Wrestlers; ಬ್ರಿಜ್ ಭೂಷಣ್ ಶರಣ್ ಸಿಂಗ್ ಗೆ ಸಮನ್ಸ್ ನೀಡಿದ ದೆಹಲಿ ಕೋರ್ಟ್
ಸಾಕಷ್ಟು ಸಾಕ್ಷ್ಯಗಳಿವೆ.. ನ್ಯಾಯಾಲಯಕ್ಕೆ ಹಾಜರಾಗಿ
Team Udayavani, Jul 7, 2023, 4:14 PM IST
ಹೊಸದಿಲ್ಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಲ್ಲಿ ಬಿಜೆಪಿ ಸಂಸದ ಮತ್ತು ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯ ಶುಕ್ರವಾರ ಸಮನ್ಸ್ ನೀಡಿದ್ದು, ಆರೋಪದ ವಿರುದ್ಧ ಮುಂದುವರೆಯಲು ಸಾಕಷ್ಟು ಸಾಕ್ಷ್ಯಗಳಿವೆ ಎಂದು ಹೇಳಿದೆ.
ಆರೋಪಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACMM) ಹರ್ಜೀತ್ ಸಿಂಗ್ ಜಸ್ಪಾಲ್ ಅವರು ಜುಲೈ 18 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಬ್ರಿಜ್ ಭೂಷಣ್ ಅವರಿಗೆ ಸೂಚಿಸಿದರು.
ಭಾರತ ಕುಸ್ತಿ ಫೆಡರೇಶನ್‌ನ ಅಮಾನತುಗೊಂಡಿರುವ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್‌ಗೂ ನ್ಯಾಯಾಲಯ ಸಮನ್ಸ್ ನೀಡಿದೆ.
ಆರು ಬಾರಿ ಸಂಸದರಾಗಿರುವ ಬ್ರಿಜ್ ಭೂಷಣ್ ವಿರುದ್ಧ ನಗರ ಪೊಲೀಸರು ಜೂನ್ 15 ರಂದು ಸೆಕ್ಷನ್ 354, 354 ಎ (ಲೈಂಗಿಕ ಕಿರುಕುಳ), 354 ಡಿ (ಹಿಂಬಾಲಿಸುವಿಕೆ) ಮತ್ತು 506 (ಕ್ರಿಮಿನಲ್ ಬೆದರಿಕೆ)ಅಡಿಯಲ್ಲಿ ಆರೋಪಪಟ್ಟಿ ಸಲ್ಲಿಸಿದ್ದರು.
ತೋಮರ್ ವಿರುದ್ಧ IPC ಯ ಸೆಕ್ಷನ್ 109, ಅಪರಾಧಕ್ಕೆ ಕುಮ್ಮಕ್ಕು ನೀಡುವುದು, 354, 354A ಮತ್ತು 506 (ಅಪರಾಧ ಬೆದರಿಕೆ) ಅಡಿಯಲ್ಲಿ ಅಪರಾಧಗಳ ಆರೋಪಪಟ್ಟಿ ಸಲ್ಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.