24 ವರ್ಷಗಳ ಬಳಿಕ ಗಾಂಧಿಯೇತರ ವ್ಯಕ್ತಿ ಖರ್ಗೆಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ; ತರೂರ್ ಟ್ವೀಟ್
Team Udayavani, Oct 19, 2022, 3:00 PM IST
ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷೀಯ ಸ್ಥಾನಕ್ಕೆ ಬರೋಬ್ಬರಿ 24 ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಗಾಂಧಿ ಕುಟುಂಬದ ನಿಷ್ಠ, ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಭರ್ಜರಿ ಮತಗಳಿಸುವ ಮೂಲಕ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದು, ಪ್ರತಿಸ್ಪರ್ಧಿ ಶಶಿ ತರೂರ್ ಸೋಲನ್ನುಭವಿಸಿದ್ದಾರೆ.
“ಇದೊಂದು ದೊಡ್ಡ ಗೌರವ ಮತ್ತು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ದೊಡ್ಡ ಜವಾಬ್ದಾರಿ ಹೊತ್ತಿರುವ ಖರ್ಗೆಜೀಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದು ಪರಾಜಿತ ಅಭ್ಯರ್ಥಿ ಶಶಿ ತರೂರ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ 7,897 ಮತ ಪಡೆದು ಜಯಗಳಿಸಿದ್ದು, ಪ್ರತಿಸ್ಪರ್ಧಿ ಶಶಿ ತರೂರ್ ಕೇವಲ 1,072 ಮತ ಪಡೆದು ಪರಾಜಯಗೊಂಡಿದ್ದಾರೆ. ಫಲಿತಾಂಶ ಘೋಷಣೆಯಾದ ಕೂಡಲೇ ತರೂರ್ ಅವರು ಖರ್ಗೆ ಅವರನ್ನು ತಮ್ಮ ನಿವಾಸಕ್ಕೆ ಕರೆಯಿಸಿಕೊಂಡು ಅಭಿನಂದನೆ ಸಲ್ಲಿಸಿದರು.
ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆಯವರಿಗೆ ಅಭಿನಂದನೆ ಸಲ್ಲಿಸಿದ್ದೇನೆ. ಅಷ್ಟೇ ಅಲ್ಲ ಅವರಿಗೆ ಮುಂದೆಯೂ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದರು.
It is a great honour & a huge responsibility to be President of @INCIndia &I wish @Kharge ji all success in that task. It was a privilege to have received the support of over a thousand colleagues,& to carry the hopes& aspirations of so many well-wishers of Congress across India. pic.twitter.com/NistXfQGN1
— Shashi Tharoor (@ShashiTharoor) October 19, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.