ಯಾರ ಸರಕಾರ: ಇಂದು ಸಿಗಲಿದೆ ಉತ್ತರ-ಮಧ್ಯಾಹ್ನದ ವೇಳೆಗೆ ಫ‌ಲಿತಾಂಶದ ಸ್ಪಷ್ಟ ಚಿತ್ರಣ ಸಾಧ್ಯತೆ

Team Udayavani, May 13, 2023, 7:41 AM IST

BJP CONG JDS KARNATAKA

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಮತ ಎಣಿಕೆಗೆ ಕ್ಷಣ ಗಣನೆ ಆರಂಭವಾಗಿದೆ. 36 ಕೇಂದ್ರಗಳಲ್ಲಿ ಶನಿವಾರ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭಗೊಳ್ಳಲಿದ್ದು, ಮಧ್ಯಾಹ್ನದ ವೇಳೆಗೆ ಫ‌ಲಿತಾಂಶದ ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆಯಿದೆ.

ಮತದಾನೋತ್ತರ ಸಮೀಕ್ಷೆಗಳ ಬಳಿಕ ರಾಜಕೀಯ ನಾಯಕರಲ್ಲಿ ನಾನಾ ರೀತಿಯ ಲೆಕ್ಕಾಚಾರಗಳು/ ವ್ಯಾಖ್ಯಾನಗಳು ನಡೆಯುತ್ತಿದ್ದು, ಅತಂತ್ರವೋ, ಸಮ್ಮಿಶ್ರವೋ, ಸ್ವಂತ ಬಲದ ಸರಕಾರವೋ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.

ಮೂರೂ ಪಕ್ಷಗಳ ನಾಯಕರು ಹಾಗೂ ಅಭ್ಯರ್ಥಿಗಳ ಎದೆ ಬಡಿತ ಹೆಚ್ಚಾಗಿದೆ. ಅಭ್ಯರ್ಥಿಗಳಿಗೆ ಗೆಲ್ಲುವ ಚಿಂತೆಯಾದರೆ, ನಾಯಕರಿಗೆ ಸರಕಾರ ರಚನೆಯ ಚಿಂತೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಶೇ.73.19ರಷ್ಟು ದಾಖಲೆಯ ಮತದಾನವಾಗಿ ಇತಿಹಾಸ ನಿರ್ಮಾಣವಾಗಿದೆ.

ಒಟ್ಟು 5.30 ಕೋಟಿ ಮತದಾರರ ಪೈಕಿ 3.88 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಶೇ.85.56 ರಷ್ಟು ಅತಿ ಹೆಚ್ಚು ಮತದಾನ ಆಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಾರಿಗೆ ಲಾಭವಾಗುತ್ತದೆ, ಶೇ.57ರಷ್ಟು ಅತಿ ಕಡಿಮೆ ಮತದಾನ ಆಗಿರುವ ಬೆಂಗಳೂರು ನಗರದಲ್ಲಿ ಯಾರಿಗೆ ನಷ್ಟವಾಗುತ್ತದೆ ಎಂಬುದು ಕಾದು ನೋಡಬೇಕಾಗಿದೆ.

ಬಿರುಸಿನ ಸಭೆ
ಫ‌ಲಿತಾಂಶದ ಬಗ್ಗೆ ಮೂರು ಪಕ್ಷಗಳ ನಾಯಕರು ಶುಕ್ರವಾರ ಸಭೆ ನಡೆಸಿ ಚರ್ಚಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಪಕ್ಷದ ನಾಯಕರ ಜತೆ ಚರ್ಚಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್‌, ರಣದೀಪ್‌ಸಿಂಗ್‌ ಸುರ್ಜೆವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಮುಂದಿನ ತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ದೂರವಾಣಿ ಮೂಲಕ ಮುಖಂಡರ ಜತೆ ಸಮಾಲೋಚಿಸಿದರು. ಜಿ.ಟಿ.ದೇವೇಗೌಡರು ಪದ್ಮನಾಭನಗರ ನಿವಾಸದಲ್ಲಿ ಎಚ್‌.ಡಿ.ದೇವೇಗೌಡರನ್ನು ಭೇಟಿ ಮಾಡಿ ಚರ್ಚಿಸಿದರು.

ಲೆಕ್ಕಾಚಾರಗಳದ್ದೇ ಸಾಮ್ರಾಜ್ಯ
ಮತ ಎಣಿಕೆಗೆ ಮುನ್ನಾ ದಿನವಾದ ಶುಕ್ರವಾರ ಇಡೀ ದಿನ ಮೂರೂ ಪಕ್ಷಗಳ ನಾಯಕರದ್ದು ಲೆಕ್ಕಾಚಾರಗಳದ್ದೇ ಸಾಮ್ರಾಜ್ಯವಾಗಿತ್ತು. ನಮ್ಮದೇ ಬಹುಮತ ಎಂದು ಮೇಲ್ನೋಟಕ್ಕೆ ಹೇಳಿದರೂ ಒಂದೊಮ್ಮೆ ಅಗತ್ಯ ಸಂಖ್ಯಾಬಲ ಸಿಗದಿದ್ದರೆ ಏನು ಮಾಡಬೇಕೆಂಬ ಬಗ್ಗೆ ಚರ್ಚೆಯಲ್ಲೇ ಮುಳುಗಿದ್ದರು. ಬಿಜೆಪಿ ನಾಯಕರು ತಮಗೆ 80ರಿಂದ 85 ಸೀಟು ಸಿಕ್ಕಿ, ಜೆಡಿಎಸ್‌ಗೆ 30ರಿಂದ 35 ಸ್ಥಾನಗಳು ಲಭಿಸಿದರೆ ಜತೆಗೂಡಿ ಸರಕಾರ ರಚಿಸಬಹುದು ಎಂಬ ಲೆಕ್ಕಾಚಾರ ಹಾಕಿಕೊಂಡಿದ್ದಾರೆ. ಕಾಂಗ್ರೆಸ್‌ ಕೂಡ ಕನಿಷ್ಠ 115 ಸ್ಥಾನ ಬಂದೇ ಬರುತ್ತದೆ. ಒಂದೊಮ್ಮೆ ಬಾರದಿದ್ದರೆ ಪಕ್ಷೇತರರ ಬೆಂಬಲ ಪಡೆಯಲು ಮೊದಲು ಪ್ರಯತ್ನ ಮಾಡಬೇಕು. 100ರಿಂದ 105 ಸ್ಥಾನವಷ್ಟೇ ಸಿಕ್ಕಿದರೆ ಜೆಡಿಎಸ್‌ ಜತೆ ಮೈತ್ರಿ ಬಗ್ಗೆ ಮಾತುಕತೆಗೆ ಮುಂದಾಗಬೇಕಾಗುತ್ತದೆ ಎಂಬ ಚಿಂತನೆ ನಡೆಸಿದ್ದಾರೆ. ಜೆಡಿಎಸ್‌ನದು ಬೇರೆಯೇ ಲೆಕ್ಕಾಚಾರವಿದ್ದು, ಫ‌ಲಿತಾಂಶ ಪ್ರಕಟಗೊಂಡ ಬಳಿಕ ಕಾಂಗ್ರೆಸ್‌ ಮತ್ತು ಬಿಜೆಪಿ ಪಡೆಯುವ ಸಂಖ್ಯೆ ನೋಡಿಕೊಂಡು ತೀರ್ಮಾನ ಕೈಗೊಳ್ಳಲು ನಿರ್ಧರಿಸಿದೆ.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.