ತೈಲ ದರ ಹೆಚ್ಚಾದರೂ ಚಿಂತೆಯಿಲ್ಲ ಎನ್ನುವವರಿಗೆ ಲೀಟರಿಗೆ 1ಸಾವಿರ ದರ ವಿಧಿಸಿ :ಯು.ಟಿ. ಖಾದರ್

Team Udayavani, Feb 27, 2021, 7:11 PM IST

ತೈಲ ದರ ಹೆಚ್ಚಾದರೂ ಚಿಂತೆಯಿಲ್ಲ ಎನ್ನುವವರಿಗೆ ಲೀಟರಿಗೆ 1ಸಾವಿರ ದರ ವಿಧಿಸಿ :ಯು.ಟಿ. ಖಾದರ್

ಚಾಮರಾಜನಗರ: ಅಂಧ ಭಕ್ತರು ಪೆಟ್ರೋಲ್, ಡೀಸೆಲ್ ಬೆಲೆ ಜಾಸ್ತಿಯಾದರೂ ಚಿಂತೆಯಿಲ್ಲ ಎನ್ನುತ್ತಿದ್ದಾರೆ. ಅಂಥವರಿಗೆ ಪ್ರತ್ಯೇಕ ಪೆಟ್ರೋಲ್ ಬಂಕ್ ತೆರೆದು ಒಂದು ಲೀಟರ್ ಪೆಟ್ರೋಲ್ ಗೆ 1 ಸಾವಿರ ರೂ. ದರ ವಿಧಿಸಿ, ನಮ್ಮ ಅಭ್ಯಂತರವೇನಿಲ್ಲ! ಎಂದು ಮಾಜಿ ಸಚಿವ, ಶಾಸಕ ಯು.ಟಿ. ಖಾದರ್ ಕಿಡಿಕಾರಿದರು.

ನಗರದ ಶಿವಕುಮಾರಸ್ವಾಮಿ ಭವನದ ಆವರಣದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶನಿವಾರ ಏರ್ಪಡಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪೆಟ್ರೋಲ್ 100 ರೂ.ಗೆ ಏರಿದೆ. ಡೀಸೆಲ್ 85 ಆಗಿದೆ. ಬಂಗಾರ 40 ಸಾವಿರ ರೂ. ಏರಿದೆ. ಬಡವರು ಕನಿಷ್ಟ 3 ಪವನ್ ಚಿನ್ನ ಹಾಕಿ ಕಷ್ಟ ಪಟ್ಟು ಮದುವೆ ಮಾಡುತ್ತಿದ್ದರು. ಈಗಿನ ಪರಿಸ್ಥಿತಿಯಲ್ಲಿ 1 ಪವನ್‌ಗಿಂತ ಜಾಸ್ತಿ ಕೊಳ್ಳಲು ಸಾಧ್ಯವಾಗುತ್ತಿಲ್ಲ. ಸ್ವಾಭಿಮಾನದಿಂದ ಮದುವೆ ಮಾಡಲು ಸಾಧ್ಯವಾಗುತ್ತಿಲ್ಲ. ದುಡಿಯುವ ವರ್ಗ ಹೋಟೆಲ್‌ನಲ್ಲಿ 30 ರೂ.ಗೆ ಊಟ ಮಾಡುತ್ತಿದ್ದವರು 50 ರೂ. ಕೊಡಬೇಕಾಗಿದೆ. ವೇತನ ಕೂಡ ಜಾಸ್ತಿಯಾಗುತ್ತಿಲ್ಲ ಎಂದು ಅವರು ಟೀಕಿಸಿದರು.

ಕೇಂದ್ರದ ಬಿಜೆಪಿ ಸರ್ಕಾರ ಜನವಿರೋಧಿ ಸರ್ಕಾರವಾಗಿದೆ. ರಾಜ್ಯ ಹಾಗೂ ಕೇಂದ್ರದಲ್ಲಿ ಒಂದು ಜನಪರವಾದ ಕಾರ್ಯಕ್ರಮ ಬರಲಿಲ್ಲ. ಮಾನವೀಯತೆ, ಕರುಣೆ ಇಲ್ಲದ ಜನವಿರೋಧಿ ಸರ್ಕಾರಗಳಿವು. ಜನರ ಪರವಾಗಿ ಒಂದೇ ಒಂದು ಕಾರ್ಯಕ್ರಮನೀಡಿಲ್ಲ. ಇಂಥ ಜನವಿರೋಧಿ ಸರ್ಕಾರವನ್ನು ಧಿಕ್ಕರಿಸುವ ಕೆಲಸ ಎಲ್ಲರಿಂದ ಆಗಬೇಕು ಎಂದರು.

ಇದನ್ನೂ ಓದಿ:ಹೈಕೋರ್ಟ್ ಮೆಟ್ಟಿಲೇರಿದ 2.5 ಕೋಟಿ ವಂಚನೆ ಪ್ರಕರಣ…ನಟಿ ಅಮೀಶಾಗೆ ಕಾನೂನು ಕಂಟಕ  

ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್, ಎಚ್‌ಪಿಸಿಎಲ್ ಎಲ್ಲವನ್ನೂ ಮಾರಲಾಗುತ್ತಿದೆ. ಮನಮೋಹನ್‌ಸಿಂಗ್ ಸರ್ಕಾರ ಪೆಟ್ರೋಲ್ ಗೆ 3.65 ರೂ. ಮಾತ್ರ ಟ್ಯಾಕ್ಸ್ ಹಾಕುತ್ತಿದ್ದೆವು. ಈಗ 60 ರೂ. ಟ್ಯಾಕ್ಸ್ ಹಾಕಲಾಗುತ್ತಿದೆ. ಪೆಟ್ರೋಲ್ ದರ ಹೆಚ್ಚಳವಾದರೆ ಎಲ್ಲದರ ಬೆಲೆ ಜಾಸ್ತಿಯಾಗುತ್ತದೆ. ಎಚ್‌ಪಿಸಿಎಲ್ 10 ಸಾವಿರ ಕೋಟಿ ಲಾಭ ಮಾಡುತ್ತಿತ್ತು. ಅದನ್ನು ಖಾಸಗಿ ಕಂಪೆನಿಗೆ ಜುಜುಬಿ ರೇಟಿಗೆ ಮಾರಲಾಗುತ್ತಿದೆ. ದೇಶದ ಆಸ್ತಿಯನ್ನು ಮಾರಿಕೊಂಡು ಲೂಟಿ ಮಾಡಲಾಗುತ್ತಿದೆ. ಇದನ್ನೆಲ್ಲ ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ಹೋಗಿ ಜನರಿಗೆ ಹೇಳಬೇಕು ಎಂದು ಖಾದರ್ ಹೇಳಿದರು.

ಜನಸಾಮಾನ್ಯರು ನೆಮ್ಮದಿ ಮತ್ತು ಸ್ವಾಭಿಮಾನದಿಂದ ಬದುಕಬೇಕಾದರೆ ಅದು ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸಾಧ್ಯ. ಇಂದು ಈ ಸಮಾವೇಶ, ಚಾಮರಾಜನಗರದಿಂದ ಆರಂಭವಾಗಿ, ಇಡೀ ರಾಜ್ಯಕ್ಕೆ ಸ್ಫೂರ್ತಿಯಾಗಲಿ. ಎಲ್ಲರೂ ಶ್ರಮಿಸಿದರೆ ಕಾಂಗ್ರೆಸ್ ಅನ್ನು ಸೋಲಿಸಲು ಸಾಧ್ಯವಿಲ್ಲ. ಸಮಾಜವನ್ನು ಒಡೆಯುವ ಬಿಜೆಪಿಯ ಹುನ್ನಾರಕ್ಕೆ ಅವಕಾಶ ನೀಡಬಾರದು. ಯಾರೂ ಕೋಮುವಾದಿಯಾಗಲು ಅವಕಾಶ ನೀಡಬಾರದು. ಅಲ್ಪಸಂಖ್ಯಾತರು ಕೋಮುವಾದಿಯಾದರೆ ಅಲ್ಪಸಂಖ್ಯಾತ ಸಮುದಾಯಕ್ಕೆ ನಷ್ಟವಾಗುತ್ತದೆ. ಅದು ದೇಶಕ್ಕಾಗುವ ನಷ್ಟ. ದೇಶಕ್ಕೆ ಜಾತ್ಯತೀತ ತತ್ವ ಅಗತ್ಯ ಎಂದರು.

ಧ್ರುವನಾರಾಯಣ ಅವರು, ವಿಧಾನಸಭೆಯಲ್ಲಿ ನನಗೆ ಅನೇಕ ವಿಷಯಗಳನ್ನು ಕಲಿಸಿದ್ದಾರೆ. ಸಮರ್ಥವಾಗಿ ಕಲಾಪದಲ್ಲಿ ಮಾತನಾಡಲು ಧ್ರುವನಾರಾಯಣ ಅವರು ನೀಡಿದ ಮಾರ್ಗದರ್ಶನ ಕಾರಣ. ಈಗ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಧ್ರುವನಾರಾಯಣ ನೇಮಕವಾಗಿದ್ದಾರೆ. ಇಡೀ ಜಿಲ್ಲೆಯಲ್ಲಿ ಕಾಂಗ್ರೆಸ್ ಅನ್ನು ಗೆಲ್ಲಿಸಲು ಧ್ರುವನಾರಾಯಣ ಅವರಿಗೆ ಹೆಗಲು ನೀಡಿ ಶ್ರಮಿಸಬೇಕು. ತಳಮಟ್ಟದಿಂದ ಬಿಜೆಪಿಯ ಜನವಿರೋಧಿ ನೀತಿಯನ್ನು ತಿಳಿಸಬೇಕು. ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ಹೋಗಬೇಕು. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸಬೇಕು. ಜನರು ನೆಮ್ಮದಿಯ, ಸ್ವಾಭಿಮಾನದ ಜೀವನ ನಡೆಸಲು ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಬೇಕು ಎಂದು ಯು.ಟಿ. ಖಾದರ್ ಹೇಳಿದರು.

ಇದನ್ನೂ ಓದಿ:ಮೈಸೂರು ಮೇಯರ್ ಹುದ್ದೆ ನಮ್ಮ ಪಕ್ಷದೊಳಗಾದ ಗೊಂದಲದಿಂದ ತಪ್ಪಿ ಹೋಗಿದೆ ; ಆರ್.ಧ್ರುವನಾರಾಯಣ್

ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಪಕ್ಷಕ್ಕಾಗಿ ಯಾರು ನಿರಂತರವಾಗಿ ಶ್ರಮಿಸುತ್ತಾರೋ ಅವರನ್ನು ಪಕ್ಷ ಗುರುತಿಸುತ್ತದೆ ಎಂಬುದಕ್ಕೆ ಧ್ರುವನಾರಾಯಣ ಅವರೇ ನಿದರ್ಶನ. ಅವರು ಸಂಸದರಾಗಿದ್ದಾಗ ಪ್ರತಿ ದಿನವೂ ಜನರ ಜೊತೆ ಇದ್ದರು. ಲೋಕಸಭೆಯಲ್ಲಿ ಸೋತಿದ್ದರೂ ಜನರೊಡನೆ ಇದ್ದಾರೆ.

ಧ್ರುವನಾರಾಯಣ ಅವರಿಗೆ ಒಳ್ಳೆಯ ಹುದ್ದೆಯನ್ನು ನೀಡಿದೆ. ಜಿಲ್ಲೆಯಲ್ಲಿ ಮುಂದಿನ ಜಿ.ಪಂ., ತಾ.ಪಂ., ವಿಧಾನಸಭೆ ಚುನಾವಣೆಗಳಲ್ಲಿ ಪಕ್ಷವನ್ನು ಗೆಲ್ಲಿಸಲಿ ಎಂದು ಆಶಿಸಿದರು.

ಹನೂರು ಶಾಸಕ ಆರ್. ನರೇಂದ್ರ ಮಾತನಾಡಿ, ಕೇಂದ್ರ ಹಾಗೂ ರಾಜ್ಯದಲ್ಲಿ ದುರಾಡಳಿತ ನಡೆಯುತ್ತಿದೆ. ಪ್ರದಾನಿ ನರೇಂದ್ರ ಮೋದಿಯವರಿಗೆ ಎಣ್ಣೆ ಕಂಡರೆ ಆಗುವುದಿಲ್ಲ ಎಂದು ಕಾಣುತ್ತದೆ. ಗ್ಯಾಸ್, ಪೆಟ್ರೊಲ್, ಡೀಸೆಲ್,ಅಡುಗೆ ಎಣ್ಣೆ ಬೆಲೆಗಳು ಹೆಚ್ಚುತ್ತಿವೆ. ಮನಮೋಹನ್‌ಸಿಂಗ್ ಸರ್ಕಾರದಲ್ಲಿ 400 ರೂ. ಇದ್ದ ಸಿಲಿಂಡರ್ ಬೆಲೆ 800 ರೂ. ದಾಟಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಸಂಘಟನೆ, ಹೋರಾಟ ಮಾಡಬೇಕು. ಆ ಸಂಘಟನೆಗೆ ಅನುಕೂಲವಾಗಲು ಧ್ರುವನಾರಾಯಣ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡಿರುವುದು ಸ್ವಾಗತಾರ್ಹ ಎಂದರು.

ಮಾಜಿ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಧ್ರುವನಾರಾಯಣ ಅವರು ಶಾಸಕರಾಗಿ, ಸಂಸದರಾಗಿ ಉತ್ತಮ ಕೆಲಸ ಮಾಡಿದ್ದರು. ಅದನ್ನು ಗುರುತಿಸಿ ಸೋನಿಯಾ ಗಾಂಧಿಯವರು ಕಾರ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. ಅವರಿಗೆ ಜವಾಬ್ದಾರಿ ಹೆಚ್ಚಾಗಿದೆ. ಐವರು ಕಾರ್ಯಾಧ್ಯಕ್ಷರು ಜೊತೆಗೂಡಿ, ಭಾಗ್ಯಗಳನ್ನು ಕೊಟ್ಟ ಸಿದ್ದರಾಮಯ್ಯನವರ ಕಾರ್ಯಕ್ರಮವನ್ನು ಮುಂದಿಟ್ಟುಕೊಂಡು ಪಕ್ಷದ ಸಂಘಟನೆಗೆ ಮುಂದಾಗಬೇಕು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಅನಿಲ್ ಚಿಕ್ಕಮಾದು, ಧರ್ಮಸೇನ, ಮಾಜಿ ಸಂಸದ ಎಂ. ಶಿವಣ್ಣ, ಎ. ಸಿದ್ಧರಾಜು, ಮಾಜಿ ಎಸ್. ಜಯಣ್ಣ, ಎ.ಆರ್.ಕೃಷ್ಣಮೂರ್ತಿ, ಕಳಲೆ ಕೇಶವಮೂರ್ತಿ, ಎಸ್. ಬಾಲರಾಜು, ಎಚ್.ಎಂ. ಗಣೇಶ್‌ಪ್ರಸಾದ್, ಜಿ.ಪಂ. ಅಧ್ಯಕ್ಷೆ ಅಶ್ವಿನಿ, ಉಪಾಧ್ಯಕ್ಷೆ ಶಶಿಕಲಾ, ಜಿಲ್ಲಾಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಬ್ಲಾಕ್ ಅಧ್ಯಕ್ಷರು, ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.