್ನು ಹರಿಬಿಡುವ ಬೆದರಿಕೆಯನ್ನು ಚರಿತ್ ಹಾಕಿದ್ದಾನೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಚರಿತ್ ವಿರುದ್ಧ ಲೈಂಗಿಕ ಕಿರುಕುಳ, ಹಲ್ಲೆ ಹಾಗೂ ಕೊಲೆಯ ಆರೋಪ ಕೇಳಿಬಂದಿದೆ. ಚರಿತ್ ಈಗಾಗಲೇ ಮದುವೆಯಾಗಿ ವಿಚ್ಚೇದನ ಪಡೆದಿದ್ದಾರೆ. ವಿಚ್ಚೇದನದ ಬಳಿಕವೂ ಮಾಜಿ ಪತ್ನಿಯ ಜತೆ ಹಲವು ಬಾರಿ ಚರಿತ್ ಕಿರಿಕ್ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಮಾಜಿ ಪತ್ನಿಯೂ ಚರಿತ್ ಮೇಲೆ ದೂರು ದಾಖಲಿಸಿದ್ದರು ಎನ್ನಲಾಗಿದೆ.
ವಿಚ್ಛೇದನ ಪರಿಹಾರ ಹಣಕ್ಕೆ ನೋಟಿಸ್ ಕಳುಹಿಸಿದ್ದಕ್ಕೆ ಮಾಜಿ ಪತ್ನಿಗೆ ಚರಿತ್ ಬೆದರಿಕೆ ಹಾಕಿದ್ದರು, ಈ ಹಿನ್ನೆಲೆಯಲ್ಲಿಅವರ ವಿರುದ್ಧ ಕಳೆದ ಜೂನ್ ತಿಂಗಳಲ್ಲಿ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
Martin: ಕಿರುತೆರೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಧ್ರುವ ಸರ್ಜಾ ನಟನೆಯ ʼಮಾರ್ಟಿನ್ʼ
BBK11: ದಯವಿಟ್ಟು ಬಿಗ್ ಬಾಸ್ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್
BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.