UCC:1ವಾರದೊಳಗೆ ಉತ್ತರಾಖಂಡ್‌ ನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ? ಕರಡು ಪ್ರತಿ ಹಸ್ತಾಂತರ

ಸಿಎಂ ಧಾಮಿ ಅವರ ಅಧಿಕೃತ ನಿವಾಸದ ಸುತ್ತ ಮುತ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

Team Udayavani, Feb 2, 2024, 12:14 PM IST

UCC: 1ವಾರದೊಳಗೆ ಉತ್ತರಾಖಂಡ್‌ ನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ, ಕರಡು ಪ್ರತಿ ಹಸ್ತಾಂತರ

ಉತ್ತರಾಖಂಡ್:‌ ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಏಕರೂಪ ನಾಗರಿಕ ಸಂಹಿತೆ ಕುರಿತು ಕರಡು ಸಿದ್ಧಪಡಿಸಲು ನೇಮಕ ಮಾಡಿದ್ದ ಸಮಿತಿ ಶುಕ್ರವಾರ(ಫೆ.02) ಉತ್ತರಾಖಂಡ್‌ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಅವರಿಗೆ ದಾಖಲೆಯನ್ನು ಹಸ್ತಾಂತರಿಸಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:Hemant Soren: ಬಂಧನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ ಹೇಮಂತ್ ಸೊರೇನ್ ಗೆ ಮುಖಭಂಗ

ಯುಸಿಸಿ ಕರಡು ಸಮಿತಿ ಅಧ್ಯಕ್ಷ ಸುಪ್ರೀಂಕೋರ್ಟ್‌ ನಿವೃತ್ತ ಜಸ್ಟೀಸ್‌ ರಂಜನಾ ಪ್ರಕಾಶ್‌ ದೇಸಾಯಿ ಅವರು ಮುಖ್ಯ ಸೇವಕ್‌ ಸದನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪುಷ್ಕರ್‌ ಅವರಿಗೆ ಕರಡು ಪ್ರತಿಯ ದಾಖಲೆಯನ್ನು ಹಸ್ತಾಂತರಿಸಿರುವುದಾಗಿ ವರದಿ ವಿವರಿಸಿದೆ.

ಏಕರೂಪ ನಾಗರಿಕ ಸಂಹಿತೆ ಕರಡು ಹಸ್ತಾಂತರ ಹಿನ್ನೆಲೆಯಲ್ಲಿ ಸಿಎಂ ಧಾಮಿ ಅವರ ಅಧಿಕೃತ ನಿವಾಸದ ಸುತ್ತ ಮುತ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಫೆ.5ರಿಂದ 8ರವರೆಗೆ ನಾಲ್ಕು ದಿನಗಳ ಕಾಲ ಉತ್ತರಾಖಂಡ್‌ ವಿಧಾನಸಭೆಯಲ್ಲಿ ವಿಶೇಷ ಅಧಿವೇಶನ ನಡೆಯಲಿದ್ದು, ಏಕರೂಪ ನಾಗರಿಕ ಸಂಹಿತೆ ನಿರ್ಣಯವನ್ನು ಅಂಗೀಕರಿಸಲು ಸಿದ್ಧತೆ ನಡೆಸಲಾಗಿದೆ ಎಂದು ವರದಿ ತಿಳಿಸಿದೆ.

ಏಕರೂಪ ನಾಗರಿಕ ಸಂಹಿತೆ ಕರಡು ಪ್ರತಿಯನ್ನು ಸಿಎಂ ಪುಷ್ಕರ್‌ ಸ್ವೀಕರಿಸಿದ್ದು, ಉತ್ತರಾಖಂಡ್‌ ಸರ್ಕಾರ ಶನಿವಾರ (ಫೆ.03) ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಲಿದೆ. ಫೆಬ್ರವರಿ 6ರಂದು ವಿಧಾನಸಭೆಯಲ್ಲಿ ಯುಸಿಸಿ ಕರಡನ್ನು ಮಸೂದೆ ರೂಪದಲ್ಲಿ ಮಂಡಿಸುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.

ಒಂದು ವೇಳೆ ಇದು ಜಾರಿಗೊಂಡರೆ ಸ್ವಾತಂತ್ರ್ಯ ನಂತರ ಏಕರೂಪ ನಾಗರಿಕ ಸಂಹಿತೆ ಜಾರಿಗೊಂಡ ಮೊದಲ ರಾಜ್ಯ ಉತ್ತರಾಖಂಡ್‌ ಆಗಲಿದೆ. ಉತ್ತರಾಖಂಡ್‌ ರಾಜ್ಯದ ಜನರಿಗೆ ಇದೊಂದು ಪ್ರಮುಖವಾದ ದಿನವಾಗಿದೆ. ಏಕಭಾರತ, ಶ್ರೇಷ್ಠ ಭಾರತ ಎಂಬ ಧ್ಯೇಯವನ್ನು ಅರ್ಥ ಮಾಡಿಕೊಳ್ಳಲು ಏಕರೂಪ ನಾಗರಿಕ ಸಂಹಿತೆ ಸಹಾಯವಾಗಲಿದೆ ಎಂದು ಪುಷ್ಕರ್‌ ಟ್ವೀಟ್‌ ನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

1-siddu

Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

mob

Social Media: ಇನ್‌ಸ್ಟಾದಂತೆ ವಾಟ್ಸ್‌ಆ್ಯಪ್‌ನಲ್ಲಿ ಇನ್ನು ಲೈಕ್‌, ಮೆನ್ಷನ್‌ ಆಯ್ಕೆ

Supreme Court

Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್‌ಪರಿಶೀಲನೆ ಮಾಡುವುದಿಲ್ಲ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

1-siddu

Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.