ನಿಲ್ಲದ ಮಣಿಪುರ ಹಾಹಾಕಾರ -ಇಂದು ಮಣಿಪುರ ಶಾಸಕರಿಂದ ಪ್ರಧಾನಿ ನರೇಂದ್ರ ಮೋದಿ ಭೇಟಿ
Team Udayavani, Jun 18, 2023, 7:39 AM IST
ಮಣಿಪುರ/ಕೋಲ್ಕತ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಹಿಂಸಾಚಾರಕ್ಕೆ ಕೊನೆಯೇ ಇಲ್ಲದಂತಾಗಿದೆ. ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಿಜೆಪಿ ನಾಯಕರ ನಿವಾಸಗಳಿಗೆ ಬೆಂಕಿ ಹಚ್ಚುವ ಘಟನೆ ನಡೆದಿದ್ದರೆ, ಕಿಡಿಗೇಡಿಗಳ ಜತೆಗಿನ ಘರ್ಷಣೆಯಲ್ಲಿ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಕೇಂದ್ರ ವಿದೇಶಾಂಗ ಖಾತೆ ಸಹಾಯಕ ಸಚಿವ ಆರ್.ಕೆ.ರಂಜನ್ ಸಿಂಗ್ ನಿವಾಸಕ್ಕೆ ಬೆಂಕಿ ಹಚ್ಚಿ ದಾಂಧಲೆ ನಡೆದ ಬೆನ್ನಲ್ಲೇ ಈ ಘಟನೆ ನಡೆದಿದೆ.
ಬಿಷ್ಣುಪುರ ಜಿಲ್ಲೆಯ ಕ್ವಾಕ್ತಾ ಎಂಬಲ್ಲಿ ಬಿಜೆಪಿ ನಾಯಕರೊಬ್ಬರ ಮನೆಗೆ ನುಗ್ಗಿ ದಾಂಧಲೆ ಎಬ್ಬಿಸುವ ಯತ್ನ ನಡೆದಿದೆ. ಇದರ ಜತೆಗೆ ಶನಿವಾರ ಬೆಳಗ್ಗಿನ ಜಾವದವರೆಗೆ ಸ್ವಯಂಚಾಲಿತ ರೈಫಲ್‌ಗಳಿಂದ ಗುಂಡು ಹಾರಾಟವೂ ನಡೆದಿದೆ. ಇದಲ್ಲದೆ ಚುರಾಚಾಂದ್‌ಪುರ್ ಜಿಲ್ಲೆಯ ಕಂಗಾವಿ ಎಂಬಲ್ಲಿ ಸ್ಥಳೀಯ ಶಾಸಕರ ಮನೆಗೆ ನುಗ್ಗಲು ಯತ್ನಿಸಲಾಗಿದೆ.
ಇಂಫಾಲ ಪಶ್ಚಿಮ ಜಿಲ್ಲೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷೆ ಅಧಿಕಾರಿಮರಿಯುಂ ಶಾರದಾ ದೇವಿ ಅವರ ನಿವಾಸಕ್ಕೆ ಅಕ್ರಮವಾಗಿ ನುಗ್ಗುವ ಪ್ರಯತ್ನ ಮಾಡಲಾಗಿದೆ. ಆದರೆ, ಭೂಸೇನೆ ಮತ್ತು ಆರ್‌ಎಎಫ್ನ ಯೋಧರು ಅದನ್ನು ತಡೆದಿದ್ದಾರೆ. ಮಣಿಪುರ ವಿವಿ ಕ್ಯಾಂಪಸ್ ಸೇರಿದಂತೆ ಹಲವು ಸ್ಥಳಗಳಲ್ಲಿ ಜನರು ಗುಂಪು ಸೇರಿದ್ದ ಹಲವು ಘಟನೆಗಳು ನಡೆದಿವೆ. ಇಂಫಾಲ್‌ನ ಆಸ್ಪತ್ರೆಯೊಂದರ ಸಮೀಪ 1 ಸಾವಿರಕ್ಕೂ ಅಧಿಕ ಮಂದಿ ಸೇರಿ ದೊಂಬಿ ಎಬ್ಬಿಸಲು ಮುಂದಾಗುತ್ತಿರುವ ಬಗ್ಗೆ ಸುಳಿವು ಸಿಕ್ಕಿದ ಕೂಡಲೇ ಭೂಸೇನೆ, ಆರ್‌ಎಎಫ್ ಸ್ಥಳಕ್ಕೆ ಧಾವಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತಂದಿವೆ.
ಶಸ್ತ್ರಾಸ್ತ್ರ ಲೂಟಿಗೆ ಯತ್ನ: ಇಂಫಾಲ ಪಶ್ಚಿಮ ಜಿಲ್ಲೆಯ ಪೊಲೀಸ್ ಠಾಣೆಗೆ ನುಗ್ಗಿದ 300ರಿಂ0ದ 400 ಮಂದಿ ಜನರು ಅಲ್ಲಿ ಇದ್ದ ಶಸ್ತ್ರಾಸ್ತ್ರಗಳನ್ನು ದೋಚಲು ಪ್ರಯತ್ನ ನಡೆಸಿದ್ದಾರೆ. ಕೂಡಲೇ ಸ್ಥಳಕ್ಕೆ ದಾವಿಸಿದ ಕ್ಷಿಪ್ರ ಕಾರ್ಯಾಚರಣೆ ಪಡೆಯ ಯೋಧರು, ಜನರನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.
ಇಂದು ಪ್ರಧಾನಿ ಭೇಟಿ:
ಮಣಿಪುರ ವಿಧಾನಸಭೆಯ ಸ್ಪೀಕರ್ ತಾಕ್‌ಚೋಮ್ ಸತ್ಯವ್ರತ ಸಿಂಗ್ ನೇತೃತ್ವದಲ್ಲಿ ಹಲವು ಶಾಸಕರು ಭಾನುವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂಫಾಲಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರಚಿಸಲಾಗಿದ್ದ ಶಾಂತಿ ಸಮಿತಿಯ ಬಗ್ಗೆ ಪರಾಮರ್ಶೆ ನಡೆಸಲಿದ್ದಾರೆ.
ಪರಿಸ್ಥಿತಿ ಸುಧಾರಿಸದಿದ್ದರೆ…
ಮಣಿಪುರದಲ್ಲಿ ಹಿಂಸಾ ಸ್ಥಿತಿಯನ್ನು ಸುಧಾರಿಸಲು ಬಿಜೆಪಿ ಮತ್ತು ಕೇಂದ್ರ ಸರ್ಕಾರ ಆದ್ಯತೆ ನೀಡಲೇಬೇಕು. ಇಲ್ಲದಿದ್ದರೆ, ಆ ಪಕ್ಷದ ಜತೆಗೆ ಹೊಂದಿರುವ ಮೈತ್ರಿಯನ್ನು ಮರು ಪರಿಶೀಲಿಸಬೇಕಾಗುತ್ತದೆ ಎಂದು ನ್ಯಾಷನಲ್ ಪೀಪಲ್ ಪಾರ್ಟಿ (ಎನ್‌ಪಿಪಿ)ಯ ಉಪಾಧ್ಯಕ್ಷ ಮತ್ತು ನಿವೃತ್ತ ಡಿಜಿಪಿ ಯುಮ್‌ನಾಮ್ ಜಯಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ಮೌನ ಪ್ರೇಕ್ಷಕರಾಗಿ ಇರಲು ಸಾಧ್ಯವಿಲ್ಲ ಎಂದೂ ಹೇಳಿದ್ದಾರೆ. ರಾಜ್ಯದಲ್ಲಿನ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ. ರಾಜ್ಯ ಸರ್ಕಾರ ಜನರ ರಕ್ಷಣೆ ಮಾಡುವಲ್ಲಿ ವಿಫಲಗೊಂಡಿದೆ ಎಂದು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.