ಉಡುಪಿ ಜಿಲ್ಲೆಯಲ್ಲಿ ಜೂ.14ರ ವರೆಗೆ ಮದುವೆ ಸಮಾರಂಭ ನಿಷೇಧ : ಜಿಲ್ಲಾಧಿಕಾರಿ


Team Udayavani, Jun 5, 2021, 8:10 PM IST

ಉಡುಪಿ ಜಿಲ್ಲೆಯಲ್ಲಿ ಜೂ.14ರ ವರೆಗೆ ಮದುವೆ ಸಮಾರಂಭ ನಿಷೇಧ : ಜಿಲ್ಲಾಧಿಕಾರಿ

ಉಡುಪಿ: ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಜೂ.14ರ ಬೆಳಗ್ಗೆ 6ರವರೆಗೆ ಜಿಲ್ಲೆಯಾದ್ಯಂತ ಸಿ.ಆರ್‌.ಪಿ.ಸಿ ಸೆಕ್ಷನ್‌ 144(3)ನ್ನು ವಿಧಿಸಿದ್ದು, ಮದುವೆ ಸೇರಿದಂತೆ ಇನ್ನಿತರೆ ಸಭೆ ಸಮಾರಂಭಗಳನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ತಿಳಿದ್ದಾರೆ.

ಜಿಲ್ಲೆಯಲ್ಲಿ ಚಂಡಮಾರುತದಿಂದ ಹಾನಿಗೊಳಗಾದ ಪ್ರವಾಹ ಸಂರಕ್ಷಣಾ ರಚನೆಗಳು, ಸಮುದ್ರ ಕೊರೆತದಿಂದ ಉಂಟಾದ ಹಾನಿಯ ಪುನರ್‌ ಸ್ಥಾಪನೆ ಮತ್ತು ಇತರ ಮೂಲಸೌಕರ್ಯಗಳ ದುರಸ್ತಿ ಕಾಮಗಾರಿಗಳನ್ನು ಕೋವಿಡ್‌ ನಿಯಮಾವಳಿಯೊಂದಿಗೆ ಕಾಮಗಾರಿ ನಡೆಸಲು ಅವಕಾಶ ನೀಡಲಾಗಿದೆ. ಶವಸಂಸ್ಕಾರಕ್ಕೆ ಗರಿಷ್ಠ 5 ಜನರಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. ರಫ್ತುಗಳಲ್ಲಿ ನೇರವಾಗಿ ತೊಡಗಿಸಿಕೊಂಡಿರುವ ಎಲ್ಲ ಘಟಕಗಳು, ಸಂಸ್ಥೆಗಳು ಶೇ. 30ರಷ್ಟು ಸಿಬಂದಿಗಳನ್ನೊಳಗೊಂಡು ನಿಯಾವಳಿಯೊಂದಿಗೆ ಕರ್ತವ್ಯ ನಿರ್ವಹಿಸಲು ಅನುಮತಿಸಿದೆ. 1,000ಕ್ಕಿಂತ ಹೆಚ್ಚಿ ಸಿಬಂದಿಗಳಿರುವ ಸಂಸ್ಥೆ ಶೇ.10ರಷ್ಟು ಸಿಬಂದಿಗಳನ್ನು ಬಳಸಿಕೊಂಡು ಕೆಲಸ ಮಾಡ ಬಹುದಾಗಿದೆ ಎಂದು ಹೇಳಿದರು.

ನಿಗದಿಯಾಗಿರುವ ವಿಮಾನ ಪ್ರಯಾಣ ಹಾಗೂ ರೈಲು ಪ್ರಯಾಣಗಳನ್ನು ಹೊರತುಪಡಿಸಿ ಎಲ್ಲ ರೀತಿಯ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗಿದೆ. ಆಟೋ, ಕ್ಯಾಬ್‌, ಟ್ಯಾಕ್ಸಿಗಳ ಮೂಲಕ ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಿಗೆ ಪ್ರಯಾಣಿಸುವವರು ವಿಮಾನಯಾನ ಟಿಕೆಟ್‌ಗಳು ಹಾಗೂ ರೈಲು ಪ್ರಯಾಣದ ಟಿಕೆಟ್‌ಗಳನ್ನು ಪಾಸ್‌ಗಳಂತೆ ಬಳಸಿಕೊಳ್ಳಬಹುದಾಗಿದೆ. ತುರ್ತು ಸಂದರ್ಭದಲ್ಲಿ ಬಾಡಿಗೆಗೆ ಪಡೆದ ಹಾಗೂ ಈ ಮಾರ್ಗಸೂಚಿಗಳಲ್ಲಿ ಅನುಮತಿಸಿರುವಂತೆ ಸಂಚರಿಸುವ ಟ್ಯಾಕ್ಸಿ (ಆಟೋರಿಕ್ಷಾಗಳೂ ಸೇರಿದಂತೆ) ಹಾಗೂ ಕ್ಯಾಬ್‌ ಅಗ್ರಿಗೇಟರ್‌ ಸೇವೆಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲ ಟ್ಯಾಕ್ಸಿ ಹಾಗೂ ಕ್ಯಾಬ್‌ ಅಗ್ರಿಗೇಟರ್‌ ಸೇವೆಗಳನ್ನು ನಿರ್ಬಂಧಿಸಲಾಗಿದೆ ಎಂದು ನುಡಿದರು.

ಇದನ್ನೂ ಓದಿ :ಕೋವಿಡ್ : ರಾಜ್ಯದಲ್ಲಿಂದು 13800 ಹೊಸ ಪ್ರಕರಣ ಪತ್ತೆ; 25346 ಜನ ಗುಣಮುಖ

ಶೈಕ್ಷಣಿಕ ಸಂಸ್ಥೆಗಳು ಮುಚ್ಚಲ್ಪಟ್ಟಿದ್ದು, ಆನ್‌ಲೈನ್‌, ದೂರಶಿಕ್ಷಣವನ್ನು ಅನುಮತಿಯನ್ನು ಮುಂದುವರೆಸಲಾಗಿದೆ. ಪೊಲೀಸ್‌, ಸರಕಾರಿ ಅಧಿಕಾರಿಗಳು, ಆರೋಗ್ಯ ಕಾರ್ಯಕರ್ತರು, ಪ್ರವಾಸಿಗರು ಸೇರಿದಂತೆ ಸಿಕ್ಕಿಹಾಕಿಕೊಂಡಿರುವ ವ್ಯಕ್ತಿಗಳಿಗೆ ಮಾತ್ರ ಕ್ವಾರಂಟೈನ್‌ ಸೌಲಭ್ಯ ಮತ್ತು ಸ್ಟೇಪ್‌ ಡೌನ್‌ ಹಾಸ್ಪಿಟಲ್‌ಗ‌ಳ ಉದ್ದೇಶಗಳಿಗೆ ಮಾತ್ರ ಹೋಟೆಲ್‌ಗ‌ಳು, ರೆಸ್ಟೋರೆಂಟ್‌ಗಳು ಮತ್ತು ಆತಿಥ್ಯ ಗೃಹಗಳ ಸೇವೆಗಳನ್ನು ಬಳಸಲು ಅವಕಾಶವಿದೆ ಎಂದರು.

ಹೊಟೇಲ್‌ ಪಾರ್ಸೆಲ್‌ಗೆ ಮತ್ತು ಹೋಮ್‌ ಡೆಲಿವರಿ ಸೇವೆ ನೀಡಲು ಮಾತ್ರ ಅನುಮತಿಸಿದೆ. ಕಾಲುನಡಿಗೆಯಲ್ಲಿ ತೆರಳಿ ಪಾರ್ಸೆಲ್‌ ಗಳನ್ನು ಪಡೆಯಲು ಅವಕಾಶ ಇರುತ್ತದೆ. ಹೋಮ್‌ ಡೆಲಿವರಿ ಮಾಡುವ ಹೋಟೆಲ್‌ಗ‌ಳು ವಾಹನ ಉಪಯೋಗಿಸಲು ಅವಕಾಶ ವಿರುತ್ತದೆ. ದೇವಸ್ಥಾನ, ಶಾಂಪಿಂಗ್‌ ಮಾಲ್‌, ಸಿನೆಮಾ, ಜಿಮ್‌, ಕ್ರೀಡಾಂಗಣ, ಉದ್ಯಾನವನ ಸೇರಿದಂತೆ ಇತರೆ ಸಾರ್ವಜನಿಕ ಸ್ಥಳಗಳ ಭೇಟಿ ನಿಷೇಧಿಸಲಾಗಿದೆ.

ಆರೋಗ್ಯ, ವೈದ್ಯಕೀಯ ಶಿಕ್ಷಣ, ಪೊಲೀಸ್‌, ಗೃಹ ರಕ್ಷಕದಳ, ಬಂಧಿಖಾನೆ, ನಾಗರೀಕ ರಕ್ಷಣೆ, ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳು, ವಿಪತ್ತು ನಿರ್ವಹಣೆ, ಕಂದಾಯ, ಸಾರಿಗೆ , ಕಾರ್ಮಿಕ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸೇರಿದಂತೆ ಅಗತ್ಯವ ವಸ್ತುಗಳು ಹಾಗೂ ಸೇವೆಯನ್ನು ಪೂರೈಸುವ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯಾಚರಿಸಲಿದೆ. ಕೋವಿಡ್‌-19ರ ಕೆಲಸಗಳಿಗೆ ನಿಯೋಜಿಸಿರುವ ಎಲ್ಲ ಕಚೇರಿಗಳ ಅಧಿಕಾರಿಗಳು, ಸಿಬಂದಿಗಳು, ಸರಕಾರೇತರ ಸಂಸ್ಥೆಗಳ ಸ್ವಯಂ ಸೇವಕರು, ಅರಣ್ಯ ಇಲಾಖೆಯಿಂದ ಘೋಷಿಸಲ್ಪಟ್ಟ ಅರಣ್ಯ ಸಂಬಂಧಿ ಕೆಲಸ ಮತ್ತು ಕಾರ್ಯಾಚರಣೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಕೃಷಿ ಮತ್ತು ಸಂಬಂಧಿಸಿದ ಕೆಲಸಗಳು ಬೆಳಗ್ಗೆ 6ರಿಂದ 10ರವರೆಗೆ ಕೃಷಿ ಉಪಕರಣ ಬಾಡಿಗೆ ಕೇಂದ್ರಗಳಿಗೆ, ಯಂತ್ರೋಪಕರಣಗಳಿಗೆ ಸಂಬಂಧಿಸಿದ ಅಂಗಡಿಗಳು ಮತ್ತು ಗೋದಾಮುಗಳು ಸೇರಿದಂತೆ ಎಲ್ಲ ಕೃಷಿ ಮತ್ತು ತತ್ಸಂಬಂಧಿತ ಕಾರ್ಯಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಜತೆಗೆ ಮೀನುಗಾರಿಕೆ ಕೋಳಿ ಸಾಕಾಣಿಕೆ, ಮಾಂಸ, ಹೈನುಗಾರಿಕೆಯೂ ಸೇರಿದೆ ಎಂದರು.

ಮೇಲಿನ ಆದೇಶ ಪಾಲಿಸದವರ ವಿರುದ್ಧ ಕ್ರಿಮಿನಲ್‌ ಪ್ರಕರಣ ವಿಧಿಸಿ, ಕಠಿನ ಕ್ರಮಕೈಗೊಳ್ಳಲಾಗುತ್ತದೆ. ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.