ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ 3 ದಿನ ಸಿಬಿಐ ವಶಕ್ಕೆ!
Team Udayavani, Nov 6, 2020, 7:06 PM IST
ಧಾರವಾಡ: ಜಿಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು 3ನೇ ಹೆಚ್ಚುವರಿ ನ್ಯಾಯಾಲಯ ಮೂರು ದಿನ (ನ.9ರವರೆಗೆ)ಸಿಬಿಐ ವಶಕ್ಕೆ ನೀಡಿ ಶುಕ್ರವಾರ ಆದೇಶ ಹೊರಡಿಸಿದೆ.
ನ್ಯಾಯಾಂಗ ಬಂಧನದಲ್ಲಿ ಇರುವ ಮಾಜಿ ಸಚಿವ ವಿನಯ ಕುಲಕರ್ಣಿ ಪ್ರಕರಣದ ಬಗ್ಗೆ ಹೆಚ್ಚಿನ ವಿಚಾರಣೆಗೆ ಒಳಪಡಿಸಲು ತಮ್ಮ ವಶಕ್ಕೆ ನೀಡುವಂತೆ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.
ಶುಕ್ರವಾರ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಧಾರವಾಡದ 3ನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀರಾದ ಎಂ.ಪಂಚಾಕ್ಷರಿ ಅವರು ವಕೀಲರಿಂದ ವಾದ-ವಿವಾದ ಆಲಿಸಿ ಈ ಆದೇಶ ನೀಡಿದರು.
ಆರೋಪಿ ವಿನಯ ಕುಲಕರ್ಣಿ ಅವರ ಮೇಲೆ ಗಂಭೀರ ಆರೋಪ ಕೇಳಿಬಂದಿವೆ. ಹೆಚ್ಚಿನ ವಿಚಾರಣೆಯ ಅಗತ್ಯವಿದ್ದು, ಮೂರು ದಿನ ಸಿಬಿಐ ವಶಕ್ಕೆ ನೀಡುವಂತೆ ಸಿಬಿಐ ಪರ ವಕೀಲ ಸುದರ್ಶನ ನ್ಯಾಯಾಲಯಕ್ಕೆ ಮನವಿ ಮಾಡಿದರು.
ಇದನ್ನೂ ಓದಿ:ಕರವಸ್ತ್ರ ಮತ್ತು ಬಟ್ಟೆಯಿಂದ ರಕ್ಷಣೆ ಪಡೆದರೆ ದಂಡವಿಧಿಸಬೇಡಿ! ಮಾರ್ಷಲ್‌ಗಳಿಗೆ ಆಯುಕ್ತ ಸೂಚನೆ
ಪ್ರತಿವಾದ ಮಂಡಿಸಿದ ಆರೋಪಿ ಪರ ವಕೀಲ ಬಾಹುಬಲಿ ದನವಾಡಿ, ಇದು ನಾಲ್ಕು ವರ್ಷದ ಹಿಂದಿನ ಪ್ರಕರಣ. ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಹೆಚ್ಚಿನ ವಿಚಾರಣೆ ಅಗತ್ಯವಿಲ್ಲ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿದರು.
ಅಲ್ಲದೇ, ಸಿಬಿಐ ವಶದ ಬಗ್ಗೆ ತಕಾರಾರು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಎಂ.ಪಂಚಾಕ್ಷರಿ ಅವರು ವಿನಯ ಕುಲಕರ್ಣಿ ಅವರನ್ನು ನ.9ರವರೆಗೆ ವಿಚಾರಣೆಗೆ ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದರು.
ಗುರುವಾರ ಜಿಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಡಿ ಸಿಬಿಐ ಅಧಿಕಾರಿಗಳು ಕಲಂ 302, 143, 147, 148, 120-ಬಿ ಅಡಿ ವಿನಯ್ ಕುಲಕರ್ಣಿ ವಶಕ್ಕೆ ಪಡೆದು, ವಿಚಾರಣೆ ಬಳಕ ೩ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಹಾಜರಪಡಿಸಿದ್ದರು. ನ್ಯಾಯಾಲಯ ಒಂದು ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದರಿಂದ, ಹಿಂಡಲಗಾ ಜೈಲಿನಲ್ಲಿದ್ದ ವಿನಯ ಅವರನ್ನು ಹೆಚ್ಚಿನ ವಿಚಾರಣೆಗೆ ಪುನಃ ನ್ಯಾಯಾಲಯ ಸಿಬಿಐಗೆ ಹಸ್ತಾಂತರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.