ವಿಜಯಪುರ: ಸೈನಿಕ ಶಾಲೆ ಹಳೆ ವಿದ್ಯಾರ್ಥಿ ವಿಜಯಮಹಾಂತೇಶ ದಾನಮ್ಮನವರ್ ಈಗ ಜಿಲ್ಲಾಧಿಕಾರಿ

ಇತ್ತೀಚೆಗಷ್ಟೇ ನಡೆದ ಕಾರು ಪಲ್ಟಿ ಅವಘಡದಲ್ಲಿ ಪಾರಾಗಿ ಬಂದ ಅಧಿಕಾರಿ

Team Udayavani, Apr 22, 2022, 6:35 PM IST

1-sdfsdf

ಸುನಿಲ್ ಕುಮಾರ್, ವಿಜಯಮಹಾಂತೇಶ ದಾನಮ್ಮನವರ್

ವಿಜಯಪುರ: ವಿಜಯಪುರ ಸೈನಿಕ ಶಾಲೆಯ ಹಳೆಯ ವಿದ್ಯಾರ್ಥಿ ವಿಜಯಮಹಾಂತೇಶ ದಾನಮ್ಮವರ್ ತಾವು ಶಿಕ್ಷಣ ಪಡೆದ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ವರ್ಗವಾಗಿದ್ದಾರೆ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ವಿಜಯಮಹಾಂತೇಶ ದಾನಮ್ಮನವರ್ ಶುಕ್ರವಾರ ನಿರ್ಗಮಿತ ಜಿಲ್ಲಾಧಿಕಾರಿ ಸುನಿಲಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ಹುಗೂಚ್ಛ ನೀಡುವ ಮೂಲಕ ವಿಜಯಮಹಾಂತೇಶ ಅವರಿಗೆ ಅಧಿಕಾರ ಹಸ್ತಾಂತರಿಸಿ, ಬರಮಾಡಿಕೊಂಡರು.

ವಿಜಯ ಮಹಾಂತೇಶ ದಾನಮ್ಮನವರ್ ಅವರು ತಮ್ಮ ಪತ್ನಿ ಶ್ವೇತಾ ಮತ್ತು ಮಕ್ಕಳಾದ ತನ್ವಿ ಹಾಗೂ ವಿಹಾನ್ ಅವರೊಂದಿಗೆ ಬೆಳಗ್ಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಅವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದ್ದು ವಿಶೇಷವಾಗಿತ್ತು. ಇತ್ತೀಚೆಗಷ್ಟೇ ನಡೆದ ಕಾರು ಪಲ್ಟಿ ಅವಘಡದಲ್ಲಿ ಪಾರಾಗಿ ಬಂದ ವಿಜಯ ಮಹಾಂತೇಶ ಅವರು, ಚಿಕಿತ್ಸೆ ಪಡೆದುಕೊಂಡು, ವಿಜಯಪುರಕ್ಕೆ ಆಗಮಿಸಿ ಜಿಲ್ಲಾಧಿಕಾರಿಯವರ ಆಸನದಲ್ಲಿ ಕುಳಿತುಕೊಳ್ಳುತ್ತಿದ್ದಂತೆ ಅವರ ಪತ್ನಿ ಮತ್ತು ಮಕ್ಕಳ ಮೊಗದಲ್ಲಿ ಸಂಭ್ರಮದ ಕ್ಷಣಗಳನ್ನು ಅನುಭವಿಸಿದರು.

ವಿಜಯಪುರ ಸೈನಿಕ ಶಾಲೆ ವಿದ್ಯಾರ್ಥಿ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದಾನಮ್ಮನವರ, 1989 ರಲ್ಲಿ ವಿಜಯಪುರ ಸೈನಿಕ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದಾರೆ. ಸೈನಿಕ ಶಾಲೆಯ ಶಿಕ್ಷಣ ಪಡೆದ ಹಳೆಯ ವಿದ್ಯಾರ್ಥಿಯೊಬ್ಬರು ಕಳೆದ ಒಂದು ದಶಕದಲ್ಲಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವುದು ಇದು ಎರಡನೇ ಬಾರಿ. 10 ವರ್ಷಗಳ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಶಿವಯೋಗಿ ಕಳಸದ ಅವರು ಕೂಡ ಸೈನಿಕ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದರು.

ಬೀದರ್ ಪಶು, ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದಿಂದ ಪದವಿ ಪಡೆದ ಬಳಿಕ ಕೇಂದ್ರ ಸರ್ಕಾರದ ಮಾಹಿತಿ-ಪ್ರಸಾರ ಇಲಾಖೆಯಲ್ಲಿ 10 ತಿಂಗಳ ಸೇವೆ ಸಲ್ಲಿಸಿದ್ದರು. ಬಳಿಕ 2004 ರಲ್ಲಿ ಕರ್ನಾಟಕ ಆಡಳಿತ ಸೇವೆಗೆ ಆಯ್ಕೆಯಾಗಿ, 2013ನೇ ಬ್ಯಾಚಿನ ಐಎಎಸ್ ಅಧಿಕಾರಿಯಾದವರು.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ವಿಜಯಮಹಾಂತೇಶ, ದಾವಣಗೆರೆ ಜಿ.ಪಂ. ಸಿಇಒ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ಕಾರವಾರ, ಬಾಗಲಕೋಟ, ಬಳ್ಳಾರಿ ಜಿಲ್ಲೆಗಳಲ್ಲಿ ಅಪರ ಜಿಲ್ಲಾಧಿಕಾರಿಯಾಗಿ, ಬೆಳಗಾವಿ ಜಿಲ್ಲೆಯಲ್ಲಿ ಸಹಾಯಕ ಆಯುಕ್ತರಾಗಿ, ಹೆಸ್ಕಾಂ ಜನರಲ್ ಮ್ಯಾನೇಜರ್ ಆಗಿ, ರಾಜ್ಯ ಶಿಷ್ಟಾಚಾರ ಇಲಾಖೆಯ ಉಪ ಕಾರ್ಯದರ್ಶಿ ಸೇರಿದಂತೆ ಸರ್ಕಾರದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಉತ್ತಮ ಸೇವೆಗೆ ಯತ್ನ
ಅಧಿಕಾರ ಸ್ವೀಕಾರದ ಬಳಿಕ ಜಿಲ್ಲೆಯ ಪತ್ರಕರ್ತರೊಂದಿಗೆ ತುರ್ತು ಪತ್ರಿಕಾಗೋಷ್ಠಿ ನಡೆಸಿದ ನೂತನ ಜಿಲ್ಲಾಧಿಕಾರಿ ವಿಜಯಮಹಾಂತೇಶ, ವಿಜಯಪುರ ನಾನು ಶಿಕ್ಷಣ ಪಡೆದ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಬಂದಿದ್ದು ಸಂತಸವಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಬೇಕೆಂಬ ನನ್ನ ಕನಸು ವಿಜಯಪುರ ಜಿಲ್ಲೆಯಿಂದಲೇ ಆರಂಭಗೊಂಡಿರುವುದು ನನ್ನ ಸಂತಸ ತಂದಿದೆ ಎಂದರು.

ಜಿಲ್ಲೆಯ ಶಿಕ್ಷಣ ಹಾಗೂ ಆರೋಗ್ಯ ಸೇವೆಗೆ ಆದ್ಯತೆ ನೀಡುತ್ತೇನೆ. ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಸುನಿಲ್ ಕುಮಾರ ಸೇರಿದಂತೆ ಜಿಲ್ಲೆಯಲ್ಲಿ ಈ ಹಿಂದೆ ಅಧಿಕಾರ ನಡೆಸಿದ ಜಿಲ್ಲಾಧಿಕಾರಿಗಳು ಅತ್ಯುತ್ತಮ ಆಡಳಿತ ನೀಡಿದ್ದು, ನಾನು ಇತರೆ ಜಿಲ್ಲೆಗಳಲ್ಲಿ ಇದ್ದಾಗ ಈ ಜಿಲ್ಲೆಯ ಆಡಳಿತದ ಸಾಧನೆಗಳು ಅನುಕರಣೀಯವಾಗಿದ್ದವು. ಹಿಂದಿನ ಅಧಿಕಾರಿಗಳು ಜಿಲ್ಲೆಯಲ್ಲಿ ಮೂಡಿಸಿರುವ ಅಭಿವೃದ್ಧಿ ಪರ ಉತ್ತಮ ಕಾಯಕ್ರಮಗಳನ್ನು ನಾನು ಮುಂದುವರೆಸುವ ಜೊತೆಗೆ ಜನರ ಭಾವನೆಗಳಿಗೆ ಸ್ಪಂದಿಸುತ್ತೇನೆ ಎಂದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.