ವನಿತಾ ಟಿ20 ತ್ರಿಕೋನ ಸರಣಿ: ಭಾರತ ತಂಡದ ಅಜೇಯ ಅಭಿಯಾನ
Team Udayavani, Jan 30, 2023, 11:46 PM IST
ಈಸ್ಟ್ ಲಂಡನ್ (ದಕ್ಷಿಣ ಆಫ್ರಿಕಾ): ಭಾರತ ತಂಡ ವನಿತಾ ಟಿ20 ತ್ರಿಕೋನ ಸರಣಿಯಲ್ಲಿ ಅಜೇಯ ಓಟ ಕಾಯ್ದುಕೊಂಡು ಫೈನಲ್‌ಗೆ ಲಗ್ಗೆ ಇರಿಸಿದೆ. ಪ್ರಶಸ್ತಿ ಸಮರ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ಗುರುವಾರ ಈಸ್ಟ್ ಲಂಡನ್‌ನಲ್ಲಿ ನಡೆಯಲಿದೆ.
ಈ ನಡುವೆ ಸೋಮವಾರ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಲೀಗ್ ಪಂದ್ಯ ಭಾರತದ ಫೈನಲ್ ಅಭ್ಯಾಸಕ್ಕೆ ಮೀಸಲಾಯಿತು. ಇದನ್ನು ಹರ್ಮನ್‌ಪ್ರೀತ್ ಕೌರ್ ಪಡೆ 8 ವಿಕೆಟ್‌ಗಳಿಂದ ಜಯಿಸಿತು.
ವೆಸ್ಟ್ ಇಂಡೀಸ್ 94
ಮೊದಲು ಬ್ಯಾಟಿಂಗ್ ನಡೆಸಿದ ವೆಸ್ಟ್ ಇಂಡೀಸ್ 6 ವಿಕೆಟಿಗೆ ಕೇವಲ 94 ರನ್ ಮಾಡಿದರೆ, ಭಾರತ 13.5 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 95 ರನ್ ಗಳಿಸಿತು. ಘಾತಕ ಬೌಲಿಂಗ್ ದಾಳಿ ಸಂಘಟಿಸಿದ ದೀಪ್ತಿ ಶರ್ಮ 11 ರನ್ನಿಗೆ 3 ವಿಕೆಟ್ ಕಿತ್ತರು. ಅವರೆಸೆದ 4 ಓವರ್‌ಗಳಲ್ಲಿ 2 ಓವರ್ ಮೇಡನ್ ಆಗಿತ್ತು. ಪೂಜಾ ವಸ್ತ್ರಾಕರ್ 19 ರನ್ ನೀಡಿ 2 ವಿಕೆಟ್ ಉರುಳಿಸಿದರು. ರಾಜೇಶ್ವರಿ ಗಾಯಕ್ವಾಡ್ ಬೌಲಿಂಗ್ ಕೂಡ ಆಕರ್ಷಕವಾಗಿತ್ತು (4-1-9-1).
ಚೇಸಿಂಗ್ ವೇಳೆ ಜೆಮಿಮಾ ರೋಡ್ರಿಗಸ್ 42, ಹರ್ಮನ್‌ಪ್ರೀತ್ ಕೌರ್ 32 ರನ್ ಮಾಡಿ ಅಜೇಯರಾಗಿ ಉಳಿದರು.
ಒಂದು ಪಂದ್ಯ ಮಳೆಪಾಲು
ವೆಸ್ಟ್ ಇಂಡೀಸ್ ಆಡಿದ ನಾಲ್ಕೂ ಪಂದ್ಯಗಳಲ್ಲಿ ಸೋಲನುಭವಿಸಿತು. ಭಾರತ-ದಕ್ಷಿಣ ಆಫ್ರಿಕಾ ನಡುವಿನ ದ್ವಿತೀಯ ಸುತ್ತಿನ ಪಂದ್ಯ ಮಳೆಯಿಂದ ರದ್ದುಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.