“ಉಗ್ರ ಸಂದೇಶ”ಗಳಿಗೆ ಬಾಲಕಿಯರ ಬಳಕೆ!- ಕಾಶ್ಮೀರದಲ್ಲಿ ISI ಅಪಾಯಕಾರಿ ಕುತಂತ್ರ ಬಯಲು
- ಮಹಿಳೆಯರು, ಮಕ್ಕಳಿಂದ ಸಂದೇಶ ರವಾನೆಯ ಕುತಂತ್ರ
Team Udayavani, Jun 12, 2023, 7:15 AM IST
ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಪಾಕಿಸ್ಥಾನದ ಗುಪ್ತಚರ ಸಂಸ್ಥೆ ಐಎಸ್‌ಐ ವಿಧ್ವಂಸಕ ಕೃತ್ಯಗಳನ್ನು ನಡೆಸುವುದು, ಉಗ್ರ ಸಂಘಟನೆಗಳಿಗೆ ಕುಮ್ಮಕ್ಕು ನೀಡುವುದು, ಶಾಂತಿ ಕದಡುವುದು ಹೊಸ ವಿಚಾರವೇನೂ ಅಲ್ಲ. ಆದರೆ ಈಗ ಅದು ತನ್ನ ಉದ್ದೇಶ ಈಡೇರಿಕೆಗಾಗಿ ಕಣಿವೆಯ ಬಾಲಕಿಯರು, ಮಹಿಳೆಯರು ಹಾಗೂ ಬಾಲಾಪರಾಧಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ!
ಶ್ರೀನಗರದಲ್ಲಿ ಕೇಂದ್ರ ಕಚೇರಿ ಹೊಂದಿರುವ 15 ಕಾಪ್ಸ್ ಅಥವಾ ಚಿನಾರ್ ಕಾಪ್ಸ್ ಎಂದೇ ಪ್ರಸಿದ್ಧಿ ಪಡೆದಿರುವ ಸೇನಾ ವಿಭಾಗದ ಮುಖ್ಯಸ್ಥ ಲೆ|ಜ| ಅಮರ್‌ದೀಪ್ ಸಿಂಗ್ ಔಜ್ಲಾ ಅವರು “ಪಿಟಿಐ”ಗೆ ನೀಡಿರುವ ಸಂದರ್ಶನದಲ್ಲಿ ಈ ಆಘಾತಕಾರಿ ಮಾಹಿತಿ ನೀಡಿದ್ದಾರೆ.
ತನಿಖೆಯಿಂದ ಬಹಿರಂಗ
ಉಗ್ರ ಕೃತ್ಯಗಳನ್ನು ನಡೆಸಲು ಅನುಸರಿಸುವ ಸಾಂಪ್ರದಾಯಿಕ ಸಂವಹನ ವಿಧಾನಗಳಿಗೆ ಐಎಸ್‌ಐ ವಿದಾಯ ಹೇಳಿದೆ. ಸಂದೇಶ ರವಾನೆಗೆ ಮೊಬೈಲ್, ಇಂಟರ್‌ನೆಟ್, ಸಾಮಾಜಿಕ ಜಾಲತಾಣ ಬಳಕೆ ಗಣನೀಯವಾಗಿ ತಗ್ಗಿದೆ. ಅದರ ಬದಲಾಗಿ ಹೊಸ ದಾರಿ ಕಂಡುಕೊಳ್ಳಲಾಗಿದೆ. ಶಸ್ತ್ರಾಸ್ತ್ರಗಳ ಸಾಗಣೆ, ಮಾದಕವಸ್ತುಗಳ ಸಾಗಾಟ, ವಿಧ್ವಂಸಕ ಯೋಜನೆಗಳ ಕಾರ್ಯತಂತ್ರದಂಥ ಸಂದೇಶಗಳನ್ನು ಕಳುಹಿಸಲು ಮಹಿಳೆಯರು, ಹುಡುಗಿಯರು, ಬಾಲಾಪರಾಧಿಗಳನ್ನು ಬಳಕೆ ಮಾಡುವ ಆಘಾತಕಾರಿ ತಂತ್ರ ಅನುಸರಿಸುತ್ತಿದೆ. ಕೆಲವು ಪ್ರಕರಣಗಳನ್ನು ಛೇದಿಸಿ, ತನಿಖೆ ನಡೆಸಿದ ಸಂದರ್ಭದಲ್ಲಿ ಈ ಅಂಶ ಬೆಳಕಿಗೆ ಬಂದಿದೆ ಎಂದು ಲೆ|ಜ| ಅಮರ್‌ದೀಪ್ ಹೇಳಿದ್ದಾರೆ.
ಐಎಸ್‌ಐ ಜತೆಗೆ ಪಾಕ್ ಮೂಲದ ಇತರ ಉಗ್ರ ಸಂಘಟನೆಗಳ ಮುಖ್ಯಸ್ಥರು ಕೂಡ ಇದೇ ತಂತ್ರದ ಮೊರೆ ಹೋಗುತ್ತಿದ್ದಾರೆ. ಈ ರೀತಿಯ ಅಪ್ರತ್ಯಕ್ಷ ಭಯೋತ್ಪಾದನೆಯು ಅತ್ಯಂತ ಗಂಭೀರ ಹಾಗೂ ಕಳವಳಕಾರಿ ವಿಚಾರ. ಈ ಜಾಲವನ್ನು ಪತ್ತೆ ಹಚ್ಚಿ, ಇಂಥ ಅಪಾಯಕಾರಿ ಬೆಳವಣಿಗೆಯನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಭೂಸೇನೆ ಮತ್ತು ಇತರ ತನಿಖಾ ಸಂಸ್ಥೆಗಳು ಪ್ರಯತ್ನ ನಡೆಸುತ್ತಿವೆ ಎಂದು ಅವರು ತಿಳಿಸಿದ್ದಾರೆ.
ಕಾಶ್ಮೀರದಲ್ಲಿ ಶಾಂತಿ ಮತ್ತು ಸ್ಥಿರತೆ ತರಲು ಸೇನೆ ಬಹುವಾಗಿ ಶ್ರಮಿಸಿದೆ. ಇದನ್ನು ನಮ್ಮ ಗೆಲುವು ಎಂದು ಸಂಭ್ರಮಿಸಿ ಸುಮ್ಮನಿರಲು ಸಾಧ್ಯವಿಲ್ಲ. ಏಕೆಂದರೆ ನೆರೆಯ ದೇಶ ಅದನ್ನು ಹಾಳುಗೆಡವಲು ಕುಟಿಲೋಪಾಯಗಳನ್ನು ನಡೆಸುತ್ತಲೇ ಇರುತ್ತದೆ. ಪೀರ್ ಪಂಜಾಲ್‌ನ ದಕ್ಷಿಣ ಭಾಗದಲ್ಲಿ ಇತ್ತೀಚೆಗೆ ನಡೆದ ಒಳನುಸುಳುವಿಕೆ ಇದಕ್ಕೊಂದು ಉದಾಹರಣೆ ಎಂದರು. ಇಲ್ಲಿನ ನಾಗರಿಕರ ಸಹಕಾರದಿಂದಲೇ ಸೇನೆಗೆ ಕಣಿವೆಯಲ್ಲಿ ಸುಧಾರಣೆ ತರಲು ಸಾಧ್ಯವಾಗಿದೆ ಎಂದೂ ಲೆ|ಜ| ಅಮರ್‌ದೀಪ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.