Weight lifter: 6 ತಿಂಗಳ ಬಳಿಕ ಮೀರಾಬಾಯಿ ಚಾನು ಸ್ಪರ್ಧೆ
Team Udayavani, Mar 31, 2024, 10:38 PM IST
ಫುಕೆಟ್ (ಥಾಯ್ಲೆಂಡ್): ಗಾಯದಿಂದಾಗಿ 6 ತಿಂಗಳ ಕಾಲ ಸ್ಪರ್ಧೆಯಿಂದ ದೂರ ಉಳಿದಿದ್ದ ಟೋಕಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಸೋಮವಾರ ಐಡಬ್ಲ್ಯುಎಫ್ ವಿಶ್ವಕಪ್‌ನಲ್ಲಿ ಸ್ಪರ್ಧಿಸಲಿದ್ದಾರೆ. ಈ ಮೂಲಕ ಪ್ಯಾರಿಸ್ ಒಲಿಂಪಿಕ್ಸ್‌ಗೆ ಟಿಕೆಟ್ ಖಾತರಿಪಡಿಸಿಕೊಳ್ಳಲು ಅವರು ಎದುರು ನೋಡುತ್ತಿದ್ದಾರೆ.
ಆಗಸ್ಟ್ 28ರಿಂದ ಆರಂಭವಾಗಲಿರುವ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಐಡಬ್ಲ್ಯುಎಫ್ ವಿಶ್ವಕಪ್ ಕೊನೆಯ ಮತ್ತು ಕಡ್ಡಾಯ ಅರ್ಹತಾ ಕೂಟವಾಗಿದೆ. ಹೀಗಾಗಿ ಕೂಟದಲ್ಲಿ ಪಾಲ್ಗೊಳ್ಳಲು ಮೀರಾಬಾಯಿ ಚಾನು ನಿರ್ಧರಿಸಿದ್ದಾರೆ. ಮಹಿಳೆಯರ 49 ಕೆಜಿ ವಿಭಾಗದಲ್ಲಿ ಚಾನು ಸ್ಪರ್ಧಿಸುತ್ತಿದ್ದಾರೆ.
ಕಳೆದ ವರ್ಷ ಸಪ್ಟೆಂಬರ್‌ನಲ್ಲಿ ನಡೆದಿದ್ದ ಏಷ್ಯನ್ ಗೇಮ್ಸ್ ವೇಳೆ ತೊಡೆ ಸ್ನಾಯುಬೇನೆಗೆ ತುತ್ತಾಗಿದ್ದ ಚಾನು, ಆ ಬಳಿಕ ಯಾವುದೇ ಪ್ರಮುಖ ಕೂಟದಲ್ಲಿ ಪಾಲ್ಗೊಂಡಿರಲಿಲ್ಲ. ಆದರೂ, 2022ರ ವಿಶ್ವ ಚಾಂಪಿಯನ್‌ಶಿಪ್ ಮತ್ತು 2023ರ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಕ್ರಮವಾಗಿ ದ್ವಿತೀಯ ಮತ್ತು ಆರನೇ ಸ್ಥಾನ ಪಡೆದಿದ್ದರಿಂದ ಚಾನುಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಲಭಿಸಿದೆ. ಆದರೆ, ಗಾಯಕ್ಕೀಡಾಗಿ ದೀರ್ಘಕಾಲ ಸ್ಪರ್ಧೆಯಿಂದ ದೂರ ಉಳಿದಿದ್ದರಿಂದ ಒಲಿಂಪಿಕ್ಸ್ ಟಿಕೆಟ್ ಧೃಡಪಡಿಸಿಕೊಳ್ಳಲು ಅವರು ಐಡಬ್ಲ್ಯುಎಫ್ ವಿಶ್ವಕಪ್‌ನಲ್ಲಿ ಕಡ್ಡಾಯವಾಗಿ ಸ್ಪರ್ಧಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.