ಬಿಜೆಪಿಗೆ ಗುಡ್ ಬೈ ಎಂದಿದ್ದ ಯು.ಬಿ.ಬಣಕಾರ್ ಇಂದು ಕಾಂಗ್ರೆಸ್ ಸೇರ್ಪಡೆ
Team Udayavani, Nov 21, 2022, 1:16 PM IST
ಬೆಂಗಳೂರು: ಹಿರೇಕೆರೂರು ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಯು.ಬಿ.ಬಣಕಾರ್ ಇಂದು ಸಂಜೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸೇರಿದಂತೆ ಅನೇಕರು ಬಿಜೆಪಿ ನಾಯಕನನ್ನು ಸ್ವಾಗತಿಸಲಿದ್ದಾರೆ.
ಯು.ಬಿ.ಬಣಕಾರ್ ಹಿರೇಕೆರೂರು ಕ್ಷೇತ್ರದಲ್ಲಿ ಶಾಸಕರಾಗಿದ್ದರು. 2013ರಲ್ಲಿ ಬಿ.ಸಿ.ಪಾಟೀಲ್ ವಿರುದ್ಧ ಸೋಲು ಕಂಡಿದ್ದರು. ಬಳಿಕ 2018ರಲ್ಲೂ ಬಣಕಾರ್‍ಗೆ ಹಿನ್ನೆಡೆಯಾಗಿತ್ತು.
ಹಿರೆಕೆರೂರು ಕ್ಷೇತ್ರದಲ್ಲಿ ಜಯಗಳಿಸಿದ್ದ ಬಿ.ಸಿ.ಪಾಟೀಲ್ 16 ಮಂದಿ ಇತರ ಶಾಸಕರೊಂದಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿದ್ದರು. ಬಳಿಕ ರಚನೆಯಾದ ಬಿಜೆಪಿ ಸರ್ಕಾರದಲ್ಲಿ ಕೃಷಿ ಸಚಿವರಾಗಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಬಿ.ಸಿ.ಪಾಟೀಲ್ ಅವರಿಗೆ ಟಿಕೆಟ್ ನೀಡಲಿದೆ ಎಂಬ ಕಾರಣಕ್ಕೆ ಅಸಮಾಧಾನಗೊಂಡಿದ್ದ ಬಣಕಾರ್ ಇತ್ತೀಚೆಗೆ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಇದನ್ನೂ ಓದಿ:ವಾರದ ಹಿಂದೆಯೇ ಮಂಗಳೂರಿಗೆ ಬಂದಿದ್ದ ಶಾರೀಕ್; ನಾಗುರಿ ಘಟನೆಗೆ ಅಂತಾರಾಷ್ಟ್ರೀಯ ಉಗ್ರ ಸಂಘಟನೆ ಪ್ರಭಾವ
ಬೆಂಬಲಿಗರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಕಾಂಗ್ರೆಸ್ ಸೇರುವ ನಿರ್ಧಾರ ಕೈಗೊಂಡಿದ್ದರು. ಅದರಂತೆ ಇಂದು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಬಹುತೇಕ ಕಾಂಗ್ರೆಸ್ ಟಿಕೆಟ್‍ನಿಂದ ಹಿರೆಕೆರೂರು ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ 14 ಮಂದಿ ಶಾಸಕರಿಗೆ ಮುಂದಿನ ಚುನಾವಣೆಯಲ್ಲಿ ಪಾಠ ಕಲಿಸಲು ಕಾಂಗ್ರೆಸ್ ರಣತಂತ್ರ ರೂಪಿಸಿದೆ. ಅಷ್ಟು ಮಂದಿ ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಗಳ ಹುಡುಗಾಟದಲ್ಲಿ ತೊಡಗಿದೆ. ಬಿಜೆಪಿ ಅಥವಾ ಜೆಡಿಎಸ್ ಪಕ್ಷದಿಂದ ಆಗಮಿಸುವ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡು ಕಣಕ್ಕಿಳಿಸಲು ಮುಂದಾಗಿದೆ. ಅದರ ಮೊದಲ ಹಂತವಾಗಿ ಹಿರೆಕೇರೂರು ಕ್ಷೇತ್ರದಲ್ಲಿ ಆಪರೇಷನ್ ಹಸ್ತ ನಡೆದಿದೆ.
ಬಣಕಾರ್ ಅವರ ಸೇರ್ಪಡೆಯಿಂದ ಹಿರೆಕೆರೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಬಲ ಹೆಚ್ಚಾಗಲಿದೆ ಎಂದು ಪಕ್ಷದ ನಾಯಕರು ಅಭಿಪ್ರಾಯಪಟ್ಟಿದ್ದಾರೆ. ಹಾವೇರಿ ಮುಖ್ಯಮಂತ್ರಿ ಅವರ ತವರು ಜಿಲ್ಲೆಯಾಗಿದ್ದು ಅಲ್ಲಿಂದಲೇ ಬಿಜೆಪಿ ನಾಯಕರೊಬ್ಬರು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು, ಬಿಜೆಪಿಗೆ ಆಘಾತ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.