ನಿತೇಶ್‌ NDA ತೊರೆದಿದ್ದೇಕೆ?: ಗೃಹ ಸಚಿವ ಅಮಿತ್‌ ಶಾ ಪ್ರಶ್ನೆ?

ಮೋದಿ ಕಂಡರೆ ಕೈಗೆ ಹೊಟ್ಟೆ ನೋವು: ನಡ್ಡಾ

Team Udayavani, Jun 30, 2023, 7:42 AM IST

AMITH SHAH MANIPUR RALLY

ಭರತ್‌ಪುರ/ಮುಂಗೇರ್‌: ಪ್ರತಿಪಕ್ಷಗಳ ನಾಯಕರು ಜೂ.23ರಂದು ಪಾಟ್ನಾದಲ್ಲಿ ನಡೆಸಿದ್ದ ಸಭೆಯಲ್ಲಿ ಭಾಗವಹಿಸಿದ್ದವರೆಲ್ಲ ಒಂದಲ್ಲ ಒಂದು ಹಗರಣದಲ್ಲಿ ಭಾಗಿಯಾದ ಆರೋಪಕ್ಕೆ ಗುರಿಯಾದವರೇ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಟೀಕಿಸಿದ್ದಾರೆ. ಬಿಹಾರದ ಮುಂಗೇರ್‌ನ ಲಖೀಸರೈನಲ್ಲಿ ಗುರುವಾರ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷ ನಾಯಕರ ಹಗರಣಗಳ ಮೊತ್ತವೇ 20 ಲಕ್ಷ ಕೋಟಿ ರೂ. ಆಗಿದೆ ಎಂದು ಪ್ರತಿಪಾದಿಸಿದ್ದಾರೆ.

ಪ್ರತಿಪಕ್ಷಗಳ ಒಕ್ಕೂಟದ ಮುಂದಿನ ಸಭೆ ಜು.13, 14ರಂದು ಬೆಂಗಳೂರಿನಲ್ಲಿ ನಿಗದಿಯಾಗಿರುವಂತೆಯೇ ಶಾ ಅವರ ಮಾತಿನ ಕೂರಂಬುಗಳು ಸಿಡಿದಿವೆ. ಭ್ರಷ್ಟಾಚಾರದ ವಿರುದ್ಧ ಬಿಹಾರದ ಜನತೆಗೆ ಸಿಡಿದು ನಿಲ್ಲುತ್ತಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಭ್ರಷ್ಟರಿಗೆ ಸೂಕ್ತ ಉತ್ತರ ನೀಡಲಿದ್ದಾರೆ. ಮಾಜಿ ಸಂಸದ ರಾಹುಲ್‌ ಗಾಂಧಿಯವರನ್ನು ಬೃಹತ್‌ ನಾಯಕ ಎಂದು ಬಿಂಬಿಸಲು ಪ್ರಯತ್ನ ಮಾಡಿದರೂ, ಫ‌ಲ ಕಂಡಿಲ್ಲ ಎಂದರು. ಎನ್‌ಡಿಎಯನ್ನು ತ್ಯಜಿಸಿದ ನಾಯಕರನ್ನು ವಿಶೇಷವಾಗಿ ಬಿಹಾರ ಸಿಎಂ ನಿತೀಶ್‌ ಕುಮಾರ್‌ನ್ನು ಗುರಿಯಾಗಿಸಿ ಅವರು ಎನ್‌ಡಿಎ ಮೈತ್ರಿಕೂಟ ತ್ಯಜಿಸಿದ್ದೇಕೆ ಎಂಬ ಬಗ್ಗೆ ಉತ್ತರಿಸಲಿ ಎಂದು ಸವಾಲು ಹಾಕಿದ್ದಾರೆ. ಅವರು ಯಾವತ್ತೂ ಮೈತ್ರಿ ಪಕ್ಷಗಳನ್ನು ಬದಲಿಸುವುದರಲ್ಲಿಯೇ ಸಮಯ ಕಳೆದಿದ್ದಾರೆ ಎಂದು ದೂರಿದ್ದಾರೆ.

ಕಾಂಗ್ರೆಸ್‌ಗೆ ಹೊಟ್ಟೆ ನೋವು:
ಪ್ರಧಾನಿ ಮೋದಿಯವರಿಗೆ ಜಗತ್ತಿನಲ್ಲಿ ಹೆಚ್ಚಿನ ರೀತಿಯಲ್ಲಿ ಮನ್ನಣೆ ಸಿಗುವ ಸಂದರ್ಭಗಳಲ್ಲೆಲ್ಲಾ ಕಾಂಗ್ರೆಸ್‌ಗೆ ಹೊಟ್ಟೆ ನೋವು ಶುರುವಾಗುತ್ತದೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಲೇವಡಿ ಮಾಡಿದ್ದಾರೆ. ರಾಜಸ್ಥಾನದ ಭರತ್‌ಪುರ ಮತ್ತು ನದಾಯಿ ಎಂಬಲ್ಲಿ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ ಮಾತನಾಡಿದ ಅವರು, ಆಸ್ಟ್ರೇಲಿಯಾ ಪ್ರಧಾನಿ ನರೇಂದ್ರ ಮೋದಿಯವರನ್ನು “ಬಾಸ್‌’, ಉದ್ಯಮಿ ಎಲಾನ್‌ ಮಸ್ಕ್ “ನಾನು ಮೋದಿಯವರ ಅಭಿಮಾನಿ’ ಎಂದು ಹೇಳಿಕೊಂಡರೆ ಕಾಂಗ್ರೆಸ್‌ನ ಕೆಲವು ನಾಯಕರು ಅವರನ್ನು “ಹಾವು’, “ದುಷ್ಟ’, “ಚೇಳು’, “ಚಹಾ ಮಾರಾಟಗಾರ’ ಎಂದು ಹೀಯಾಳಿಸುತ್ತಾರೆ ಎಂದು ಟೀಕಿಸಿದ್ದಾರೆ. ಆಹಾರ ಹಣದುಬ್ಬರ ವಿಚಾರದಲ್ಲಿ ಕಾಂಗ್ರೆಸ್‌ನವರು ನಿರಕ್ಷರಕುಕ್ಷಿಗಳಂತೆ ವರ್ತಿಸುತ್ತಾರೆ ಎಂದು ದೂರಿದ್ದಾರೆ.

ದೇಶದಲ್ಲಿ ಹಣದುಬ್ಬರ ಪ್ರಮಾಣ ಶೇ.2.7 ಆಗಿದ್ದರೆ, ಪಾಕಿಸ್ತಾನದಲ್ಲಿ ಶೇ.48.75, ಅಮೆರಿಕದಲ್ಲಿ ಶೇ.5.5, ಯು.ಕೆ.ಯಲ್ಲಿ ಶೇ.8, ರಷ್ಯಾದಲ್ಲಿ ಶೇ.11, ಜರ್ಮನಿಯಲ್ಲಿ ಶೇ.9 ಇದೆ ಎಂದರು. ದೇಶದಲ್ಲಿನ ರಾಜಕೀಯ ವ್ಯವಸ್ಥೆ ಬದಲಾಗಿರುವುದರಿಂದ ಕೆಲವು ರಾಜಕೀಯ ಪಕ್ಷಗಳಿಗೆ ತಮ್ಮ ವಂಶಪಾರಂಪರ್ಯ ಆಡಳಿತ ಕೈತಪ್ಪಲಿದೆ ಎಂಬ ಆತಂಕ ಶುರುವಾಗಿದೆ ಎಂದು ಲೇವಡಿ ಮಾಡಿದ್ದಾರೆ ನಡ್ಡಾ. ಮೋದಿಯವರಿಗಿಂತ ಮೊದಲು ಪ್ರಧಾನಿಯಾಗಿದ್ದವರು ವಿದೇಶ ಪ್ರವಾಸ ಕೈಗೊಂಡಿದ್ದಾಗ ಪಾಕಿಸ್ತಾನ, ಉಗ್ರವಾದದ ಬಗ್ಗೆ ಮಾತನಾಡಲಾಗುತ್ತಿತ್ತು. ಈಗ ಬಾಹ್ಯಾಕಾಶ, ಎಫ್ಡಿಐ, ಕ್ರಯೋಜನಿಕ್‌ ಎಂಜಿನ್‌ ಬಗ್ಗೆ ಚರ್ಚಿಸಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.