ಉಡುಪಿ ಜಿಲ್ಲೆ ಬಹುತೇಕ ಅನ್‌ಲಾಕ್‌ : ನಿಯಮ ಪಾಲಿಸದಿದ್ದರೆ ಕ್ರಿಮಿನಲ್ ಕೇಸ್ : ಜಿಲ್ಲಾಧಿಕಾರಿ


Team Udayavani, Jun 21, 2021, 7:44 PM IST

ಉಡುಪಿ ಜಿಲ್ಲೆ ಬಹುತೇಕ ಅನ್‌ಲಾಕ್‌ : ನಿಯಮ ಪಾಲಿಸದಿದ್ದರೆ ಕ್ರಿಮಿನಲ್ ಕೇಸ್ : ಜಿಲ್ಲಾಧಿಕಾರಿ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೋವಿಡ್‌ – 19 (ಕೋರೊನಾ ವೈರಾಣು ಕಾಯಿಲೆ – 2019) ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರಕಾರದ ನಿರ್ದೇಶನದಂತೆ ಕಾಲ ಕಾಲಕ್ಕೆ ಎಲ್ಲ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಕಟ್ಟು ನಿಟ್ಟಿನ ನಿರ್ಬಂಧಗಳ ಪರಿಣಾಮಕಾರಿ ಅನುಷ್ಟಾನದಿಂದಾಗಿ ಕೋವಿಡ್‌ ಪ್ರಕರಣಗಳ ದರವು ಗಣನೀಯವಾಗಿ ಇಳಿಕೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಪಾಸಿಟಿವಿಟಿ ಶೇ.5 ರಲ್ಲಿದೆ.

ಜಿಲ್ಲೆಗಳ ಕೋವಿಡ್‌ ಪಾಸಿಟಿವಿಟಿ ದರದ ಆಧಾರದ ಮೇಲೆ ಕೋವಿಡ್‌ ನಿಯಂತ್ರಣಕ್ಕಾಗಿ ಈ ವರೆಗೆ ತೆಗೆದುಕೊಳ್ಳಲಾದ ಎಲ್ಲ ಕಟ್ಟುನಿಟ್ಟಿನ ಕ್ರಮಗಳಿಂದ ಸಾಧಿಸಲಾದ ಗಣನೀಯ ಲಾಭವನ್ನು ಕಾಪಾಡಿಕೊಳ್ಳಲು ಎಲ್ಲ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಹಂತ-ಹಂತವಾಗಿ ಕೆಲವೊಂದು ಪ್ರಮುಖ ಮತ್ತು ಆರ್ಥಿಕ ಮತ್ತು ಇತರ ಚಟುವಟಿಕೆಗಳಿಗೆ ಅನುಮತಿ ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ರಾತ್ರಿ ಕರ್ಫ್ಯೂ ಜಾರಿ
ಜಿಲ್ಲೆಯಾದ್ಯಂತ ಜೂ.7ರವರೆಗೆ ಸಂಜೆ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕಟ್ಟುನಿಟ್ಟಿನ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಂತ್ಯದ ಕಫ್ಯೂ ಜಾರಿಯಲ್ಲಿರುತ್ತದೆ.

ಬಸ್ಸು ಸಂಚಾರಕ್ಕೆ ಅನುಮತಿ
ಜಿಲ್ಲೆಯಲ್ಲಿ ಬಸ್ಸುಗಳ ಸಂಚಾರವನ್ನು ಆಸನ ಸಾಮರ್ಥ್ಯದ ಶೇ.50 ರೊಂದಿಗೆ ಕೋವಿಡ್‌ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಬಸ್‌ ಗಳಲ್ಲಿ ನಿಂತುಕೊಂಡು ಪ್ರಯಾಣ ಮಾಡಲು ನಿರ್ಬಂಧಿಸಲಾಗಿದೆ.

ಇದನ್ನೂ ಓದಿ : ಬ್ರಿಮ್ಸ್ ಮೂಲ ಸೌಕರ್ಯಕ್ಕೆ ರೂ.10 ಕೋಟಿ ಹೆಚ್ಚುವರಿ ಅನುದಾನ : ಸಚಿವ ಪ್ರಭು ಚವ್ಹಾಣ್

ಕೈಗಾರಿಕೆಗಳು
ಎಲ್ಲ ಉತ್ಪಾದನಾ ಘಟಕಗಳು/ ಕೈಗಾರಿಕಾ ಸಂಸ್ಥೆಗಳು /ಕೈಗಾರಿಕೆಗಳು ತಮ್ಮ ಸಿಬಂದಿ ಸಾಮರ್ಥ್ಯದ ಶೇ.50% ರಷ್ಟು ಸಿಬಂದಿಗಳೊಂದಿಗೆ ಕಾರ್ಯಾಚರಿಸಲು ಅನುಮತಿಸಲಾಗಿದೆ. ಉಡುಪುತಯಾರಿಕೆಯಲ್ಲಿ ತೊಡಗಿರುವ ಘಟಕಗಳು/ ಕೈಗಾರಿಕಾ ಸಂಸ್ಥೆಗಳು / ಕೈಗಾರಿಕೆಗಳು ತಮ್ಮ ಸಿಬಂದಿ ಸಾಮರ್ಥ್ಯದ ಶೇ.30 ರಷ್ಟು ಸಿಬಂದಿಗಳೊಂದಿಗೆ ಕೋವಿಡ್‌ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಕಾರ್ಯಾಚರಿಸಲು ಅನುಮತಿಸಲಾಗಿದೆ.

ಎಸಿ ಹಾಕುವಂತಿಲ್ಲ
ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸದೇ ಎಲ್ಲ ಅಂಗಡಿಗಳಿಗೆ ಪ್ರತಿ ದಿನ ಬೆಳಗ್ಗೆ 6 ರಿಂದ ಸಂಜೆ 5 ಗಂಟೆಯವರೆಗೆ ತೆರೆಯಲು ಅನುಮತಿಸಲಾಗಿದೆ. ಆದರೆ ಹವಾನಿಯಂತ್ರಿತ ಅಂಗಡಿಗಳು, ವಾಣಿಜ್ಯ ಸಂಕೀರ್ಣ, ಮಾಲ್‌ಗ‌ಳು ಕಾರ್ಯನಿರ್ವಹಿಸಲು ಅವಕಾಶವಿರುವುದಿಲ್ಲ. ಮನೆಯಿಂದ ಸಾರ್ವಜನಿಕರು ಹೊರ ಬರುವುದನ್ನು ಕಡಿಮೆ ಮಾಡಲು ಕೋವಿಡ್‌ ನಿರ್ವಹಣೆಗಾಗಿರುವ ರಾಷ್ಟೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಎಲ್ಲ ವಸ್ತುಗಳ 24*7 ಹೋಂ ಡೆಲಿವರಿ ಸೇವೆಗಳನ್ನು ಪ್ರೋತ್ಸಾಹಿಸಲಾಗುವುದು.

ಪಬ್‌ಗಳಿಗೆ ಅನುಮತಿ ಇಲ್ಲ
ಹೊಟೇಲ್, ರೆಸ್ಟೋರೆಂಟ್‌, ಬಾರ್‌ ಮತ್ತು ಕ್ಲಬ್‌ ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತುಕೊಂಡು ಆಹಾರ ಸೇವಿಸಲು ಬೆಳಗ್ಗೆ 6ರಿಂದ ಸಂಜೆ 5ರ ವರೆಗೆ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಆದರೆ ಪಬ್‌ಗಳಿಗೆ ಅನುಮತಿ ಇಲ್ಲ. ಶೇ. 50 ಸಾಮರ್ಥ್ಯದೊಂದಿಗೆ ಲಾಡ್ಜ್ಗಳು ಮತ್ತು ರೆಸಾರ್ಟ್‌ಗಳಿಗೆ ಕೋವಿಡ್‌-19 ಪ್ರಮಾಣಿತ ಕಾರ್ಯವಿಧಾನವನ್ನು ಕಡ್ಡಾಯವಾಗಿ ಅನುಸರಿಸುವ ಷರತ್ತುಗಳೊಂದಿಗೆ ಅವಕಾಶ ನೀಡಲಾಗಿದೆ.

ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ
ಚಲನಚಿತ್ರ/ ಟಿ.ವಿ. ಧಾರವಾಹಿಗಳಿಗೆ ಸಂಬಂಧಿಸಿದಂತೆ ಕೋವಿಡ್‌ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.

ಕಟ್ಟಡ ನಿರ್ಮಾಣ
ಕಟ್ಟಡ ನಿರ್ಮಾಣ ಮತ್ತು ದುರಸ್ಥಿಗೆ ಅನುಮತಿಸಿದೆ. ವಾಕಿಂಗ್‌ ಮತ್ತು ಜಾಗಿಂಗ್‌ಗಾಗಿ ಬೆಳಿಗ್ಗೆ 5 ರಿಂದ ಸಂಜೆ 6 ಗಂಟೆಯವರೆಗೆ ಉದ್ಯಾನವನಗಳನ್ನು ಕೋವಿಡ್‌ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ತೆರೆಯಲು ಅನುಮತಿಸಿದೆ. ಆದರೆ ಯಾವುದೇ ಗುಂಪು ಚಟುವಟಿಕೆಗಳನ್ನು ನಡೆಸಲು ಅನುಮತಿಸಿಲ್ಲ. ಶೇ. 50 ಸಾಮರ್ಥ್ಯದೊಂದಿಗೆ ಜಿಮ್‌ ಗಳಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.

ಟ್ಯಾಕ್ಸಿ
ಗರಿಷ್ಠ 2 ಪ್ರಯಾಣಿಕರೊಂದಿಗೆ ಟ್ಯಾಕ್ಸಿಗಳು ಮತ್ತು ಆಟೋ ರಿûಾಗಳಿಗೆ ಸಂಚರಿಸಲು ಅನುಮತಿಸಿದೆ. ಹೊರಾಂಗಣ ಕ್ರೀಡೆಗಳಿಗೆ ಅನುಮತಿ ನೀಡಲಾಗಿದೆ. ಒಳಾಂಗಣ ಕ್ರೀಡೆಗಳಿಗೆ ಅವಕಾಶ ಇಲ್ಲ.

ಸಂಸ್ಥೆಯಲ್ಲಿ ಶೇ.50 ಮಾತ್ರ ಸಾಮಥ್ಯ
ಎಲ್ಲ ಸರಕಾರಿ/ ಖಾಸಗಿ ಕಚೇರಿಗಳಿಗೆ ಸಿಬಂದಿಯ ಶೇ. 50ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ. ಅಗತ್ಯ ಮತ್ತು ತುರ್ತು ಸೇವೆಗಳೊಂದಿಗೆ ವ್ಯವಹರಿಸುವ ಕಚೇರಿಗಳಿಗೆ ಅವುಗಳ ಅಗತ್ಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಲು ಅನುಮತಿಸಿದೆ. ಸಾಧ್ಯವಾದಷ್ಟು ಮನೆಯಿಂದ ಕೆಲಸವನ್ನು ನಿರ್ವಹಿಸಲು ಪ್ರೋತ್ಸಾಹಿಸುವಂತೆ ತಿಳಿಸಲಾಗಿದೆ. ಘನ ತ್ಯಾಜ್ಯ ವಿಲೇವಾರಿ ಸೇರಿದಂತೆ ಆರೋಗ್ಯ ವಲಯಕ್ಕೆ ಸಂಬಂಧಿಸಿದ ಕೌಶಲ್ಯ ತರಬೇತಿಗಳಿಗೆ ಅನುಮತಿಸಲಾಗಿದೆ.

ಮದುವೆಗಳು
ಈಗಾಗಲೇ ನಿಗದಿಯಾಗಿರುವ ಮದುವೆಯನ್ನು ಸರಳವಾಗಿ ಆಯಾ ಮನೆಗಳಲ್ಲಿ ಕುಟುಂಬದ ಸದಸ್ಯರು /ಸಂಬಂಧಿಕರು ಸೇರಿದಂತೆ 40 ಜನರನ್ನು ಒಳಗೊಂಡು ಈ ಕೆಳಗೆ ನಿಗದಿಪಡಿಸಿದ ಷರತ್ತಿಗೊಳಪಟ್ಟು ನಡೆಸಲು ಅನುಮತಿಸಲಾಗಿದೆ.
ವಿವಾಹಗಳನ್ನು ಆಯೋಜಿಸುವವರು ವಿವಾಹ ಆಮಂತ್ರಣ ಪತ್ರ ಅಥವಾ ಇತರ ಯಾವುದೇ ಸಂಬಂಧಿತ ದಾಖಲೆಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಹಶೀಲ್ದಾರ್‌ಗೆ ಸಲ್ಲಿಸಬೇಕು. ಅರ್ಜಿಯ ಸ್ವೀಕೃತಿಯ ಮೇರೆಗೆ, ತಹಶೀಲ್ದಾರರು ಪ್ರತಿ ಮದುವೆ ಕಾರ್ಯಕ್ರಮಕ್ಕೆ 40 ಪಾಸ್‌ಗಳನ್ನು ನೀಡಬೇಕು. ಪಾಸ್‌ ಹೊಂದಿರುವ ಜನರಿಗೆ ಮಾತ್ರ ಮದುವೆ ಕಾರ್ಯಕ್ಕೆ ಹಾಜರಾಗಲು ಅವಕಾಶವಿರುತ್ತದೆ ಮತ್ತು ಪಾಸ್‌ ಅನ್ನು ವರ್ಗಾಯಿಸಲು ಅವಕಾಶವಿರುವುದಿಲ್ಲ.

 ಶವಸಂಸ್ಕಾರ /ಅಂತ್ಯಕ್ರಿಯೆ
ಶವಸಂಸ್ಕಾರ /ಅಂತ್ಯಕ್ರಿಯೆಗಳನ್ನು ಗರಿಷ್ಠ 5 ಜನರೊಂದಿಗೆ ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ನಿರ್ವಹಿಸಲು ಅನುಮತಿಸಿದೆ.

ಕ್ರಿಮಿನಲ್‌ ಪ್ರಕರಣ ಎಚ್ಚರಿಕೆ
ಈ ಎಲ್ಲ ಆದೇಶಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್‌ ಠಾಣೆಗಳಲ್ಲಿ ಕ್ರಿಮಿನಲ್‌ ಪ್ರಕರಣಗಳನ್ನು, Disaster Management Act 2005 , Karnataka Epidemic Diseases act 2020 ಮತ್ತು ಐಪಿಸಿ ಸೆಕ್ಷನ್‌ 188 ಪ್ರಕಾರ ನಿಯಮಾನುಸಾರ ಕಠಿನ ಕ್ರಮಕೈಗೊಳ್ಳಲಾಗುವುದು. ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.