ನೀತಿ ಸಂಹಿತೆ ಉಲ್ಲಂಘನೆ: ನಡ್ಡಾ ವಿರುದ್ಧದ ತನಿಖೆಗೆ ಮಧ್ಯಂತರ ತಡೆ
Team Udayavani, Jul 9, 2023, 7:57 AM IST
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ನಡೆದಿದ್ದ ಬಿಜೆಪಿ ಪ್ರಚಾರದ ವೇಳೆ ಮತದಾರರಿಗೆ ಆಮಿಷವೊಡ್ಡುವ ರೀತಿಯಲ್ಲಿ ಭಾಷಣ ಮಾಡಿದ್ದ ಆರೋಪ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ದಾಖಲಾಗಿದ್ದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ತಮ್ಮ ವಿರುದ್ಧ ಹರಪನಹಳ್ಳಿ ಠಾಣಾ ಪೊಲೀಸರು ದಾಖಲಿಸಿರುವ ಪ್ರಕರಣ ಹಾಗೂ ಅದರ ತನಿಖೆಯನ್ನು ರದ್ದುಪಡಿಸುವಂತೆ ಕೋರಿ ನಡ್ಡಾ ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿ ವಿಚಾರಣೆಯನ್ನು ಜುಲೈ 21ಕ್ಕೆ ಮಂದೂಡಿದೆ.
ಪ್ರಕರಣದ ಹಿನ್ನೆಲೆ:
2023ರ ಮೇ 7ರಂದು ಐ.ಬಿ. ವೃತ್ತದಲ್ಲಿ ಬಿಜೆಪಿ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ನಡ್ಡಾ ಅವರು ಮಾತನಾಡಿ, ಡಬಲ್ ಇಂಜಿನ್ ಸರ್ಕಾರ ಬಂದರೆ ಕೇಂದ್ರದ ಯೋಜನೆಗಳೆಲ್ಲ ರಾಜ್ಯದಲ್ಲಿ ಮಂದುವರಿಯುತ್ತವೆ. ಇಲ್ಲದಿದ್ದರೆ ವಂಚಿತರಾಗಲಿದ್ದೀರಿ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೇಂದ್ರದ ಹಲವು ಯೋಜನೆಗಳು ಬಂದ್ ಆಗಲಿವೆ. ಅಭಿವೃದ್ಧಿ ಬೇಕಾದ್ರೆ ಬಿಜೆಪಿ ಗೆಲ್ಲಿಸಬೇಕು ಎಂದು ಹೇಳಿಕೆ ನೀಡಿದ್ದರು. ಇದರ ವಿರುದ್ಧ ಚುನಾವಣಾ ವಿಚಕ್ಷಣಾ ದಳದ ಅಧಿಕಾರಿಗಳು ಹರಪ್ಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಪ್ರಕರಣ ರದ್ದುಪಡಿಸುವಂತೆ ಕೋರಿ ನಡ್ಡಾ ಹೈಕೋರ್ಟ್ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.