ಮಥುರಾ: ವಿವಾಹದ ಸಂಭ್ರಮದ ನಡುವೆಯೇ ವಧುವನ್ನು ಗುಂಡಿಕ್ಕಿ ಕೊಂದ ಪ್ರಿಯಕರ
ಗುಂಡಿನ ಶಬ್ದ ಕೇಳಿದ ಕೂಡಲೇ ಸಂಬಂಧಿಕರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದರು ಎಂದು ವರದಿ ವಿವರಿಸಿದೆ.
Team Udayavani, Apr 29, 2022, 4:11 PM IST
ಮಥುರಾ:ವಿವಾಹ ಸಮಾರಂಭ ನಡೆಯುತ್ತಿದ್ದ ಸಂದರ್ಭದಲ್ಲಿಯೇ ವಧುವನ್ನು ವಿವಾಹ ಮಂಟಪದಲ್ಲಿ ಆಕೆಯ ಪ್ರಿಯಕರ ಗುಂಡಿಕ್ಕಿ ಹತ್ಯೆಗೈದ ಘಟನೆ ಉತ್ತರಪ್ರದೇಶ ಮಥುರಾದ ನೌಜ್ ಹೀಲ್ ಪ್ರದೇಶದ ಮುಬಾರಿಕ್ ಪುರ್ ಗ್ರಾಮದಲ್ಲಿ ಶುಕ್ರವಾರ(ಏಪ್ರಿಲ್ 29) ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ, ಬೇರೆ ಯಾವ ಭಾಷೆಯೂ ಪ್ರಾಮುಖ್ಯವಲ್ಲ: ಸಿಎಂ ಬೊಮ್ಮಾಯಿ
ವರನ ಕೊರಳಿಗೆ ಹಾರ ಹಾಕುವ ಸಂಪ್ರದಾಯ ಮುಗಿದ ತಕ್ಷಣವೇ ವಧುವಿನ ಪ್ರಿಯಕರ ಆಕೆಯ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕಾಜಲ್ ಸ್ಥಳದಲ್ಲಿಯೇ ಕೊನೆಯುಸಿರೆಳೆದಿರುವುದಾಗಿ ವರದಿ ತಿಳಿಸಿದೆ.
ಆರೋಪಿ ಹಾಗೂ ಯುವತಿಯ ನಡುವೆ ಪ್ರೇಮ ಸಂಬಂಧ ಹೊಂದಿದ್ದು, ಆಕೆ ಇನ್ನೊಬ್ಬನ ಜತೆ ವಿವಾಹವಾಗುತ್ತಿರುವುದಕ್ಕೆ ಆತ ಆಕ್ರೋಶಗೊಂಡಿದ್ದ ಎಂದು ವರದಿ ಹೇಳಿದೆ. ಗುಂಡಿನ ಶಬ್ದ ಕೇಳಿದ ಕೂಡಲೇ ಸಂಬಂಧಿಕರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದರು ಎಂದು ವರದಿ ವಿವರಿಸಿದೆ.
ವಧು-ವರ ಮಾಲೆಯನ್ನು ಅದಲು ಬದಲು ಮಾಡಿಕೊಳ್ಳುವ ಸಂಪ್ರದಾಯ ಮುಗಿದ ನಂತರ ಮಗಳು ಫ್ರೆಶ್ ಅಪ್ ಆಗಲು ಕೋಣೆಯೊಳಗೆ ತೆರಳಿದ್ದ ವೇಳೆ ಅಪರಿಚಿತ ಯುವಕನೊಬ್ಬ ಬಂದು ಮಗಳ ಮೇಲೆ ಗುಂಡು ಹಾರಿಸಿದ್ದ. ಇದನ್ನು ನನಗೆ ನಂಬಲು ಸಾಧ್ಯವಾಗುತ್ತಿಲ್ಲ ಎಂದು ಮೃತ ವಧುವಿನ ತಂದೆ ಖುಬಿ ರಾಮ್ ಪ್ರಜಾಪತಿ ಎಎನ್ ಐ ನ್ಯೂಸ್ ಏಜೆನ್ಸಿ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.
ಘಟನೆಯ ನಂತರ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಶ್ ಚಂದ್ರ ಎಎನ್ ಐಗೆ ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.