ವಿಧಾನ-ಕದನ 2023: ಸುಗಮ ಸಂಚಾರಕ್ಕೆ ಬೇಕಿದೆ ಪೂರಕ ವ್ಯವಸ್ಥೆ
Team Udayavani, Mar 31, 2023, 6:22 AM IST
ಮಂಗಳೂರು: ಅಭಿವೃದ್ಧಿ ಹೊಂದುತ್ತಿರುವ ಬಂದರು ನಗರಿ ಮಂಗಳೂರಿನಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿರುವುದರಿಂದ ಇಲ್ಲಿ ಸುಗಮ ವಾಹನ ಸಂಚಾರಕ್ಕೆ ಪೂರಕ ವ್ಯವಸ್ಥೆಗಳು ಬೇಕು ಎಂಬ ಕೂಗು ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಬೆಂಗಳೂರಿನಲ್ಲಿ ಮೆಟ್ರೋ ರೈಲು ಆರಂಭಗೊಂಡಾಗ ಮಂಗಳೂರಿನಂತಹ ನಗರಗಳಲ್ಲಿ ಮೆಟ್ರೋ ಲೈಟ್ ರೈಲು ಯೋಜನೆ ಪ್ರಸ್ತಾವಗೊಂಡಿತ್ತು.
ಬೆಂಗಳೂರಿನಲ್ಲಿರುವ ಮೆಟ್ರೋ ರೈಲಿನ ಮಾದರಿಯಲ್ಲಿ ಕಡಿಮೆ ವೆಚ್ಚದ ಮೆಟ್ರೋ ಲೈಟ್ ರೈಲುಗಳು ಮಂಗಳೂರಿಗೆ ಸೂಕ್ತ ಎಂಬ ಹಿನ್ನೆಲೆಯಲ್ಲಿ ಈ ಹಿಂದೊಮ್ಮೆ ರಾಜ್ಯ ಮುಂಗಡ ಪತ್ರದಲ್ಲಿಯೂ ಪ್ರಸ್ತಾವನೆ ಮಾಡಲಾಗಿತ್ತು. ಅನಂತರ ಕೇಂದ್ರ ಸರಕಾರ ದೇಶದ ಮಧ್ಯಮ ಮತ್ತು ಸಣ್ಣ ನಗರಗಳಲ್ಲಿ ಮೆಟ್ರೋ ಲೈಟ್ ರೈಲು ವ್ಯವಸ್ಥೆ ಅನುಷ್ಠಾನಗೊಳಿಸುವ ಯೋಜನೆ ರೂಪಿಸಿತ್ತು.
ಸ್ಕೈಬಸ್, ಮೋನೋ ರೈಲು
ಸ್ಕೈ ಬಸ್ ಯೋಜನೆಯೂ ಚರ್ಚೆಗೆ ಬಂದಿತ್ತು. ಆದರೆ ಅದು ಗೋವಾದಲ್ಲಿ ವಿಫಲ ವಾಗಿದೆ ಎಂಬ ಅಂಶಗಳ ಹಿನ್ನೆಲೆಯಲ್ಲಿ ನಿರ್ಲಕ್ಷಿಸಲ್ಪಟ್ಟಿತ್ತು. ಆ ಬಳಿಕ 2008ರ ಬಜೆಟ್‌ನಲ್ಲಿ ಮೋನೋ ರೈಲು ಪ್ರಸ್ತಾವನೆ ಮಾಡಲಾಗಿತ್ತು. ಸಾಧ್ಯತಾ ವರದಿ ತಯಾರಿಸಲು 1 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಅಶ್ವಾಸನೆ ದೊರೆತರೂ ಅದು ಕಾರ್ಯಗತಗೊಂಡಿಲ್ಲ . ಇವೆಲ್ಲದರ ನಡುವೆ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ , ಧಾರವಾಡಗಳಲ್ಲಿ ಮೋನೋ ರೈಲು ಯೋಜನೆಯನ್ನು ಕೈಗೆತ್ತಿಕೊಳ್ಳಲು ಮಲೇಷ್ಯಾದ ಸಂಸ್ಥೆಯೊಂದು ಆಸಕ್ತಿ ವಹಿಸಿತ್ತು. ಮಂಗಳೂರಿನಲ್ಲಿ 30 ಕಿ.ಮೀ. ವರೆಗೆ ಮೋನೋರೈಲು ಜಾಲ ಕಲ್ಪಿಸುವ ಬಗ್ಗೆ ಕಂಪೆನಿ ಪ್ರಸ್ತಾವನೆ ಮಾಡಿತ್ತು. ಈ ಬಗ್ಗೆ ರಾಜ್ಯ ಸರಕಾರದೊಂದಿಗೆ ಮಾತುಕತೆ ನಡೆದಿದ್ದ ಬಗ್ಗೆಯೂ ವರದಿಯಾಗಿತ್ತು.
ಏನಿದು ಮೆಟ್ರೋ ಲೈಟ್ ರೈಲು?
ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿ ವಾಲಯ ಮೆಟ್ರೋಲೈಟ್ ರೈಲು ಸಂಚಾರ ಯೋಜನೆ ರೂಪಿಸಿತ್ತು. ಮೆಟ್ರೋಲೈಟ್ ರೈಲಿನಲ್ಲಿ ಮೂರು ಬೋಗಿಗಳು ಇರುತ್ತವೆ. ಇದರಲ್ಲಿ 300 ಮಂದಿ ಪ್ರಯಾಣಿಸಬಹುದಾಗಿದೆ. ಪ್ರಸ್ತುತ ಇರುವ ರಸ್ತೆಗಳ ಮಧ್ಯೆ ಇರುವ ಸ್ಥಳಾವಕಾಶವನ್ನು ಉಪಯೋಗಿಸಿಕೊಂಡು ಮಾರ್ಗ ನಿರ್ಮಿಸಬಹುದಾಗಿದೆ. ಅಗತ್ಯ ಬಿದ್ದರೆ ಮೆಟ್ರೋಲೈಟ್ ಮಾರ್ಗಕ್ಕೆ ಬೇಲಿ ಹಾಕಿಕೊಳ್ಳ ಬಹುದು. ಈ ರೈಲು ಗಂಟೆಗೆ 60 ಕಿ.ಮೀ. ವೇಗದಲ್ಲಿ ಚಲಿಸಬಲ್ಲದು. ರೈಲಿನೊಳಗೆ ಸಿಗ್ನಲ್ ವ್ಯವಸ್ಥೆ ವೈಫಲ್ಯ ಅನುಭವಿಸಿದರೂ 25 ಕಿ.ಮೀ. ಚಲಿಸಬಲ್ಲದು ಎಂದು ಮಾನದಂಡದಲ್ಲಿ ವಿವರಿಸಲಾಗಿದೆ. ಸಾಮಾನ್ಯವಾಗಿ ಪ್ರಸ್ತುತ ಮಹಾನಗರಗಳಲ್ಲಿ ಇರುವ ಮೆಟ್ರೋ ರೈಲು ವ್ಯವಸ್ಥೆಗಳಿಗೆ ಹೋಲಿಸಿದರೆ ಇವುಗಳ ವೆಚ್ಚ ಶೇ.40 ರಷ್ಟು ಕಡಿಮೆ ಎಂದು ಅಂದಾಜಿಸಲಾಗಿದೆ. ಆದ್ದರಿಂದ ಸಣ್ಣ ನಗರಗಳು ಹಾಗೂ ಪಟ್ಟಣಗಳಿಗೆ ಮೆಟ್ರೋ ಲೈಟ್ ವ್ಯವಸ್ಥೆ ಆರ್ಥಿಕವಾಗಿ ಕಾರ್ಯಸಾಧುವಾಗಬಲ್ಲದು ಎಂಬುದು ಕೇಂದ್ರ ಸರಕಾರದ ಲೆಕ್ಕಾಚಾರವಾಗಿತ್ತು.
~ ಸಂತೋಷ್ ಬೊಳ್ಳೆಟ್ಟು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.