ಖ್ಯಾತ ಪತ್ರಕರ್ತ, ಪದ್ಮಶ್ರೀ ವಿನೋದ್ ದುವಾ ವಿಧಿವಶ
Team Udayavani, Dec 4, 2021, 6:27 PM IST
ನವದೆಹಲಿ: ಹಿರಿಯ ಪತ್ರಕರ್ತ ವಿನೋದ್ ದುವಾ ಅವರು ದೀರ್ಘಕಾಲದ ಅನಾರೋಗ್ಯದಿಂದ ಶನಿವಾರ ಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೋವಿಡ್ ಸೋಂಕಿನ ನಂತರ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 67 ವರ್ಷದ ಪತ್ರಕರ್ತ ದುವಾ ಅವರನ್ನು ಕಳೆದ ವಾರ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು.
ತಂದೆ ಸಾವನ್ನಪ್ಪಿದ್ದಾರೆ ಎಂದು ಪುತ್ರಿ ಮಲ್ಲಿಕಾ ದುವಾ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಖಚಿತಪಡಿಸಿದ್ದಾರೆ.
ವಿನೋದ್ ದುವಾ ದೂರದರ್ಶನ ಮತ್ತು ಎನ್ ಡಿಟಿವಿ ಸಂಸ್ಥೆಗಳಲ್ಲಿ ಕೆಲಸ ಮಾಡಿದ ಅನುಭವಿ ಪತ್ರಕರ್ತರಾಗಿದ್ದರು.
1996 ರಲ್ಲಿ, ಅವರು ಗೌರವಾನ್ವಿತ ರಾಮನಾಥ್ ಗೋಯೆಂಕಾ ಪತ್ರಿಕೋದ್ಯಮ ಪ್ರಶಸ್ತಿಯನ್ನು ಪಡೆದ ಮೊದಲ ಎಲೆಕ್ಟ್ರಾನಿಕ್ ಮಾಧ್ಯಮ ಪತ್ರಕರ್ತರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
2008 ರಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.