ಸಾಗರ: ವಾಂತಿ, ಬೇಧಿ ; ನೂರಾರು ಮಂದಿ ಆಸ್ಪತ್ರೆಗೆ ದಾಖಲು, ಆತಂಕ


Team Udayavani, Nov 13, 2021, 5:05 PM IST

1-sa-1

ಸಾಗರ: ತಾಲೂಕಿನ ಕಾರ್ಗಲ್, ಜೋಗ್, ಲಿಂಗನಮಕ್ಕಿ ಸುತ್ತಮುತ್ತಲಿನ ಪ್ರದೇಶದ ನಾಗರೀಕರು ಹೊಟ್ಟೆನೋವು, ವಾಂತಿ, ಬೇಧಿ ಎಂದು ಅಸ್ವಸ್ಥಗೊಂಡು ಶುಕ್ರವಾರ ಕಾರ್ಗಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಘಟನೆ ನಡೆದಿದೆ.

ಜೋಗದಲ್ಲಿ ಫಾಲ್ಸ್ ಜೆಎಂಎ ಕೆಲಸಕ್ಕೆ ಬಂದಿದ್ದ ಸುಮಾರು 150ಕ್ಕೂ ಹೆಚ್ಚು ಕಾರ್ಮಿಕರು ಹಾಗೂ ಕಾಳಮಂಜಿ, ಫಾತಿಮಾಪುರ, ಕಾರ್ಗಲ್, ಲಿಂಗನಮಕ್ಕಿ ಸೇರಿದಂತೆ ಅಕ್ಕಪಕ್ಕದ ಗ್ರಾಮದ ನಿವಾಸಿಗಳು ದಿಢೀರ್ ಅಸ್ವಸ್ಥಗೊಂಡಿದ್ದಾರೆ. ನಿವಾಸಿಗಳು ಅಸ್ವಸ್ಥಗೊಳ್ಳಲು ಕಾರಣ ತಿಳಿದು ಬಂದಿಲ್ಲ.

ಕಾರ್ಗಲ್ ಆಸ್ಪತ್ರೆಯಲ್ಲಿ ಸ್ಥಳಾಭಾವ ಇರುವ ಹಿನ್ನೆಲೆಯಲ್ಲಿ ಅಸ್ವಸ್ಥಗೊಂಡು ಬಂದವರಿಗೆ ಚಿಕಿತ್ಸೆ ನೀಡಿ ಮನೆಗೆ ಕಳಿಸಲಾಗಿದೆ. ಸದ್ಯ ಕಾರ್ಗಲ್ ಆಸ್ಪತ್ರೆಯಲ್ಲಿ 20ಕ್ಕೂ ಹೆಚ್ಚು ಜನರು ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಲಶುದ್ಧೀಕರಣ ಘಟಕದಿಂದ ಪೂರೈಕೆ ಮಾಡುತ್ತಿರುವ ನೀರು ಸೇವಿಸಿ ಸ್ಥಳೀಯರು ಅಸ್ವಸ್ಥಗೊಂಡಿರಬಹುದು ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಬೆಳಿಗ್ಗೆಯಿಂದಲೇ ಜನರು ಸರದಿ ಸಾಲಿನಲ್ಲಿ ಖಾಸಗಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದು ಚಿಕಿತ್ಸೆ ಪಡೆದಿದ್ದಾರೆ. ಆಸ್ಪತ್ರೆಗೆ ತಪಾಸಣೆಗೆ ಬಂದ ಎಲ್ಲ ರೋಗಿಗಳಿಗೂ ವಾಂತಿ ಬೇಧಿ ಮತ್ತು ಹೊಟ್ಟೆ ನೋವು, ತಲೆನೋವು, ಜ್ವರ ಕಾಣಿಸಿಕೊಂಡಿತ್ತು. ಇದಕ್ಕೆ ಪೂರಕ ಚಿಕಿತ್ಸೆಯನ್ನು ವೈದ್ಯರು ನೀಡಿದ್ದು, ಕಾರ್ಗಲ್ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ ಇಬ್ಬರು ವೈದ್ಯರನ್ನು ನೇಮಕ ಮಾಡಿದ್ದಾರೆ.

ಆರೋಗ್ಯಾಧಿಕಾರಿ ಭೇಟಿ
ವಿಷಯ ತಿಳಿದ ತಕ್ಷಣ ತಾಲೂಕು ಆರೋಗ್ಯಾಧಿಕಾರಿ ಡಾ. ಮೋಹನ್ ಕೆ.ಎಸ್. ಆಸ್ಪತ್ರೆ ಭೇಟಿ ನೀಡಿ ಒಳರೋಗಿಗಳ ಆರೋಗ್ಯ ವಿಚಾರಿಸಿದರು. ನಂತರ ಕಾರ್ಗಲ್‌ಗೆ ನೀರು ಪೂರೈಕೆ ಮಾಡುತ್ತಿದ್ದ ಜಲಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಯೋಗಾಲಯಕ್ಕೆ ಕಳಿಸಲು ನೀರಿನ ಸ್ಯಾಂಪಲ್ ಪಡೆದರು.

ನಂತರ ಮಾತನಾಡಿದ ಅವರು, ಕಾರ್ಗಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಪರಿಶೀಲಿಸಿದ್ದು ಎಲ್ಲರೂ ಆರಾಮಾಗಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗೆ ಹೆಚ್ಚುವರಿಯಾಗಿ ಇಬ್ಬರು ವೈದ್ಯರನ್ನು ನಿಯೋಜಿಸಿದ್ದು ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಚಿಕತ್ಸೆ ಪಡೆಯುತ್ತಿರುವವರಿಗೆ ಸಮಸ್ಯೆಯಾದರೆ ಅವರನ್ನು ಸಾಗರ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು.

ಆಸ್ಪತ್ರೆಗೆ ಹಾಲಪ್ಪ ಭೇಟಿ

ವಿಷಯ ತಿಳಿದ ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಅವರು ಶನಿವಾರ ಕಾರ್ಗಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಒಳರೋಗಿಗಳಾಗಿ ದಾಖಲಾಗಿದ್ದವರ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಏಕಾಏಕಿ ಕೆಲವರು ಅಸ್ವಸ್ಥಗೊಳ್ಳಲು ಕಾರಣ ಏನೆಂದು ತಿಳಿದು ಬಂದಿಲ್ಲ. ಜಿಲ್ಲೆಯ ಎರಡು ಮೂರು ಕಡೆಗಳಲ್ಲಿ ಇಂತಹದ್ದೇ ಘಟನೆ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ತಜ್ಞರ ತಂಡದಿಂದ ಪರಿಶೀಲನೆ ನಡೆಸಲು ತಿಳಿಸಲಾಗಿದೆ. ಆಸ್ಪತ್ರೆಯಲ್ಲಿರುವವರಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಕೆಲವರು ಮದುವೆ ಮನೆಗೆ ಹೋಗಿದ್ದಾರೆ. ಇನ್ನು ಕೆಲವರು ಮನೆಯಲ್ಲಿದ್ದವರು ಇದ್ದಾರೆ. ಅಂತಹ ಕೆಲವರಲ್ಲಿ ದಿಢೀರ್ ಆರೋಗ್ಯ ಏರುಪೇರಾಗಿದೆ. ಶನಿವಾರ ಸಹ ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಮೂರು ಜನರನ್ನು ಸಾಗರ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳಿಸಲಾಗಿದೆ. ರೋಗಿಗಳಿಗೆ ತಕ್ಷಣ ಚಿಕಿತ್ಸೆ ನೀಡಲು ಹೆಚ್ಚುವರಿ ವೈದ್ಯರನ್ನು ಕಾರ್ಗಲ್ ಆಸ್ಪತ್ರೆಗೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ವಾಸಂತಿ ರಮೇಶ್, ಉಪಾಧ್ಯಕ್ಷ ಮಂಜುನಾಥ್ ಪಿ., ಡಾ. ವೀರಭದ್ರಪ್ಪ, ಪಟ್ಟಣ ಪಂಚಾಯ್ತಿ ಸದಸ್ಯರು, ಬಿಜೆಪಿ ಪ್ರಮುಖರು ಹಾಜರಿದ್ದರು.

ಪ್ರಸಾದ ಸೇವಿಸಿದವರೂ ಅಸ್ವಸ್ಥ

ವಿನೋಬಾ ನಗರದಲ್ಲಿರುವ ಶಿರಡಿ ಸಾಯಿಬಾಬಾ ಮಂದಿರದಲ್ಲಿ ವರ್ಧಂತಿ ಉತ್ಸವದ ನಿಮಿತ್ತ ವಿತರಿಸಲಾಗಿದ್ದ ಪ್ರಸಾದ ಸೇವಿಸಿದ 20 ಕ್ಕೂ ಹೆಚ್ಚು ಜನರಲ್ಲಿ ಶನಿವಾರ ಹೊಟ್ಟೆನೋವು, ಭೇದಿ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕಾರ್ಗಲ್‌ನ ಸುತ್ತಮುತ್ತ ವಾಂತಿ ಭೇದಿ ಪ್ರಕರಣ ಸಂಭವಿಸಿದ ಬೆನ್ನಲ್ಲೇ ಸಾಗರ ನಗರದಲ್ಲಿಯೂ ಕಾಣಿಸಿಕೊಂಡಿರುವುದು ಜನರನ್ನು ತೀವ್ರ ಆತಂಕಿತರನ್ನಾಗಿಸಿದೆ.

ಸಾಯಿಬಾಬಾ ದೇವಸ್ಥಾನದಲ್ಲಿ ಶುಕ್ರವಾರ ವರ್ಧಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆಸುಪಾಸಿನ ಹಾಗೂ ನಗರ ವ್ಯಾಪ್ತಿಯ ನೂರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ರಾತ್ರಿಯ ವಿಶೇಷ ಪೂಜೆ ನಂತರ ದೇವಸ್ಥಾನದ ವತಿಯಿಂದ ಪ್ರಸಾದ ವಿತರಿಸಲಾಗಿತ್ತು. ಪ್ರಸಾದ ಸ್ವೀಕರಿಸಿದ್ದ ಕೆಲವರಲ್ಲಿ ಏಕಾಏಕಿ ರಾತ್ರಿ ವೇಳೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.

ಈ ಕುರಿತು ಸುಧಾ ಮಾತನಾಡಿ, ಶುಕ್ರವಾರ ರಾತ್ರಿ ದೇವಸ್ಥಾನದಲ್ಲಿನ ವಾರ್ಷಿಕೋತ್ಸವ ಪ್ರಯುಕ್ತ ಪ್ರಸಾದ ಭೋಜನ ಸ್ವೀಕರಿಸಿದ ನಂತರ ರಾತ್ರಿ 2 ಗಂಟೆ ಸಮಯದಲ್ಲಿ ನನ್ನ ಮಗ ಹಾಗೂ ಮಗಳಿಗೆ ಹೊಟ್ಟೆ ನೋವು, ಬೇಧಿ ಆರಂಭವಾಗಿದೆ. ಕೆಲವರು ಇಂತಹ ತೊಂದರೆ ಅನುಭವಿಸಿದ್ದಾರೆ. ನನಗೂ ಸಹ ಹೊಟ್ಟೆಯಲ್ಲಿ ನೋವಿದೆ, ಮಕ್ಕಳನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು.

ಪ್ರಸಾದ ಸೇವಿಸಿದ ಕೆಲವರಿಗೆ ರಾತ್ರಿ ವೇಳೆಯಲ್ಲಿಯೇ ಹೊಟ್ಟೆನೋವು ಮತ್ತು ಭೇದಿ ಕಾಣಿಸಿಕೊಂಡಿದೆ. ಕೆಲವರು ತೀವ್ರವಾಗಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆ ಉಪವಿಭಾಗೀಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಕೆಲವರು ಖಾಸಗಿ ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದೆ. ಸಹನಾ(21), ಕಿರಣ್(19), ಸುಧಾ(46) ಮತ್ತು ಈರಮ್ಮ(64) ಎಂಬುವವರು ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆದುಕೊಳ್ಳುತ್ತಿದ್ದು, ಚೇತರಿಕೆ ಕಂಡು ಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.