ಪಿಎಫ್ಐ: ಅಹವಾಲು ಸ್ವೀಕರಿಸಲು ಯುಎಪಿಎ ನ್ಯಾಯಾಧಿಕರಣ

Team Udayavani, Jan 28, 2023, 7:36 AM IST

court

ಬೆಂಗಳೂರು: ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ಹಾಗೂ ಅದರ ಅಂಗ ಸಂಸ್ಥೆಗಳ ನಿಷೇಧ ಬೆನ್ನಲ್ಲೇ ನಿಷೇಧಿತ ಸಂಘಟನೆಗಳ ಪರ ಮತ್ತು ವಿರೋಧ ಅಹವಾಲುಗಳನ್ನು ಅಲಿಸಲು “ಕಾನೂನು ಬಾಹಿರ ಚಟುವಟಿಕೆಗಳ ತಡೆ ನಿಯಂತ್ರಣ ಕಾಯ್ದೆ (ಯುಎಪಿಎ) ನ್ಯಾಯಾಧಿಕರಣ’ ರಾಜ್ಯಕ್ಕೆ ಆಗಮಿಸಲಿದೆ.

ಕೇಂದ್ರ ಸರಕಾರ ದಿಲ್ಲಿ ಹೈಕೋರ್ಟ್‌ನ ಮು| ನ್ಯಾ| ಗಳಾದ ದಿನೇಶ್‌ ಕುಮಾರ್‌ ಶರ್ಮಾ ನೇತೃತ್ವದಲ್ಲಿ ರಚಿಸಿರುವ ನ್ಯಾಯಾಧಿಕರಣ ಜ.28, 29 ಮತ್ತು 30ರಂದು ಬೆಂಗಳೂರಿನ ಬಾಲೂಬ್ರೂಹಿ ಅತಿಥಿ ಗೃಹದಲ್ಲಿ  ಪಿಎಫ್ಐ ಸಂಘಟನೆಯ ಪರ ಮತ್ತು ವಿರೋಧದ ವಾದಗಳನ್ನು ಮತ್ತು ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಿದೆ.  ಈ ವೇಳೆ ಕೇಂದ್ರದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌, ಎನ್‌ಐಎ ಹಿರಿಯ ಅಧಿಕಾರಿಗಳು, ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು, ಕೋರ್ಟ್‌ ಸಿಬಂದಿ ಸೇರಿ 20ಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

2022ರ ಸೆ.28ರಂದು ಪಿಎಫ್ಐ ಹಾಗೂ ಅದರ ಕೆಲ ಅಂಗ ಸಂಸ್ಥೆಗಳನ್ನು ಕೇಂದ್ರ ಸರಕಾರ ನಿಷೇಧಿಸಿತ್ತು. ಅದನ್ನು ಪ್ರಶ್ನಿಸಿ ಕೆಲ ವ್ಯಕ್ತಿಗಳು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ದಿಲ್ಲಿ ಕೋರ್ಟಿನ ಮುಖ್ಯನ್ಯಾಯ ಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಧೀಕರಣ ತೆರೆದು, ಸಂಘಟನೆ ನಿಷೇಧ ಕುರಿತ ಸಾಧಕ-ಬಾಧಕಗಳ ಮಾಹಿತಿ ಸಂಗ್ರಹ ಹಾಗೂ ವಿಚಾರಣೆ ನಡೆಸಲು ಸೂಚಿಸಿತ್ತು.

ಏನೆಲ್ಲ ವಿಚಾರಣೆ?: ಪಿಎಫ್ಐ ಕಾರ್ಯಕರ್ತರು  2016ರಲ್ಲಿ ಆರೆಸ್ಸೆಸ್‌ ಕಾರ್ಯಕರ್ತ ರುದ್ರೇಶ್‌, ಪ್ರವೀಣ್‌ ಪೂಜಾರಿ, 2017ರಲ್ಲಿ ಶರತ್‌, 2022ರಲ್ಲಿ ಪ್ರವೀಣ್‌ ನೆಟ್ಟಾರು ಸೇರಿ ಹಲವು ಹಿಂದೂ ಮುಖಂಡರನ್ನು ಹತ್ಯೆಗೈದಿದ್ದಾರೆ. ಜತೆಗೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿ ಬಂಧನಕ್ಕೊಳ ಗಾಗಿದ್ದಾರೆ.  ಹತ್ಯೆ ಪ್ರಕರಣಗಳ ತನಿಖೆ ನಡೆಸಿದ  ಪೊಲೀಸ್‌  ಇನ್‌ಸ್ಪೆಕ್ಟರ್‌, ಎಸಿಪಿ ಹಾಗೂ ಡಿಸಿಪಿಗಳಿಗೂ ನೋಟಿಸ್‌ ಕೊಟ್ಟು ನ್ಯಾಯಮೂರ್ತಿಗಳ ಎದುರು ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ಈ ಪ್ರಕರ ಣದ ಹೆಚ್ಚುವರಿ ತನಿಖೆ ನಡೆಸಿದ್ದ ಎನ್‌ಐಎ ಅಧಿಕಾರಿಗಳು ಕೂಡ ನ್ಯಾಯಾಧಿಕರಣದ ಎದುರು ಹಾಜರಾಗಲಿದ್ದಾರೆ.

ಟಾಪ್ ನ್ಯೂಸ್

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

2-madikeri

Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.