ವನಿತಾ ಏಷ್ಯಾ ಕಪ್ : ಥಾಯ್ಲೆಂಡ್ 37 ಕ್ಕೆ ಆಲೌಟ್ ; ಭಾರತಕ್ಕೆ ಅಮೋಘ ಜಯ
100 ನೇ ಪಂದ್ಯವಾಡಿದ ಸ್ಮೃತಿ ಮಂಧಾನ
Team Udayavani, Oct 10, 2022, 3:23 PM IST
ಸಿಲ್ಹೆಟ್ (ಬಾಂಗ್ಲಾದೇಶ) : ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿಸೋಮವಾರ ನಡೆದ ಟಿ 20 ವನಿತಾ ಏಷ್ಯಾ ಕಪ್ ಪಂದ್ಯದಲ್ಲಿ ಭಾರತ ತಂಡ ಅಮೋಘ ಬೌಲಿಂಗ್ ದಾಳಿ ನಡೆಸಿ ಥಾಯ್ಲೆಂಡ್ ಅನ್ನು 15.1 ಓವರ್ಗಳಲ್ಲಿ ಕೇವಲ 37 ರನ್ಗಳಿಗೆ ಆಲೌಟ್ ಮಾಡಿ ಭರ್ಜರಿ ಗೆಲುವು ದಾಖಲಿಸಿದೆ.
ವಿಶ್ವದರ್ಜೆಯ ಭಾರತೀಯ ಬೌಲಿಂಗ್ ನಲ್ಲಿ ಸ್ನೇಹ ರಾಣಾ ಅವರು ಮೂರು ವಿಕೆಟ್ಗಳ ಸಾಧನೆ ಮಾಡಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ರಾಜೇಶ್ವರಿ ಗಾಯಕ್ವಾಡ್ ಮತ್ತು ದೀಪ್ತಿ ಶರ್ಮಾ ತಲಾ ಎರಡು ವಿಕೆಟ್ ಕಬಳಿಸಿ ಥಾಯ್ಲೆಂಡ್ ತಂಡ 37 ರನ್ಗಳಿಗೆ ಆಲೌಟ್ ಮಾಡಲು ಸಹಾಯ ಮಾಡಿತು.ಥಾಯ್ಲೆಂಡ್ ತಂಡದಲ್ಲಿ ನನ್ನಪತ್ ಕೊಂಚರೊಯೆಂಕಾಯ್ (12) ಗರಿಷ್ಠ ರನ್ ಗಳಿಸಿದರು.
ಇದನ್ನೂ ಓದಿ : ಆಸ್ಟ್ರೇಲಿಯಾಕ್ಕೆ ನಟಿ ಊರ್ವಶಿ ರೌಟೇಲಾ; ಮತ್ತೆ ಟ್ರೋಲ್ ಆದ ರಿಷಭ್ ಪಂತ್ !
ಸಾಮಾನ್ಯ ಗುರಿ ಬೆನ್ನಟ್ಟಿದ ಭಾರತದ ವನಿತೆಯರು ಕೇವಲ 6 ಓವರ್ ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 40 ರನ್ ಗಳಿಸಿ ಅಮೋಘ ಗೆಲುವು ಸಾಧಿಸಿದರು.
ಪಾಕಿಸ್ಥಾನವನ್ನು ಸೋಲಿಸಿದ್ದ ಥಾಯ್ಲೆಂಡ್ ಕಳೆದ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದ್ದು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಭಾರತ ಅಗ್ರಸ್ಥಾನದಲ್ಲಿದೆ.ಪಾಕಿಸ್ಥಾನ ಭಾರತಕ್ಕೆ ಸೋಲಿನ ಶಾಕ್ ನೀಡಿತ್ತು.
ಭಾರತ ತಂಡದ ನಾಯಕಿ, ಆರಂಭಿಕ ಆಟಗಾರ್ತಿ ಮತ್ತು ಸ್ಮೃತಿ ಮಂಧಾನ ಟಿ20 ಕ್ರಿಕೆಟ್ನಲ್ಲಿ 100 ಪಂದ್ಯಗಳನ್ನು ಪೂರೈಸಿದ ಎರಡನೇ ಭಾರತೀಯ ಆಟಗಾರ್ತಿ ಎನಿಸಿಕೊಂಡರು. ಹರ್ಮನ್ಪ್ರೀತ್ ಕೌರ್ ಅವರು 100ಕ್ಕಿಂತ ಹೆಚ್ಚಿನ ಟಿ20 ಪಂದ್ಯಗಳನ್ನು ಆಡಿದ ಏಕೈಕ ಭಾರತದ ಆಟಗಾರ್ತಿ ಎನಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
3rd ODI ವನಿತಾ ಏಕದಿನ: ವಿಂಡೀಸ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ಗೆ ಭಾರತ ಸಜ್ಜು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Pro Kabaddi League: ಯುಪಿ ಯೋಧಾಸ್,ಪಾಟ್ನಾ ಪೈರೇಟ್ಸ್ ಸೆಮಿಫೈನಲಿಗೆ
IND Vs AUS ಬಾಕ್ಸಿಂಗ್ ಡೇ ಟೆಸ್ಟ್: ಆಸ್ಟ್ರೇಲಿಯ ರನ್ ಓಟಕ್ಕೆ ಬುಮ್ರಾ ಬ್ರೇಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.