![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Feb 27, 2023, 6:44 PM IST
ಪ್ರಯಾಗ್‌ರಾಜ್: ಬಿಎಸ್‌ಪಿ ಶಾಸಕ ರಾಜುಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿಯೊಬ್ಬರನ್ನು ಫೆಬ್ರವರಿ 24 ರಂದು ಗುಂಡಿಕ್ಕಿ ಹತ್ಯೆಗೈದ ಆರೋಪಿಗಳಲ್ಲಿ ಒಬ್ಬನನ್ನು ಉತ್ತರ ಪ್ರದೇಶ ಪೊಲೀಸರು ಸೋಮವಾರ ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ಪ್ರತ್ಯಕ್ಷದರ್ಶಿ ಉಮೇಶ್ ಪಾಲ್ ಅವರ ಮೇಲೆ ದಾಳಿ ಮಾಡಲು ದಾಳಿಕೋರರು ಬಳಸಿದ ಬಿಳಿ ಬಣ್ಣದ ಎಸ್‌ಯುವಿ ಚಾಲಕ ಅರ್ಬಾಜ್‌ನನ್ನು ಗುಪ್ತಚರ ಮಾಹಿತಿಯ ನಂತರ ಪೊಲೀಸ್ ತಂಡಗಳು ಧೂಮಂಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ನೆಹರೂ ಪಾರ್ಕ್‌ನಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಸುತ್ತುವರೆದಿದ್ದಾರೆ. ಈ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ ಅರ್ಬಾಜ್ ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದ್ದು, ಪೊಲೀಸರ ಗುಂಡಿನ ದಾಳಿಯಲ್ಲಿ ಆತ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದರು ಎಂದು ಅಧಿಕಾರಿ ಹೇಳಿದ್ದಾರೆ.
”ಅರ್ಬಾಜ್ ಜೊತೆಗೆ ಇಬ್ಬರು ಅಥವಾ ಮೂರು ಜನರು ಸ್ಥಳದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ನಾವು ಅವರನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ” ಎಂದರು.
ಉಮೇಶ್ ಪಾಲ್ ಮತ್ತು ಅವರ ಪೊಲೀಸ್ ಭದ್ರತಾ ಸಿಬಂದಿ ಸಂದೀಪ್ ನಿಶಾದ್ ಅವರನ್ನು ಶುಕ್ರವಾರ ಪ್ರಯಾಗ್‌ರಾಜ್‌ನ ಧೂಮಂಗಂಜ್ ಪ್ರದೇಶದಲ್ಲಿನ ಅವರ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆಗೈಯಲಾಗಿತ್ತು. ದಾಳಿಯಲ್ಲಿ ಗಾಯಗೊಂಡಿದ್ದ ಇನ್ನೋರ್ವ ಭದ್ರತಾ ಸಿಬಂದಿ ರಾಘವೇಂದ್ರ ಸಿಂಗ್ ಅವರನ್ನು ಗಂಭೀರ ಸ್ಥಿತಿಯಲ್ಲಿ ಎಸ್‌ಆರ್‌ಎನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರನ್ನು ಭಾನುವಾರ ಲಕ್ನೋಗೆ ಕರೆದೊಯ್ಯಲಾಗಿದೆ.
ಉಮೇಶ್ ಪಾಲ್ ಅವರ ಪತ್ನಿ ಜಯಪಾಲ್ ನೀಡಿದ ದೂರಿನ ಆಧಾರದ ಮೇಲೆ, ದರೋಡೆಕೋರ ರಾಜಕಾರಣಿ ಅತೀಕ್ ಅಹ್ಮದ್, ಆತನ ಸಹೋದರ ಅಶ್ರಫ್, ಪತ್ನಿ ಶಾಯಿಸ್ತಾ ಪರ್ವೀನ್, ಇಬ್ಬರು ಪುತ್ರರು, ಸಹಾಯಕರಾದ ಗುಡ್ಡು ಮುಸ್ಲಿಂ, ಗುಲಾಮ್ ಮತ್ತು ಇತರ ಒಂಬತ್ತು ಮಂದಿಯ ವಿರುದ್ಧ ಧೂಮಂಗಂಜ್ ಪೊಲೀಸ್ ಠಾಣೆಯಲ್ಲಿ (ಪ್ರಯಾಗರಾಜ್) ಪ್ರಕರಣ ದಾಖಲಾಗಿದೆ.
ಹತ್ಯೆಯ ಹಿನ್ನೆಲೆಯಲ್ಲಿ ಪ್ರತಿಪಕ್ಷ ಸಮಾಜವಾದಿ ಪಕ್ಷವು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಕುರಿತು ಪ್ರಶ್ನಿಸಿದ ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಫಿಯಾಗಳನ್ನು ನಾಶಮಾಡುವುದಾಗಿ ವಿಧಾನಸಭೆಯಲ್ಲಿ ಶಪಥ ಮಾಡಿದ್ದರು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.