ಮನೆಯಿಂದಲೇ ಮತದಾನ‌: ಶತಾಯುಷಿಗೆ ಕರೆ ಮಾಡಿ ಅಭಿನಂದಿಸಿದ ಚುನಾವಣಾ ಆಯುಕ್ತ ರಾಜೀವ್ ಕುಮಾರ್‌


Team Udayavani, May 2, 2023, 8:30 PM IST

call ece

ಚಿಕ್ಕೋಡಿ: ಕರ್ನಾಟಕ ವಿಧಾನಸಭೆ – 2023 ರ ಸಾರ್ವತ್ರಿಕ ಚುನಾವಣೆ ಅಂಗವಾಗಿ ಭಾರತ ಚುನಾವಣಾ ಆಯೋಗವು ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ದಿವ್ಯಾಂಗರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೆ ಮತದಾನ ಮಾಡುವುದಕ್ಕೆ ಅವಕಾಶ ನೀಡಿದೆ.

ಈ ಅವಕಾಶವನ್ನು ಬಳಸಿಕೊಂಡು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಇಂಗಳಿ ಗ್ರಾಮದ 103 ವರ್ಷ 4 ತಿಂಗಳ ವಯೋವೃದ್ಧ ಶ್ರೀ ಮಹದೇವ ಮಹಾಲಿಂಗ ಮಾಳಿ ಅವರು ಸೋಮವಾರ(ಮೇ 1) ತಮ್ಮ ಮನೆಯಿಂದಲೇ ಮತವನ್ನು ಚಲಾಯಿಸಿದರು.

ಶತಾಯುಷಿ ಮಹದೇವ ಅವರು ಮತದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿರುವುದನ್ನು ಗಮನಿಸಿದ ಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾದ ಶ್ರೀ ರಾಜೀವ್ ಕುಮಾರ್ ಅವರು, ಇಂದು ಮಂಗಳವಾರ(ಮೇ 2) ಮಧ್ಯಾಹ್ನ ಮಹದೇವ ಮಾಳಿ ಅವರಿಗೆ ಸ್ವತಃ ದೂರವಾಣಿ ಕರೆ ಮಾಡಿ ಅಭಿನಂದನೆಗಳನ್ನು ತಿಳಿಸಿದರು.
ಪ್ರಜಾಪ್ರಭುತ್ವದ ಹಬ್ಬವಾಗಿರುವ ಮತದಾನ ಪ್ರಕ್ರಿಯೆಯಲ್ಲಿ ಯುವ ಮತದಾರರು ಹಾಗೂ ನಗರದ ಮತದಾರರು ಭಾಗವಹಿಸಲು ಮಹದೇವ ಮಾಳಿ ಅವರು ಸ್ಫೂರ್ತಿಯಾಗಿದ್ದಾರೆ ಎಂದು ಶ್ಲಾಘಿಸಿದರು.

ಹಿರಿಯ ನಾಗರಿಕರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಭಾರತದ ಬುನಾದಿಯನ್ನು ಗಟ್ಟಿಗೊಳಿಸಿದ್ದಾರೆ ಎಂದು ಹೇಳಿದರು.
ಮನೆಯಿಂದಲೇ ಮತದಾನ ಮಾಡಿದ ಮಹಾದೇವ ಮಾಳಿ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಂದು ಮತವೂ ಎಷ್ಟೊಂದು‌ ಅಮೂಲ್ಯ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ರಾಜೀವ್ ಕುಮಾರ್ ಹೇಳಿದರು.

ಭಾರತ ಚುನಾವಣಾ ಆಯೋಗವು ಪ್ರತಿಯೊಬ್ಬರ ಒಳಗೊಳ್ಳುವಿಕೆ ಮತ್ತು ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸುವುದಕ್ಕೆ ಬದ್ಧವಾಗಿದೆ ಎಂದರು.

ಮತಗಟ್ಟೆಗೆ ತೆರಳಿ ಮತದಾನ‌ ಮಾಡಲು‌ ಸಾಧ್ಯವಾಗದವರಿಗಾಗಿ ಮನೆಗೆ ಮತಗಟ್ಟೆ ಕೊಂಡೊಯ್ಯವುದಕ್ಕೆ‌ ಬದ್ಧವಾಗಿದೆ.
80 ವರ್ಷ ಮೇಲ್ಪಟ್ಟಿರುವವರು ಹಾಗೂ ಶೇ.40 ರಷ್ಟು ಅಂಗವೈಕಲ್ಯ ಹೊಂದಿರುವ ವಿಕಲಚೇತನರಿಗೆ ಇದೇ ಮೊದಲ‌ ಬಾರಿ ಮನೆಯಿಂದಲೇ ಮತದಾನ‌ ಮಾಡುವ ಐಚ್ಛಿಕ ಅವಕಾಶವನ್ನು ಒದಗಿಸಲಾಗಿರುತ್ತದೆ.

ಬೆಳಗಾವಿ ಜಿಲ್ಲೆಯಲ್ಲಿ ಪ್ರಸಕ್ತ ವಿಧಾನ ಸಭಾ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟಿರುವ 7362 ಕ್ಕೂ ಅಧಿಕ ಜನರು ಹಾಗೂ 1708 ವಿಕಲಚೇತನರು ಮನೆಯಿಂದಲೇ ಮತದಾನ‌ ಮಾಡಲು ಇಚ್ಛೆ ವ್ಯಕ್ತಪಡಿಸಿದ್ದಾರೆ.

ಏಪ್ರಿಲ್ 29 ರಿಂದ ಆರಂಭಗೊಂಡಿರುವ ಮತದಾನ ಪ್ರಕ್ರಿಯೆಯಲ್ಲಿ ಇದುವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟಾರೆ 6975 ಹಿರಿಯರು ಮತ್ತು 1661 ವಿಕಲಚೇತನರು ಮನೆಯಿಂದಲೇ ತಮ್ಮ ಮತವನ್ನು ಚಲಾಯಿಸಿರುತ್ತಾರೆ ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತರು ರಾಜೀವ್ ಕುಮಾರ್ ತಿಳಿಸಿದರು.

ಆಯೋಗಕ್ಕೆ ಕೃತಜ್ಞತೆ ಸಲ್ಲಿಸಿದ ಶತಾಯುಷಿ:

ಸ್ವತಃ ಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತರೇ ದೂರವಾಣಿ ಕರೆ ಮಾಡಿದಾಗ ಅತ್ಯಂತ ಸಂತೋಷದಿಂದ ಅವರೊಡನೆ ಮಾತನಾಡಿದ ಮಹದೇವ ಮಾಳಿ ಅವರು ತಮ್ಮಂತಹ ಹಿರಿಯರಿಗೆ ಇದೇ ಪ್ರಥಮ‌ ಬಾರಿ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿದ ಚುನಾವಣಾ ಆಯೋಗಕ್ಕೆ‌ ಕೃತಜ್ಞತೆಗಳನ್ನು ಸಲ್ಲಿಸಿದರು.
ಈ ಹಿಂದೆ ಮನೆಯಿಂದಲೇ ಮತದಾನ‌ ಮಾಡುವ ಅವಕಾಶ ಇಲ್ಲದಿರುವಾಗ ಗಾಲಿಕುರ್ಚಿಯಲ್ಲಿ ಮತಗಟ್ಟಿಗೆ ತೆರಳಿ‌ ಮತದಾನ ಮಾಡಿರುವುದನ್ನು ನೆನಪಿಸಿಕೊಂಡರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ನಾಗರಿಕರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಮನವಿ ಮಾಡಿಕೊಂಡರು.

ಬೆಳಗಾವಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ‌ನಿತೇಶ್ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧಕ್ಷರಾದ ಹರ್ಷಲ್ ಭೋಯರ್, ಚಿಕ್ಕೋಡಿ-ಸದಲಾಗಾ ಚುನಾವಣಾಧಿಕಾರಿ‌ ಮಾಧವ್ ಗಿತ್ತೆ. ತಹಶೀಲ್ದಾರ ಸಿ.ಎಸ್.ಕುಲಕರ್ಣಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.