ಅಸ್ವಸ್ಥಗೊಂಡ ಪರಿಚಯಸ್ಥ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾದ ಯುವಕ! ಯುವತಿ ಸಾವು
Team Udayavani, Oct 25, 2020, 8:24 PM IST
ಉಡುಪಿ: ಪರಿಚಯವಿದ್ದ ಯುವತಿ ಅಸ್ವಸ್ಥಳಾದ ಕೂಡಲೇ ಯುವಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾದ ಘಟನೆ ಶನಿವಾರ ಸಂಜೆ ಉಡುಪಿಯಲ್ಲಿ ನಡೆದಿದೆ.
ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿ ಆಸ್ಪತ್ರೆಗೆ ದಾಖಲಾದ ಕೆಲವೇ ಹೊತ್ತಿನಲ್ಲಿ ಮೃತಪಟ್ಟಿದ್ದು ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಅನುಮಾನ ಮೂಡಿದೆ.
ಮೃತ ಯುವತಿಯನ್ನು ಕುಕ್ಕೆಹಳ್ಳಿ ನಿವಾಸಿ ರಕ್ಷಿತಾ ನಾಯಕ್ (19) ಎನ್ನಲಾಗಿದೆ ಹಾಗೂ ನಾಪತ್ತೆಯಾದ ಯುವಕನನ್ನು ಬೈಂದೂರಿನ ಜಡ್ಕಲ್ ನಿವಾಸಿ ಪ್ರಶಾಂತ್ ಕುಂದರ್ ಎನ್ನಲಾಗಿದ್ದು ರಕ್ಷಿತಾಗೆ ಪರಿಚಯಸ್ಥನಾಗಿದ್ದ.
ಶನಿವಾರ 6:30ರ ಹೊತ್ತಿಗೆ ಅರೆಪ್ರಜ್ಞಾವಸ್ಥೆಯಲ್ಲಿದ್ದ ರಕ್ಷಿತಾಳನ್ನು ಪ್ರಶಾಂತ್ ರಿಕ್ಷಾದಲ್ಲಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ರಕ್ಷಿತಾ ಮನೆಯವರಿಗೆ ಕರೆ ಮಾಡಿ ವಿಷಯ ತಿಳಿಸಿ ನಂತರ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾನೆ, ಇತ್ತ ಆಸ್ಪತ್ರೆಗೆ ದಾಖಲಾದ ಕೆಲವೇ ಹೊತ್ತಿನಲ್ಲಿ ರಕ್ಷಿತಾ ಮೃತಪಟ್ಟಿದ್ದಾರೆ.
ಇದನ್ನೂ ಓದಿ :ಬಂಗಾಳಿ ಚಿತ್ರರಂಗದ ಹಿರಿಯ ನಟ ಸೌಮಿತ್ರ ಚಟರ್ಜಿ ಆರೋಗ್ಯ ಸ್ಥಿತಿ ಗಂಭೀರ
ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ನಿವಾಸಿಯಾಗಿರುವ ರಕ್ಷಿತಾ, ಕೆಲಸ ಮತ್ತು ಶಿಕ್ಷಣದ ಉದ್ದೇಶಕ್ಕಾಗಿ ಉಡುಪಿ ನಗರದ ಅಂಬಾಗಿಲಿನಲ್ಲಿ ವಾಸ್ತವ್ಯವಿದ್ದಳು ಎನ್ನಲಾಗಿದ್ದು ಹದಿನೈದು ದಿನಕ್ಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದ ರಕ್ಷಿತಾ, ಪ್ರಶಾಂತ್ ಕುಂದರ್ ಜತೆ ಸ್ನೇಹ ಬೆಳೆಸಿಕೊಂಡಿದ್ದಳು ಎನ್ನಲಾಗಿದೆ. ಇದೀಗ ಅನುಮಾನಾಸ್ಪದವಾಗಿ ಮೃತಪಟ್ಟ ರಕ್ಷಿತಳದ್ದು ಕೊಲೆಯೇ ಎಂಬ ಅನುಮಾನ ಕಾಡುತ್ತಿದ್ದು, ಪ್ರಶಾಂತ್ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ರಕ್ಷಿತಾಳ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.