ವಿಹೆಚ್ ಪಿ, ಬಜರಂಗದಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ: ಹೆಚ್ ಡಿಕೆ ಟ್ವೀಟ್
ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ
Team Udayavani, Apr 1, 2022, 11:09 AM IST
ಬೆಂಗಳೂರು: ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವ ಹಿಂದೂ ಪರಿಷತ್, ಬಜರಂಗದಳದ ವಿರುದ್ಧ ಆಕ್ರೋಶದಿಂದ ಕೂಡಿದ ಟ್ವೀಟ್ ಗಳನ್ನು ಮಾಡಿದ್ದಾರೆ.
‘ಕರಪತ್ರಗಳನ್ನು ಹಂಚಿ ಸಮಾಜ ಒಡೆಯುತ್ತಿರುವ ವಿಶ್ವ ಹಿಂದೂ ಪರಿಷತ್, ಬಜರಂಗದಳದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವ ಬದಲಾವಣೆಯೂ ಇಲ್ಲ. ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಇಂಥ ಸಂಘಟನೆಗಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ. ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ” ಎಂದು ಬರೆದಿದ್ದಾರೆ.
”ಜಗತ್ತಿಗೆ ಶಾಂತಿ ಸಂದೇಶ ಕೊಟ್ಟ ಕುವೆಂಪು ಅವರು ಜನಿಸಿದ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿ ಹಬ್ಬ-ಹರಿದಿನದಲ್ಲಿ ನೀವು ಮಾಡುತ್ತಿರುವುದೇನು? ಸೂಕ್ಷ್ಮ ಭಾವನೆಗಳನ್ನು ಕೆರಳಿಸಿ ʼಅಶಾಂತಿಯ ಅಶ್ವಮೇಧʼ ನಡೆಸುತ್ತಿದ್ದೀರಿ. ಬೆಂಕಿ ಹಾಕುವುದು, ಕಲ್ಲು ಹೊಡೆಯುವುದು ನನ್ನ ಅಥವಾ ನನ್ನ ಪಕ್ಷದ ಸಂಸ್ಕೃತಿ ಅಲ್ಲ” ಎಂದು ಟ್ವೀಟ್ ನಲ್ಲಿ ಅಭಿಪ್ರಾಯ ಹೊರ ಹಾಕಿದ್ದಾರೆ.
”ನಿಮಗೆ ದೇಶ, ಸಂವಿಧಾನದ ಮೇಲೆ ಗೌರವ ಇಲ್ಲ. ಜನರೆಂದರೆ ನಿಮ್ಮ ಪಾಲಿಗೆ ʼಭಾವನೆಗಳ ದಾಳಗಳುʼ ಮಾತ್ರ. ನಿಜವಾದ ಹಿಂದೂ ಎಂದೂ ಸಮಾಜ ಒಡೆಯಲಾರ. “ಹಿಂದೂ ಎಂದರೆ ಎಲ್ಲರೂ ಒಂದು” ಎನ್ನುವ ಆದರ್ಶ & ಪರಂಪರಾಗತ ನಂಬಿಕೆ. ಈ ನಂಬಿಕೆಯ ಮೇಲೆಯೇ ಭಾರತ ನಿಂತಿದೆ. ಭಾವನೆಗಳನ್ನು ಹೇರಿ ಭಾರತವನ್ನು ಒಡೆಯಲು ನಿಮ್ಮಿಂದ ಸಾಧ್ಯವಿಲ್ಲ” ಎಂದು ಇನ್ನೊಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.