ಪಶ್ಚಿಮ ಬಂಗಾಳ ಚುನಾವಣೆ: ಎಡಪಕ್ಷ – ಕಾಂಗ್ರೆಸ್ ಮೈತ್ರಿ ಗೇಮ್‌ಚೇಂಜರ್: ಚೌಧರಿ
Team Udayavani, Sep 14, 2020, 12:52 PM IST
ಕೋಲ್ಕತಾ:“ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳ ನಡುವಿನ ಮೈತ್ರಿಯು ಗೇಮ್‌ಚೇಂಜರ್ ಆಗಲಿದ್ದು, ತೃಣಮೂಲ ಕಾಂಗ್ರೆಸ್‌ಗಾಗಲೀ, ಬಿಜೆಪಿಗಾಗಲೀ ಅಷ್ಟು ಸುಲಭದಲ್ಲಿ ಅಧಿಕಾರಕ್ಕೇರಲು ಬಿಡುವುದಿಲ್ಲ.’
ಹೀಗೆಂದು ಹೇಳಿರುವುದು ಇತ್ತೀಚೆಗಷ್ಟೇ ಪಶ್ಚಿಮ ಬಂಗಾಲದ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡಿರುವ, ಕಾಂಗ್ರೆಸ್‌ನ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ. ಹಿಂದಿನಿಂದಲೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ವಿರೋಧಿಸುತ್ತಲೇ ಬಂದಿರುವ ಚೌಧರಿ, “ಬಿಜೆಪಿ ಮತ್ತು ಟಿಎಂಸಿ ಮತಗಳು ಹಂಚಿಹೋಗುವಂತೆ ಮಾಡುವುದು, ಜಾತ್ಯತೀತ ಮೌಲ್ಯ ಬೆಳೆಸುವುದೇ ಇದರ ಉದ್ದೇಶ’ ಎಂದಿದ್ದಾರೆ.
ಅತಂತ್ರ ವಿಧಾನಸಭೆಯ ಸ್ಥಿತಿ ನಿರ್ಮಾಣವಾದರೆ ಟಿಎಂಸಿಗೆ ಬೆಂಬಲ ನೀಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಚೌಧರಿ, “ಅಗತ್ಯ ಬಂದಾಗ ಉತ್ತರ ಕೊಡು ತ್ತೇ ವೆ’ ಎಂದಿದ್ದಾರೆ. 1967ರ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದಲ್ಲಿ ಅತಂತ್ರ ವಿಧಾನಸಭೆಯ ಪರಿಸ್ಥಿತಿ ನಿರ್ಮಾಣವಾದಾಗ, ಬಾಂಗ್ಲಾ ಕಾಂಗ್ರೆಸ್ ಮತ್ತು ಸಿಪಿಎಂ ಕೈಜೋಡಿಸಿ ಸಮ್ಮಿಶ್ರ ಸರಕಾರ ರಚಿಸಿದ್ದವು.
ಬಿಜೆಪಿ ಕಾರ್ಯಕರ್ತನ ಶವ ಪತ್ತೆ: ಪ.ಬಂಗಾಲದ ಹೂಗ್ಲಿ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನ ಮೃತದೇಹ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದನ್ನು ಟಿಎಂಸಿ ಕಾರ್ಯಕರ್ತರು ಮಾಡಿರುವ ಕೊಲೆ ಎಂದು ಬಿಜೆಪಿ ಆರೋಪಿಸಿದೆ. ಆದರೆ ಟಿಎಂಸಿ ಈ ಆರೋಪವನ್ನು ತಳ್ಳಿಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.