ಕೆಪಿಸಿಸಿ ನೋಟಿಸ್ ನಿಂದ ಬೇಸರವಾಯ್ತು: ಅಶೋಕ್ ಪಟ್ಟಣ್
ನಾವು ಯಾವುದೇ ಶಿಸ್ತು ಉಲ್ಲಂಘಿಸಿಲ್ಲ
Team Udayavani, Feb 11, 2022, 1:42 PM IST
ಬೆಂಗಳೂರು : ಕೆಪಿಸಿಸಿ ಶಿಸ್ತು ಸಮಿತಿ ನೀಡಿದ ನೋಟಿಸ್ ನಿಂದ ಮನಸಿಗೆ ನೋವಾಗಿದೆ. ನಾವು ಯಾವುದೇ ಶಿಸ್ತು ಉಲ್ಲಂಘಿಸಿಲ್ಲ ಎಂದು ಮಾಜಿ ಶಾಸಕ ಅಶೋಕ್ ಪಟ್ಟಣ್ ಕೆಪಿಸಿಸಿ ಶಿಸ್ತು ಸಮಿತಿಗೆ ಉತ್ತರ ನೀಡಿದ್ದಾರೆ.
ಈ ಸಂಬಂಧ ರೆಹಮಾನ್ ಖಾನ್ ನೇತೃತ್ವದ ಶಿಸ್ತು ಸಮಿತಿ ನೀಡಿದ ನೋಟಿಸ್ ಗೆ ಅವರು ಸಲ್ಲಿಸಿದ ಲಿಖಿತ ಉತ್ತರದಲ್ಲಿ ವಿವರಣೆ ನೀಡಿದ್ದಾರೆ.
ನಾನು ಪಕ್ಷದ ಶಿಸ್ತಿನ ವ್ಯಾಪ್ತಿಯನ್ನು ಮೀರಿ ನಾನು ಮಾತನಾಡಿಲ್ಲ. ನೋಟಿಸ್ ನೀಡುವ ಬದಲು ನನ್ನನ್ನು ಕರೆದು ಅಂದು ನಡೆದ ಘಟನೆಯ ಬಗ್ಗೆ ವಿವರಣೆ ಕೇಳಿದ್ದರೆ ಎಲ್ಲವನ್ನೂ ಹೇಳುತ್ತಿದ್ದೆ. ನಾನು ಶಿಸ್ತಿನ ವ್ಯಾಪ್ತಿಯನ್ನು ಉಲ್ಲಂಘಿಸಿಲ್ಲ . ಪಕ್ಷ ನೀಡಿದ ನೋಟಿಸ್ ನಿಂದ ನನಗೆ ಬೇಸರವಾಗಿದೆ ಎಂದು ಉತ್ತರದಲ್ಲಿ ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರ ಪತ್ರಿಕಾಗೋಷ್ಠಿಯಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಪಿಸುಮಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ರಾಮದುರ್ಗ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಅಶೋಕ್ ಪಟ್ಟಣಗೆ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.