ರಾಜ್ಯದಲ್ಲಿಈ ವರ್ಷ 200 ಸ್ಟಾರ್ಟ್ ಅಪ್ ಗಳಿಗೆ ತಲಾ ರೂ 50 ಲಕ್ಷದವರೆಗೆ ಮೂಲನಿಧಿ

ರಾಷ್ಟ್ರೀಯ ನವೋದ್ಯಮ ದಿನದಲ್ಲಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

Team Udayavani, Jan 16, 2022, 5:34 PM IST

dr-ashwath

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ  ಹೆಚ್ಚುವರಿಯಾಗಿ 75 ನವೋದ್ಯಮಗಳಿಗೆ ಸೇರಿದಂತೆ ಈ ವರ್ಷ ರಾಜ್ಯದಲ್ಲಿ ಒಟ್ಟು 200 ನವೋದ್ಯಮಗಳಿಗೆ ಗರಿಷ್ಠ ತಲಾ 50 ಲಕ್ಷ ರೂ.ಗಳವರೆಗೆ ಮೂಲನಿಧಿ (ಸೀಡ್ ಫಂಡ್) ಕೊಡಲಾಗುವುದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ವಿಧಾನಸೌಧದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಪ್ರಪ್ರಥಮ `ರಾಷ್ಟ್ರೀಯ ನವೋದ್ಯಮ ದಿನ’ದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇದುವರೆಗೆ ಸರಿಸುಮಾರು 500 ಸ್ಟಾರ್ಟ್ ಅಪ್ ಗಳಿಗೆ ಅನುದಾನ ಕೊಡಲಾಗಿದ್ದು, ಮೂಲನಿಧಿ ಕೊಡುವ ಉಪಕ್ರಮ ಬೇರಾವ ರಾಜ್ಯದಲ್ಲೂ ಇಲ್ಲ ಎಂದರು.

ಪ್ರಸ್ತುತ ಹಣಕಾಸು ವರ್ಷದಲ್ಲಿ ಈವರೆಗೆ ರಾಜ್ಯದಲ್ಲಿ ಉದ್ದಿಮೆಗಳ ಸ್ಥಾಪನೆಗಾಗಿ 1.60 ಲಕ್ಷ ಕೋಟಿ ರೂ. ವಿದೇಶಿ ಬಂಡವಾಳ ಹರಿದುಬಂದಿದ್ದು,  ಒಟ್ಟಾರೆಯಾಗಿ ದೇಶದಲ್ಲಿ ಆಗಿರುವ ಹೂಡಿಕೆಯಲ್ಲಿ ಶೇ.50ಕ್ಕಿಂತ ಹೆಚ್ಚು ಭಾಗ ಕರ್ನಾಟಕದಲ್ಲೇ ಆಗಿದೆ. ದೇಶದಲ್ಲಿ ಒಟ್ಟು 57 ಸಾವಿರ ನವೋದ್ಯಮಗಳಿವೆ. ಈ ಪೈಕಿ 13 ಸಾವಿರಕ್ಕೂ ಹೆಚ್ಚು ಸ್ಟಾರ್ಟಪ್ ಗಳು ರಾಜ್ಯದಲ್ಲೇ ನೆಲೆ ಹೊಂದಿವೆ. ರಾಜ್ಯದಲ್ಲಿ ಅನುಷ್ಠಾನಗೊಳಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ರಾಜ್ಯದ ಈ ಮುಂಚೂಣಿ ಸ್ಥಾನವನ್ನು ಕಾಯ್ದುಕೊಳ್ಳಲು ಪೂರಕವಾಗಿರಲಿದೆ ಎಂದು ವಿವರಿಸಿದರು.

ದೇಶವು ‘ವಿಶ್ವಗುರು’ವಾಗಿ ಹಾಗೂ `ಸೂಪರ್ ಪವರ್’ ಆಗಿ ಹೊರಹೊಮ್ಮುವಲ್ಲಿ ನವೋದ್ಯಮಗಳ ಪಾತ್ರ ನಿರ್ಣಾಯಕ ಎಂಬುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಒತ್ತಿ ಹೇಳಿದ್ದಾರೆ. ಇದನ್ನು ಗಮನದಲ್ಲಿರಿಸಿಕೊಂಡು ರಾಜ್ಯದಲ್ಲಿ ಹಾರ್ಡ್‌ವೇರ್ ವಲಯವನ್ನೂ ದಕ್ಷವಾಗಿ ಬೆಳೆಸಲಾಗುವುದು. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ  ಸ್ಥಾಪಿಸಿರುವ `ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಅಂಡ್ ರೋಬೋಟಿಕ್ಸ್ ಟ್ರಾನ್ಸ್ಲೇಷನ್ ಪಾರ್ಕ್’ (ಆರ್ಟ್ ಪಾರ್ಕ್) ಈ ದಿಸೆಯಲ್ಲಿ ರಾಜ್ಯ ಸರ್ಕಾರದ ಬದ್ಧತೆಗೆ ಒಂದು ಉದಾಹರಣೆಯಷ್ಟೇ ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಎಲೆಕ್ಟ್ರಾನಿಕ್ ಉದ್ದಿಮೆಗಳನ್ನು ಉತ್ತೇಜಿಸುವ ದೃಷ್ಟಿಯಿಂದ ಮುಂದಿನ ಐದು ವರ್ಷಗಳಲ್ಲಿ ಇಎಸ್ ಡಿಎಂ ನೀತಿಯಡಿ 5 ಸಾವಿರ ಕೋಟಿ ರೂ. ಸಬ್ಸಿಡಿ ಕೊಡಲಾಗುವುದು. ಇದರಲ್ಲಿ ಮೊದಲನೇ ವರ್ಷದಲ್ಲೇ 2 ಸಾವಿರ ಕೋಟಿ ರೂ. ನೆರವು ಒದಗಿಸಲಾಗಿದೆ ಎಂದು ತಿಳಿಸಿದರು.

ರಾಜ್ಯ ಸ್ಟಾರ್ಟಪ್ ವಿಷನ್ ಗ್ರೂಪ್ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್ ಮಾತನಾಡಿ, `ನಾವು ಕೇವಲ ನಮಗಾಗಿ ಮಾತ್ರ ಉತ್ಪನ್ನಗಳನ್ನು ತಯಾರಿಸಿದರೆ ಸಾಲದು. ಚೀನಾದಂತೆ ಇಡೀ ಜಗತ್ತಿನ ಅಗತ್ಯಗಳನ್ನು ಗಮನಿಸಿ, ಮಾರುಕಟ್ಟೆಯನ್ನು ಹಿಗ್ಗಿಸಿಕೊಳ್ಳಬೇಕು. ಬೆಂಗಳೂರೇ ಈಗ ದೇಶದ ಆರ್ಥಿಕ ರಾಜಧಾನಿಯಾಗಿದೆ’ ಎಂದು ಸಲಹೆ ನೀಡಿದರು.

ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ ಮಾತನಾಡಿ, ರಾಜ್ಯದಲ್ಲಿ ಕಳೆದ 20 ವರ್ಷಗಳಲ್ಲಿ ನಮ್ಮ ಉದ್ಯಮ ವ್ಯವಸ್ಥೆ ಆಮೂಲಾಗ್ರವಾಗಿ ಬದಲಾಗಿದೆ. ಈಗ ಉದ್ಯಮಶೀಲ ವ್ಯಕ್ತಿಗಳಲ್ಲಿರುವ ಹೊಸ ಆಲೋಚನೆಗಳನ್ನು ತ್ವರಿತ ಗತಿಯಲ್ಲಿ ಗುರುತಿಸಲಾಗುತ್ತಿದ್ದು, ಅಗತ್ಯ ನೆರವು ಮತ್ತು ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.

ಐಟಿ ಮತ್ತು ಬಿಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್ ಮಾತನಾಡಿ, ರಾಜ್ಯದಲ್ಲಿ ನವೋದ್ಯಮಗಳಿಗೆ ಪ್ರಶಸ್ತವಾದ ಹಲವು ನೀತಿಗಳಿದ್ದು, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಮೂಲಕ ಮುಂದಿನ ಐದು ವರ್ಷಗಳ ಬೆಳವಣಿಗೆಗೆ ವೇದಿಕೆ ಸಿದ್ಧಪಡಿಸಲಾಗಿದೆ ಎಂದರು.

ರಾಜ್ಯದ 14 ನವೋದ್ಯಮಗಳಿಗೆ ಪ್ರಶಸ್ತಿ

ಅಖಿಲ ಭಾರತ ಮಟ್ಟದಲ್ಲಿ ಮೊದಲ ಬಾರಿಗೆ ನಡೆದ `ಸ್ಟಾರ್ಟ್ ಅಪ್ ಇಂಡಿಯಾ ನಾವೀನ್ಯತಾ ಸಪ್ತಾಹ’ದಲ್ಲಿ ವಿವಿಧ ವಲಯಗಳಲ್ಲಿ ರಾಜ್ಯದ 14 ನವೋದ್ಯಮಗಳು ಪ್ರಶಸ್ತಿ ಪುರಸ್ಕಾರಕ್ಕೆ ಪಾತ್ರವಾಗಿವೆ. ರಾಷ್ಟ್ರ ಮಟ್ಟದಲ್ಲಿ 46 ನವೋದ್ಯಮಗಳಿಗೆ ಪ್ರಶಸ್ತಿ ನೀಡಿದ್ದು, ಅವುಗಳಲ್ಲಿ ಸಿಂಹ ಪಾಲು (14) ಕರ್ನಾಟಕದ ಸಂಸ್ಥೆಗಳಿಗೇ ಸಿಕ್ಕಿದೆ ಎಂದು ಹೇಳಿದರು.

ನಫಾ ಇನ್ನೋವೇಷನ್ಸ್, ಉಂಬೋ ಇಡ್-ಟೆಕ್  (ಫಿನ್ಟೆಕ್), ಥಿಂಕರ್ ಬೆಲ್ ಲ್ಯಾಬ್ಸ್ (ಎಡುಟೆಕ್), ಸಿಂಪ್ಲೋಟೆಲ್ ಟೆಕ್ನಾಲಜೀಸ್ (ಪ್ರವಾಸ ಮತ್ತು ಆತಿಥ್ಯೋದ್ಯಮ), ಬ್ಲಿಂಕಿನ್ ಟೆಕ್ನಾಲಜೀಸ್ (ಆಗ್ಮೆಂಟೆಡ್ ರಿಯಾಲಿಟಿ), ಟ್ಯಾಗ್ ಬಾಕ್ಸ್ ಸೊಲ್ಯೂಷನ್ಸ್ (ಐಒಟಿ), ಶಾಪೋಸ್ ಸರ್ವೀಸಸ್, ಆತ್ರೇಯ ಗ್ಲೋಬಲ್ ಸೊಲ್ಯೂಷನ್ಸ್, ಝೆನ್ ಟ್ರಾನ್ ಲ್ಯಾಬ್ಸ್ ಪ್ರೈ.ಲಿ. (ಕೃಷಿ), ಲೀಡ್ ಸ್ಕ್ವೇರ್ಡ್ (ಗ್ರಾಹಕ ಸಂಬಂಧ), ಲಿಯೂಸಿನ್ ರಿಚ್ ಬಯೋ ಪ್ರೈ.ಲಿ. (ಜೀವವಿಜ್ಞಾನ), ಸ್ಟೆಲ್ ಆಪ್ಸ್ (ಪಶು ಸಂಗೋಪನೆ), 1ಬ್ರಿಡ್ಜ್ (ಲಾಜಿಸ್ಟಿಕ್ಸ್) ಮತ್ತು ಸ್ಟೆರಡಿಯನ್ ಸೆಮಿ (ಸಾರಿಗೆ ನಿರ್ವಹಣೆ)- ಇವು ಪುರಸ್ಕೃತ ಕಂಪನಿಗಳಾಗಿವೆ.

ಟಾಪ್ ನ್ಯೂಸ್

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

9-bng

Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.