ಪ್ರಧಾನಿ ಮೋದಿ ಜತೆ ಮಾತುಕತೆ ನಡೆಸಿದ್ರೆ ತಪ್ಪೇನು, ಅವರು ನವಾಜ್ ಷರೀಫ್ ಅಲ್ಲ: ಠಾಕ್ರೆ
ಠಾಕ್ರೆ ಪ್ರತ್ಯೇಕವಾಗಿ ಪ್ರಧಾನಿ ಮೋದಿ ಅವರ ಜತೆ ಹತ್ತು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದರು.
Team Udayavani, Jun 8, 2021, 5:47 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಮಾತುಕತೆ ನಡೆಸಿದರೆ ತಪ್ಪೇನಿದೆ? ನಾನೇನು ಪಾಕಿಸ್ತಾನದ ನವಾಜ್ ಷರೀಫ್ ಅವರನ್ನು ಭೇಟಿಯಾಗಲು ಹೋಗಿಲ್ಲ…ಇದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ(ಜೂನ್ 08) ಪ್ರಧಾನಿ ಮೋದಿ ಭೇಟಿ ನಂತರ ನೀಡಿದ ಪ್ರತಿಕ್ರಿಯೆ.
ಮರಾಠ ಮೀಸಲಾತಿ ಸೇರಿದಂತೆ ಹಲವು ವಿಚಾರಗಳು ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ನಿಯೋಗ ಇಂದು ಭೇಟಿಯಾಗಿ ಮಾತುಕತೆ ನಡೆಸಿದ್ದರು. ವರದಿಯ ಪ್ರಕಾರ ಠಾಕ್ರೆ ಜತೆ ಉಪಮುಖ್ಯಮಂತ್ರಿ ಅಜಿತ್ ಪವಾರ್, ಹಿರಿಯ ಕಾಂಗ್ರೆಸ್ ಮುಖಂಡ ಅಶೋಕ್ ಚವಾಣ್ ಜತೆಗಿದ್ದರು. ಏತನ್ಮಧ್ಯೆ ಠಾಕ್ರೆ ಪ್ರತ್ಯೇಕವಾಗಿ ಪ್ರಧಾನಿ ಮೋದಿ ಅವರ ಜತೆ ಹತ್ತು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದರು.
ಪ್ರಧಾನಿ ಮೋದಿ ಅವರ ಜತೆ ಪ್ರತ್ಯೇಕವಾಗಿ ಮಾತನಾಡಿರುವ ಬಗ್ಗೆ ಪ್ರಶ್ನಿಸಿದ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದ ಠಾಕ್ರೆ, ನಾನು ಭೇಟಿಯಾಗಿದ್ದು ವೈಯಕ್ತಿವಾಗಿ ವಿನಃ, ರಾಜಕೀಯ ವಿಚಾರಕ್ಕಾಗಿ ಅಲ್ಲ. ನಾವು ರಾಜಕೀಯ ಪಕ್ಷವಾಗಿ ಜತೆಗಿಲ್ಲಾ, ಆದರೆ ನಮ್ಮ ಆತ್ಮೀಯ ಸಂಬಂಧ ಮುರಿದಿಲ್ಲ. ನಮಗೆ ಪ್ರಧಾನಿ ಮೋದಿಯವರ ಜತೆ ಉತ್ತಮ ಬಾಂಧವ್ಯ ಇದೆ. ನಾವು ರಾಜಕೀಯವಾಗಿ ಜತೆಗಿಲ್ಲದಿರಬಹುದು, ಅದರ ಅರ್ಥ ನಮ್ಮ ಬಾಂಧವ್ಯ ಮುರಿದು ಬಿದ್ದಿದೆ ಎಂದಲ್ಲ. ನಾನೇನು ನವಾಜ್ ಷರೀಫ್ ಅವರನ್ನು ಭೇಟಿಯಾಗಲು ಹೋಗಿದ್ದಲ್ಲ ಎಂದು ತಿಳಿಸಿದ್ದರು.
ಮರಾಠಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡುವ ವಿಷಯ ಕೂಡಾ ಕೇಂದ್ರದಲ್ಲಿ ಬಾಕಿ ಉಳಿದಿದೆ. ಈ ವಿಷಯಗಳ ಬಗ್ಗೆಯೂ ಗಮನ ಹರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿರುವುದಾಗಿ ಉದ್ಧವ್ ಠಾಕ್ರೆ ಈ ಸಂದರ್ಭದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.