ಕೋವಿಡ್ ಸೋಂಕಿಗೆ 70 ವರ್ಷದ ವೃದ್ಧ ಸಾವು! ಉಡುಪಿ ಜಿಲ್ಲೆಯಲ್ಲಿ ನಾಲ್ಕನೇ ಬಲಿ
Team Udayavani, Jul 13, 2020, 2:35 PM IST
ಉಡುಪಿ ; ಕೋವಿಡ್ ಸೋಂಕಿಗೆ 70 ವರ್ಷದ ವೃದ್ಧರೊಬ್ಬರು ಬಲಿಯಾಗಿದ್ದಾರೆ, ಇದರೊಂದಿಗೆ ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಬೈಂದೂರು ಮೂಲದ 70 ವರ್ಷದ ವೃದ್ಧರೊಬ್ಬರಿಗೆ ಕಳೆದ 15 ದಿನಗಳ ಹಿಂದೆ ಕೋವಿಡ್ ದೃಢ ಪಟ್ಟ ಹಿನ್ನೆಲೆಯಲ್ಲಿ ಅವರನ್ನು ಉಡುಪಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ: ನಿಯಂತ್ರಣಕ್ಕೆ ಬರುತ್ತಿಲ್ಲ ಸೋಂಕು ; ರಾಜ್ಯದಲ್ಲಿಂದು 2738 ಪ್ರಕರಣ; 73 ಸಾವು; 839 ಚೇತರಿಕೆ
ಆಸ್ಪತ್ರೆಗೆ ದಾಖಲಾದ ದಿನದಿಂದ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದ್ದು ಚೇತರಿಕೆ ಕಂಡಿದ್ದರು. ಆದರೆ ಇಂದು ಸಾವನ್ನಪ್ಪಿದ್ದಾರೆ ಎಂದು ಅರೋಗ್ಯ ಇಲಾಖೆ ದೃಢ ಪಡಿಸಿದೆ.
ರವಿವಾರ ಉಡುಪಿಯ ಕೋವಿಡ್-19 ಆಸ್ಪತ್ರೆಯಲ್ಲಿ ದಾವಣಗೆರೆ ಮೂಲದ ವೃದ್ಧರೊಬ್ಬರು ಮೃತಪಟ್ಟಿದ್ದರು. ಮೃತಪಟ್ಟ ವ್ಯಕ್ತಿ ದಾವಣಗೆರೆ ಮೂಲದವರಾದ ಕಾರಣ ಉಡುಪಿ ಜಿಲ್ಲೆಯ ಮೃತರ ಪಟ್ಟಿಯಲ್ಲಿ ಇದನ್ನು ಪರಿಗಣಿಸಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.