ಗೂಂಡಾಗಳಿಗೆ ರಾಮನ ಹೆಸರು ಹೇಳುವ ಯಾವ ಯೋಗ್ಯತೆ ಇದೆ?: ಸಿದ್ದರಾಮಯ್ಯ
ಇದು ಮುಖ್ಯಮಂತ್ರಿಗಳೇ ಮಾಡಿರುವ ಪಾಪದ ಫಲ
Team Udayavani, Apr 10, 2022, 12:29 PM IST
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಇನ್ನೂ ಅಧಿಕಾರದಲ್ಲಿದ್ದರೆ ತಕ್ಷಣ ಧಾರವಾಡದ ಮುಸ್ಲಿಮ್ ವರ್ತಕರ ಮೇಲೆ ದೌಜ್ಯನ್ಯವೆಸಗಿದ್ದ ಶ್ರೀರಾಮ ಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಪೊಲೀಸರಿಗೆ ಆದೇಶ ನೀಡಬೇಕು, ಸಾಧ್ಯವಿಲ್ಲ ಎಂದಾದರೆ ರಾಜೀನಾಮೆ ನೀಡಿ ಕುರ್ಚಿಯ ಮಾನ ಕಾಪಾಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಭಾನುವಾರ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಹೇಳಿಕೊಂಡು ಬರುತ್ತಿರುವ ‘ರಾಮ ರಾಜ್ಯ’ದ ಒಂದು ಚಿತ್ರವನ್ನು ರಾಮ ನವಮಿಯ ಹಿನ್ನೆಲೆಯಲ್ಲಿ ಧಾರವಾಡದ ಶ್ರೀರಾಮಸೇನೆಯ ಗೂಂಡಾಗಳು ಜಗತ್ತಿನ ಮುಂದೆ ಇಟ್ಟಿದ್ದಾರೆ. ಇಂತಹ ಗೂಂಡಾಗಳಿಗೆ ರಾಮನ ಹೆಸರು ಹೇಳುವ ಯಾವ ಯೋಗ್ಯತೆ ಇದೆ? ಎಂದು ಪ್ರಶ್ನಿಸಿದ್ದಾರೆ.
ಧಾರವಾಡದಲ್ಲಿ ನಡೆದ ಹಲ್ಲೆ ಕೇವಲ ಮುಸ್ಲಿಮ್ ವ್ಯಾಪಾರಿಗಳ ಮೇಲೆ ನಡೆದದ್ದಲ್ಲ, ಅದು ಅವರು ಮಾರಾಟ ನಡೆಸುತ್ತಿದ್ದ ಕಲ್ಲಂಗಡಿ ಬೆಳೆಯುವ ರೈತರ ಮೇಲೆ ಕೂಡಾ ನಡೆದಿರುವ ದೌರ್ಜನ್ಯವೂ ಆಗಿದೆ. ಈ ಗೂಂಡಾಗಳನ್ನು ಹೀಗೆ ಸ್ವತಂತ್ರವಾಗಿ ಬಿಟ್ಟರೆ ಇವರು ಎಲ್ಲರ ಮನೆ ಬಾಗಿಲು ತಟ್ಟಲಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜನರ ಗಮನವನ್ನು ಬೇರೆಡೆ ಸೆಳೆದು, ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಸರ್ಕಾರವನ್ನೇ ಸಂಘ ಪರಿವಾರಕ್ಕೆ ಔಟ್ ಸೋರ್ಸ್ ಮಾಡಿ ಅಲ್ಲಿನ ಪುಂಡರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡ ಹಾಗೆ ಕಾಣುತ್ತಿದೆ. ರಾಜ್ಯದ ಇತಿಹಾಸದಲ್ಲಿ ಇದೊಂದು ಶಾಶ್ವತ ಕಳಂಕ ಎಂದಿದ್ದಾರೆ.
ಬೊಮ್ಮಾಯಿ ಅವರಿಗೆ ತಮ್ಮ ಸಂಪುಟ ಇಲ್ಲವೇ ಪಕ್ಷದ ಮೇಲೆ ಯಾವುದೇ ನಿಯಂತ್ರಣವಿಲ್ಲ. ಸರ್ಕಾರವನ್ನು ಸಂಘಪರಿವಾರಕ್ಕೆ ಅಡವಿಟ್ಟರೆ ತಮ್ಮ ಕುರ್ಚಿ ಉಳಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿಗಳು ಕನಸುಕಾಣುತ್ತಿದ್ದಾರೆ. ಈ ಪುಂಡಾಟಿಕೆ ಅವರ ಕುರ್ಚಿಯನ್ನೂ ಕಿತ್ತುಕೊಳ್ಳಲಿದೆ ಎನ್ನುವುದು ಅವರಿಗ ತಿಳಿದಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಹೇಳಿಕೆಯನ್ನು ಧಿಕ್ಕರಿಸುತ್ತಿರುವ ಈ ಸಿ.ಟಿ.ರವಿ, ರವಿಕುಮಾರ್ ಮೊದಲಾದ ಕೂಗುಮಾರಿಗಳ ಬಾಯಿಮುಚ್ಚಿಸಲಾಗದಷ್ಟು ಮುಖ್ಯಮಂತ್ರಿ ಬೊಮ್ಮಾಯಿಯವರು ಮೂಕ ಬಸವಣ್ಣನಾಗಿದ್ದಾರೆ. ಇಂತಹ ತಂಟೆಕೋರರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಇಡೀ ಪೊಲೀಸ್ ಇಲಾಖೆ ನೈತಿಕವಾಗಿ ಕುಸಿದುಹೋಗುತ್ತಿದೆ ಎಂದಿದ್ದಾರೆ.
ರಾಜಕೀಯ ದುರುದ್ದೇಶದಿಂದ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಮತ್ತು ಸಂಘ ಪರಿವಾರ ನಡೆಸುತ್ತಿರುವ ಪುಂಡಾಟಿಕಗಳಿಗಳಿಂದಾಗಿ ಹೊರರಾಜ್ಯ ಮತ್ತು ಹೊರದೇಶಗಳ ಎದುರು ಕೂಡುಬಾಳ್ವೆಗೆ ಹೆಸರಾದ ಶಾಂತಿ ಮತ್ತು ಸೌಹಾರ್ದ ಪ್ರಿಯ ಕನ್ನಡಿಗರು ತಲೆತಗ್ಗಿಸುವಂತಾಗಿದೆ. ಇದನ್ನು ಕನ್ನಡಿಗರು ಎಂದೂ ಕ್ಷಮಿಸರು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಇದು ಮುಖ್ಯಮಂತ್ರಿಗಳೇ ಮಾಡಿರುವ ಪಾಪದ ಫಲ. ಬೀದಿಗೂಂಡಾಗಳ ಪುಂಡಾಟಿಕೆಯನ್ನು ಕ್ರಿಯೆಗೆ ಪ್ರತಿಕ್ರಿಯೆ ಎಂದು ಸಮರ್ಥಿಸಿಕೊಂಡ ನಂತರವೇ ಕೊಲೆ,ಹಿಂಸಾಚಾರ, ಗಲಾಟೆ, ದೌರ್ಜನ್ಯಗಳ ಹೊಸ ಸರಣಿ ರಾಜ್ಯದಲ್ಲಿ ಪ್ರಾರಂಭವಾಗಿದ್ದು. ಇದರಿಂದ ಕಾನೂನು ವ್ಯವಸ್ಥೆಯೇ ಕುಸಿದುಬಿದ್ದು ನಾಗರಿಕ ಯುದ್ದಕ್ಕೆ ದಾರಿಮಾಡಿಕೊಟ್ಟಿದೆ. ಸಂಘ ಪರಿವಾರದ ಜೊತೆಗಿನ ಸಹಯೋಗದಿಂದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಹರಡುತ್ತಿರುವ ಕೋಮುದ್ವೇಷದ ವಾತಾವರಣದಿಂದ ರಾಜ್ಯದ ಉದ್ಯಮಿಗಳು ಬೇಸತ್ತುಹೋಗಿ ಹೊರ ರಾಜ್ಯದ ಕಡೆ ಮುಖಮಾಡುತ್ತಿದ್ದಾರೆ. ಕಿರಣ್ ಮಜುಮದಾರ್ ಶಹಾ ಅವರಂತಹ ಖ್ಯಾತನಾಮರು ಕೂಡಾ ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿರುವುದ ಕಳವಳಕಾರಿ ಬೆಳವಣಿಗೆ ಎಂದಿದ್ದಾರೆ.
ರಾಜ್ಯ ಬೇಡದ ಕೂಸು, ಅಳುವ ಕೂಸುಗಳನ್ನು ನೋಡಿಯಾಗಿದೆ. ಈಗಿನದ್ದು ಆಡುವ ಗೊಂಬೆಯ ಸರ್ಕಾರ. ಆ ಕೂಸುಗಳಿಗೆ ಜೀವವಾದರೂ ಇತ್ತು, ಈಗಿನದ್ದು ಸಂಪೂರ್ಣ ನಿರ್ಜೀವ ಆಟದ ಗೊಂಬೆ. ಮುಖ್ಯಮಂತ್ರಿಗಳು ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆಯಂತಾಗಿದ್ದಾರೆ ಎಂದು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.