ತ್ರಿವಳಿ ತಲಾಖ್ ರದ್ದು ಮಾಡಿ ಮುಸ್ಲಿಂ ಮಹಿಳೆಯರಿಗೆ ರಕ್ಷಣೆ ಕೊಟ್ಟಿದ್ದು ಯಾರು?:ಸಚಿವ ಸುನೀಲ್
ಮುಂದಿನ ದಿನಗಳಲ್ಲಿ ಸಮಾಜದ ಮುಖ್ಯವಾಹಿನಿಗೆ ಬರುವ ಪ್ರಯತ್ನ ಮಾಡಬೇಕು
Team Udayavani, Feb 5, 2022, 3:22 PM IST
ಮಂಗಳೂರು : ನಾಡಿನ ಎಲ್ಲಾ ಮುಸಲ್ಮಾನ ಮಹಿಳೆಯರಿಗೆ ವಿನಂತಿ ಮಾಡುತ್ತೇನೆ, ನಿಮಗೆ ತ್ರಿವಳಿ ತಲಾಕ್ ರದ್ದತಿ ಮಾಡಿ ಭದ್ರತೆ ಯನ್ನು ಕೊಟ್ಟಿದ್ದು ಮೋದಿ ಸರಕಾರ. ಅದನ್ನು ಅರ್ಥ ಮಾಡಿಕೊಂಡು ಮುಂದಿನ ದಿನಗಳಲ್ಲಿ ಸಮಾಜದ ಮುಖ್ಯವಾಹಿನಿಗೆ ಬರುವ ಪ್ರಯತ್ನ ಮಾಡಬೇಕು ಎಂದು ಸಚಿವ ಸುನೀಲ್ ಕುಮಾರ್ ಶನಿವಾರ ಹೇಳಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿವಾದ ಕರ್ನಾಟಕದಲ್ಲಿ ಏನೋ ಒಂದು ರೀತಿಯಾದಂತಹ ಅರಾಜಕತೆಯನ್ನು ಹುಟ್ಟು ಹಾಕಲು ಕೆಲವು ವಿದ್ಯಾರ್ಥಿಗಳನ್ನು ಬಿಟ್ಟು ಮಾಡಿರುವ ವ್ಯವಸ್ಥಿತ ಷಡ್ಯಂತ್ರ ಎಂದರು.
ಸಿದ್ದರಾಮಯ್ಯನವರಾದಿಯಾಗಿ ಹಲವರು, ಹಿಜಾಬ್ ವ್ಯಕ್ತಿ ಸ್ವಾತಂತ್ರ್ಯ ಎಂದು ಬೊಬ್ಬೆ ಹಾಕುತ್ತಿದ್ದಾರೆ , ಮಹಿಳೆಯರಿಗೆ ಮಸೀದಿಯೊಳಗೆ ಪ್ರವೇಶ ನೀಡಲಿ ಎಂದು ಸವಾಲು ಹಾಕಿದರು. ಸರ್ಕಾರಿ ಶಾಲೆಗಳಲ್ಲಿ ಅವರೇ ನಿಯಮಗಳನ್ನು ಮಾಡುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದರು.
ಮನೆಯಿಂದ ಹೊರಡುವಾಗ ಹಿಜಾಬ್ ಅಥವಾ ಬುರ್ಖಾ ಧರಿಸಿ ಶಾಲಾ ಕಾಂಪೌಂಡಿನವರೆಗೆ ಬರಲಿ. ಆದರೆ ತರಗತಿಯಲ್ಲಿ ಪಾಠ ಕೇಳುವಾಗ ಇತರರಂತೆ, ಸಮವಸ್ತ್ರದಲ್ಲಿಯೇ ಪಾಠ ಕೇಳಬೇಕು. ಇದೇ ಸಂಪ್ರದಾಯ. pic.twitter.com/gPw4yAyPSs
— Sunil Kumar Karkala (@karkalasunil) February 5, 2022
ಯಾರೋ ಸಿದ್ದರಾಮಯ್ಯನವರೋ, ಖಾದರ್, ಎಸ್ ಡಿ ಪಿ ಐ ನವರು ಕೊಡುವ ಹೇಳಿಕೆಗಳನ್ನು ಕೇಳಿ ಪ್ರತಿಭಟನೆ ಮಾಡಬೇಡಿ, ವ್ಯಕ್ತಿ ಸ್ವಾತಂತ್ರ್ಯ ದ ಬಗ್ಗೆ ಮಾತನಾಡುವವರು ಮಹಿಳೆಯರನ್ನು ಮಸೀದಿಯೊಳಗೆ ಕರೆದುಕೊಂಡು ಹೋಗುವ ನೇತೃತ್ವವನ್ನು ತೆಗೆದುಕೊಳ್ಳಲಿ ಎಂದು ಕಿಡಿ ಕಾರಿದರು.
ಕಚೇರಿ ಉದ್ಘಾಟನೆ
ಮಂಗಳೂರಿನ ಡಿ.ಸಿ ಕಚೇರಿಯ ನೆಲ ಅಂತಸ್ತಿ ನಲ್ಲಿ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರ ಕಚೇರಿ ಉದ್ಘಾಟನೆಗೊಲಿಸಲಾಯಿತು. ಈ ವೇಳೆ ವಿಧಾನಸಭೆಯ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಆಗಮಿಸಿ ಶುಭ ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.