Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ
ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು 8 ವಿಕೆಟ್‌ಗಳಿಂದ ಮಣಿಸಿದ ದಕ್ಷಿಣ ಆಫ್ರಿಕಾ ತಂಡ
Team Udayavani, Oct 17, 2024, 11:42 PM IST
ದುಬೈ: ಐಸಿಸಿ ಮಹಿಳಾ ಟಿ 20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆರು ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ತಂಡ ಬಗ್ಗು ಬಡಿದು ದಕ್ಷಿಣ ಆಫ್ರಿಕಾ ವನಿತಾ ತಂಡ ಫೈನಲ್ ಪ್ರವೇಶಿಸಿದೆ.
ಗುರುವಾರ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಬಲಿಷ್ಠ ಆಸ್ಟ್ರೇಲಿಯಾವನ್ನು 8 ವಿಕೆಟ್‌ಗಳಿಂದ ಮಣಿಸಿ ದಕ್ಷಿಣ ಆಫ್ರಿಕಾ ತಂಡ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಫೈನಲ್‌ಗೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿದೆ. ದಕ್ಷಿಣ ಆಫ್ರಿಕಾ ಪರ ಬ್ಯಾಟಿಂಗ್‌ನಲ್ಲಿ ಮಿಂಚಿದ ಆ್ಯನೆಕ್ ಬಾಶ್ ಸಿಡಿಲಬ್ಬರದ ಅರ್ಧಶತಕ (74ರನ್) ಸಿಡಿಸಿದರೆ, ನಾಯಕಿ ಲಾರಾ ವೊಲ್ವಾರ್ಡ್ಟ್ ಕೂಡ 42 ರನ್‌ಗಳಿಸಿ ಉಪಯುಕ್ತ ಇನ್ನಿಂಗ್ಸ್ ಆಡಿದರು.
2009ರ ನಂತರ ಮೊದಲ ಬಾರಿ ವಿಫಲ
ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ತಂಡ ಕಳೆದ ಆವೃತ್ತಿಯ ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡರೆ, ಇತ್ತ ಟೂರ್ನಿಯಲ್ಲಿ ಭಾರತವನ್ನೂ ಸೋಲಿಸಿ ಅಜೇಯ ತಂಡವಾಗಿ ಸೆಮಿಫೈನಲ್‌ಗೆ ಪ್ರವೇಶಿಸಿದ ಆಸ್ಟ್ರೇಲಿಯಾ ತಂಡ 2009ರ ನಂತರ ಇದೇ ಮೊದಲ ಬಾರಿಗೆ ಫೈನಲ್ ಸುತ್ತಿಗೆ ಅರ್ಹತೆ ಪಡೆಯುವಲ್ಲಿ ವಿಫಲವಾಯಿತು. ಉಳಿದಂತೆ ಇದುವರೆಗೆ ನಡೆದಿರುವ 8 ಆವೃತ್ತಿಗಳ 7 ರಲ್ಲಿ ಆಸ್ಟ್ರೇಲಿಯಾ ತಂಡ ಫೈನಲ್ ನಲ್ಲಿ ಆಡಿತ್ತು ಆದರೆ ಈ ಬಾರಿ ಆಸೀಸ್ ಪ್ರಯಾಣ ಸೆಮಿಫೈನಲ್‌ನಲ್ಲೇ ಅಂತ್ಯಗೊಂಡಿದೆ.
ಆಸೀಸ್ ಆಮೆಗತಿಯ ಬ್ಯಾಟಿಂಗ್
ಉಭಯ ತಂಡಗಳ ನಡುವೆ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ನಿಗದಿತ 20 ಓವರ್‌ನಲ್ಲಿ 5 ವಿಕೆಟ್ ನಷ್ಟಕ್ಕೆ 134 ರನ್ ಗೆ ಕಟ್ಟಿ ಹಾಕಿತು. ತಂಡದ ಪರ ಬೆತ್ ಮೂನಿ 44 ರನ್‌ಗಳಿಸಿದ್ದರೆ, ಆಲ್ರೌಂಡರ್ ಎಲ್ಲಿಸ್ ಪೆರ್ರಿ 31 ರನ್ ಮಾಡಿದರು. ನಾಯಕಿ ಮೆಕ್‌ಗ್ರಾಥ್ 27 ರನ್ ಗಳಿಸಿದರು.
The Proteas have pulled off a stunning heist in Dubai to enter the final 🤩#AUSvSA #T20WorldCup #WhateverItTakes pic.twitter.com/ztK11WHlxD
— ICC (@ICC) October 17, 2024
ಬಾಷ್- ಲಾರಾ ಗೆಲುವಿನ ಜೊತೆಯಾಟ
ಇನ್ನು 134 ರನ್‌ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಮೊದಲ ವಿಕೆಟ್‌ಗೆ 25 ರನ್‌ಗಳ ಜೊತೆಯಾಟ ಸಿಕ್ಕಿತು. ಆ ಬಳಿಕ ಜೊತೆಯಾದ ನಾಯಕಿ ಲಾರಾ ವೊಲ್ವಾರ್ಡ್ಟ್ ಹಾಗೂ ಅನ್ನೆಕೆ ಬಾಷ್ 96 ರನ್ ಜೊತೆಯಾಟದ ಮೂಲಕ ತಂಡದ ಗೆಲುವು ಖಚಿತಪಡಿಸಿದರು. ಈ ವೇಳೆ ನಾಯಕಿ ಲಾರಾ 37 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 42 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, 48 ಎಸೆತಗಳಲ್ಲಿ 8 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 74 ರನ್ ಬಾರಿಸಿದ ಬಾಷ್ ತಂಡ ಫೈನಲ್‌ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದರು.
ನಾಳೆ 2ನೇ ಸೆಮಿಫೈನಲ್
ಇದೀಗ ಸತತ ಎರಡನೇ ಬಾರಿಗೆ ಫೈನಲ್ ಗೇರಿರುವ ದಕ್ಷಿಣ ಆಫ್ರಿಕಾ ತಂಡ ನಾಳೆ (ಅ.18) ನಡೆಯಲ್ಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ವಿಜೇತ ತಂಡ ಅ. 20ರಂದು ನಡೆಯಲ್ಲಿರುವ ಫೈನಲ್‌ನಲ್ಲಿ ಎದುರಿಸಲಿದೆ. ನಾಳೆ ವೆಸ್ಟ್ ಇಂಡೀಸ್ ಹಾಗೂ ನ್ಯೂಜಿಲೆಂಡ್ ನಡುವೆ ಎರಡನೇ ಸೆಮಿಫೈನಲ್ ಪಂದ್ಯ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.