Wayanadu Landslide: ಕರ್ನಾಟಕದಲ್ಲೂ ಕಟ್ಟೆಚ್ಚರ ಅಗತ್ಯ: ಕೇಂದ್ರ ಸಚಿವ ಕುಮಾರಸ್ವಾಮಿ
ಎಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಕೇಂದ್ರಗಳಲ್ಲಿ ಮೊಕ್ಕಂ ಹೂಡಲು ಸಿಎಂ ಸಿದ್ದರಾಮಯ್ಯ ನಿರ್ದೇಶಿಸಲಿ: ರಾಜ್ಯ ಸರ್ಕಾರಕ್ಕೆ ಸಲಹೆ
Team Udayavani, Jul 30, 2024, 7:25 PM IST
ಬೆಂಗಳೂರು: ನೆರೆಯ ಕೇರಳ ರಾಜ್ಯದ ವಯನಾಡು ಭಾಗದಲ್ಲಿ ಭಾರೀ ಭೂ ಕುಸಿತ ಸಂಭವಿಸಿ ನೂರಾರು ಮಂದಿ ಮೃತಪಟ್ಟ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ರಾಜ್ಯದ ಕೊಡಗು ಜಿಲ್ಲೆಯು ದುರಂತ ಸ್ಥಳ ವಯನಾಡಿನ ಪಕ್ಕದಲ್ಲಿಯೇ ಇದ್ದು, ಹಾಗೆಯೇ ಮಳೆಯಿಂದಾಗಿ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅತಿ ಅಪಾಯದ ಸ್ಥಿತಿ ಇದೆ. ಅನೇಕ ಕಡೆ ರೆಟ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯ ಮುನ್ಸೂಚನೆ ಇದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತಮ್ಮ ಸಾಮಾಜಿಕ ಜಾಲತಾಣ (ಎಕ್ಸ್)ನಲ್ಲಿ ಬರೆದುಕೊಂಡಿದ್ದಾರೆ.
ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿ ಕೆಲ ಜಿಲ್ಲೆಗಳಲ್ಲಿ ನಿರಂತರವಾಗಿ ಭೂ ಕುಸಿತ ಸಂಭವಿಸುತ್ತಿದೆ. ನೆರೆ ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಅಲ್ಲಿನ ಅಣೆಕಟ್ಟೆಗಳಿಂದ ಭಾರೀ ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು, ರಾಜ್ಯಕ್ಕೆ ಅಪಾರ ನೆರೆ ನೀರು ಹರಿದು ಬರುತ್ತಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಅಪಾಯದ ಮಟ್ಟ ಮೀರಿ ನೂರಾರು ಗ್ರಾಮಗಳಿಗೆ ನುಗ್ಗಿದೆ, ಅಪಾರ ಬೆಳೆ ನಾಶವಾಗಿದೆ. ಈ ಕಷ್ಟದ ಸಮಯದಲ್ಲಿ ನಾವೆಲ್ಲರೂ ಜನರ ಜತೆಯಲ್ಲಿರಬೇಕು ಎಂದು ಹೇಳಿದ್ದಾರೆ.
ಉಸ್ತುವಾರಿ ಸಚಿವರು ಜಿಲ್ಲಾ ಕೇಂದ್ರಗಳಲ್ಲಿ ಇರಲಿ:
ಈ ಸಂದರ್ಭದಲ್ಲಿ ನನ್ನ ಕಳಕಳಿಯ ಸಲಹೆ ಇಷ್ಟೇ ಸರಕಾರ, ಸಚಿವರು, ಶಾಸಕರು, ಅಧಿಕಾರಿಗಳು, ರಾಜ್ಯದ ಆಡಳಿತ ವ್ಯವಸ್ಥೆ ಜನರ ಹತ್ತಿರದಲ್ಲಿರಬೇಕು. ರೈತರೊಂದಿಗೆ ನೇರ ಸಂಪರ್ಕದಲ್ಲಿದ್ದು ಪರಿಸ್ಥಿತಿ ಅವಲೋಕಿಸುತ್ತಿರಬೇಕು. ಪ್ರಕೃತಿ ವಿಕೋಪ ಯಾವುದೇ ಕ್ಷಣದಲ್ಲಿ ಬಂದೆರಗುವ ಅಪಾಯ ನಿರ್ಲಕ್ಷಿಸಬಾರದು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಎಲ್ಲಾ ಉಸ್ತುವಾರಿ ಸಚಿವರನ್ನು ಜಿಲ್ಲಾ ಕೇಂದ್ರಗಳಲ್ಲಿ ಮೊಕ್ಕಂ ಹೂಡಲು ನಿರ್ದೇಶಿಸಬೇಕು. ಜಿಲ್ಲಾಧಿಕಾರಿಗಳು ಸೇರಿ ಎಲ್ಲಾ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ 24/7 ಸನ್ನದ್ಧವಾಗಿರಬೇಕು. ಅಪಾಯದ ಸ್ಥಳಗಳಿಂದ ಜನರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಮುನ್ನೆಚ್ಚರಿಕೆ ಕ್ರಮಕ್ಕೆ ಸಲಹೆಗಳನ್ನು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.