ದೇವತೆಗಳಿಗೆ ಹಿಂದೂ-ಮುಸ್ಲಿಮರಿಂದ ಜಲಾಭಿಷೇಕ
Team Udayavani, Apr 6, 2022, 2:53 PM IST
ಆಲಮಟ್ಟಿ: ಮಳೆಗಾಲದ ಅವಧಿಯಲ್ಲಿ ಉತ್ತಮ ಮಳೆಯಾಗಿ ಉತ್ತಮ ಬೆಳೆ ಬರಲಿ ಎಂದು ಹಾರೈಸಿ ಪ್ರತಿ ವರ್ಷದಂತೆ ಈ ವರ್ಷವೂ ಪಟ್ಟಣದ ಎಲ್ಲ ದೇವರುಗಳಿಗೆ ಜಲಾಭಿಷೇಕ ಮಾಡಿಸಲಾಯಿತು.
ಹಿಂದೂ-ಮುಸ್ಲಿಮ ಪುರುಷರು, ಮಹಿಳೆಯರು, ಮಕ್ಕಳು ಸೇರಿದಂತೆ ವಯೋಮಾನ ಭೇದವಿಲ್ಲದೇ ಲಿಂಗಭೇದವಿಲ್ಲದೇ ಎಲ್ಲ ಭಕ್ತರು ಸೇರಿಕೊಂಡು ತಾವು ಸ್ನಾನ ಮಾಡಿ ತಾವು ಉಟ್ಟಿರುವ ತೊಯ್ದ ಬಟ್ಟೆಗಳನ್ನುಟ್ಟುಕೊಂಡು ಇಲ್ಲಿನ ಧಾರ್ಮಿಕ ಕೇಂದ್ರಗಳಾಗಿರುವ ದೇವಸ್ಥಾನ ಮತ್ತು ದರ್ಗಾಗಳಿಗೆ ತೆರಳಿ ಜಲಾಭಿಷೇಕ ಮಾಡಿದ್ದು ವಿಶೇಷವಾಗಿತ್ತು.
ಇಲ್ಲಿ ಜಾತಿ-ಮತ ಭೇದವಿಲ್ಲದೇ ಎಲ್ಲ ಧರ್ಮೀಯರೂ ಸೇರಿಕೊಂಡು ಎಲ್ಲ ಜಾತ್ರೆ ಹಾಗೂ ದರ್ಗಾಗಳ ಉರೂಸ್ ಗಳಲ್ಲಿ ಭಾಗವಹಿಸಿ ತನುಮನ ಧನದಿಂದ ಸೇವೆ ಸಲ್ಲಿಸುತ್ತಾರೆ. ದೇವಸ್ಥಾನದಲ್ಲಿ ಪ್ರತಿ ಬಾರಿಯೂ ಕೆಲ ಗ್ರಾಮಗಳಲ್ಲಿ ಮಂಗಳವಾರ ಮತ್ತು ಶುಕ್ರವಾರಗಳನ್ನು 5 ವಾರ ಇನ್ನು ಕೆಲ ಗ್ರಾಮಗಳಲ್ಲಿ 11 ವಾರಗಳನ್ನು ಪಾಲಿಸುತ್ತಿದ್ದರೆ ಕೆಲ ಗ್ರಾಮಗಳಲ್ಲಿ ಮಂಗಳವಾರ ಅಥವಾ ಶುಕ್ರವಾರ ಒಂದೇ ಆಚರಿಸತ್ತಾರೆ.
ಈ ದಿನಗಳಂದು ಮನೆಗಳಲ್ಲಿ ಯಾವುದೇ ಪದಾರ್ಥಗಳನ್ನು ಕರಿಯುವುದಿಲ್ಲ. ರೊಟ್ಟಿ, ಚಪಾತಿಗಳನ್ನೂ ಮಾಡುವುದಿಲ್ಲ. ಯಾರೂ ಕೂಲಿ ಕೆಲಸಕ್ಕೆ ಹೋಗುವುದಿಲ್ಲ. ಎಲ್ಲ ನಾಗರಿಕರು ದೇವರ ಹೆಸರಿನಲ್ಲಿ ಧ್ಯಾನ ಮಾಡುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.