ಕಾರು ಮಾಲೀಕನಿಗೆ 20,000 ದಂಡ ವಿಧಿಸಿದ ಟ್ರಾಫಿಕ್ ಪೊಲೀಸ್ : ಕಾರಣ ಇಷ್ಟೇ
Team Udayavani, Apr 2, 2022, 1:49 PM IST
ಉತ್ತರ ಪ್ರದೇಶ : ಅದೆಷ್ಟೋ ಸಲ ವಾಹನ ಚಾಲಕರಿಗೆ ಗೊತ್ತಿಲ್ಲದೇ ಸಂಚಾರಿ ನಿಯಮ ಉಲ್ಲಂಘಿಸಿದ್ದಾರೆ ಎಂದು ವಾಹನ ಮಾಲಕರ ಮನೆಗೆ ನೊಟೀಸ್ ಬರುವುದಿದೆ, ಅಲ್ಲದೆ ಕೆಲವೊಂದು ಸಲ ವಾಹನ ಮಾಲಕರ ತಪ್ಪಿಲ್ಲದಿದ್ದರೂ ದಂಡ ಕಟ್ಟಲು ನೊಟೀಸ್ ಬಂದದ್ದೂ ಇದೆ.
ಆದರೆ ಉತ್ತರ ಪ್ರದೇಶದ ಗಾಝಿಯಾಬಾದ್ ಮೂಲದ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ ಇಪ್ಪತ್ತು ಸಾವಿರ ಮೊತ್ತದ ದಂಡವನ್ನು ಸಂಚಾರಿ ಪೊಲೀಸರು ವಿಧಿಸಿದ್ದಾರೆ. ಕಾರಣ ಇಷ್ಟೇ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಯುವಕರ ಗುಂಪೊಂದು ತಮ್ಮ ಕಾರಿನ ಛಾವಣಿಯ ಮೇಲೆ ಡ್ಯಾನ್ಸ್ ಮಾಡಿದ್ದಾರೆ, ವಾಹನ ಸಂಚಾರ ಇರುವ ರಸ್ತೆಯಲ್ಲೇ ಯುವಕರು ಮದ್ಯ ಸೇವಿಸಿ ಕಾರು ಚಲಿಸಿಸುತ್ತಿದ್ದಂತೆ ಕಾರಿನ ಛಾವಣಿ ಮೇಲೆ ಇಬ್ಬರು ಯುವಕರು ಕುಣಿದಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿದೆ, ಈ ವೇಳೆ ಆ ರಸ್ತೆಯಲ್ಲೇ ಸಂಚರಿಸುತ್ತಿದ್ದ ಇನ್ನೊಂದು ಕಾರಿನವರು ಆ ಯುವಕರ ವಿಡಿಯೋ ಮಾಡಿ ಗಾಝಿಯಾಬಾದ್ ಪೊಲೀಸರಿಗೆ ಟ್ವಿಟರ್ ಮೂಲಕ ಶೇರ್ ಮಾಡಿ ಯುವಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ..
Meanwhile in Ghaziabad, a group of boys, visibly drunk, dancing on the roof of their car on the Delhi-Meerut expressway.
Hope @ghaziabadpolice makes them dance to their tunes in the lockup sooner. pic.twitter.com/mJck8JQ4Kh
— Prashant Kumar (@scribe_prashant) April 2, 2022
33 ಸೆಕುಂಡುಗಳ ವಿಡಿಯೋ ವೈರಲ್ ಆಗುತ್ತಿದ್ದಂತೆ ಗಾಝಿಯಾಬಾದ್ ಪೊಲೀಸರು ಕಾರಿನ ಮಾಲಕರಿಗೆ ಸಂಚಾರಿ ನಿಯಮ ಉಲ್ಲಂಘನೆಗೆ ಸಂಬಂಧಿಸಿ ಇಪ್ಪತ್ತು ಸಾವಿರ ರೂಪಾಯಿ ದಂಡ ಕಟ್ಟುವಂತೆ ನೊಟೀಸ್ ಕಳುಹಿಸಿದ್ದಾರೆ. ಅಲ್ಲದೆ ಪೊಲೀಸರು ವಾಹನ ಮಾಲಕರಿಗೆ ಕಳುಹಿಸಿದ ನೊಟೀಸ್ ನ ಪ್ರತಿಯನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
— Gzb Traffic police (@Gzbtrafficpol) April 2, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.